ರಾಮನಗರ; ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಸೆರೆ
'ಅಭಿಮನ್ಯು' ನೇತೃತ್ವದಲ್ಲಿ ಕಾರ್ಯಾಚರಣೆ

'ಅಭಿಮನ್ಯು' ನೇತೃತ್ವದಲ್ಲಿ ಕಾರ್ಯಾಚರಣೆ
ರಾಮನಗರ: ಒಂದು ವಾರದಲ್ಲಿ ಇಬ್ಬರನ್ನು ಬಲಿ ಪಡೆದಿದ್ದ 45 ವರ್ಷದ ಕಾಡಾನೆಯನ್ನು ಚನ್ನಪಟ್ಟಣ ತಾಲೂಕಿನ ತೆಂಗಿನಕಲ್ಲು ಕಾಡು ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದ ನಾಲ್ಕು ದಿನಗಳ ಹಿಂದೆ ಕಾಡಾನೆ ಸೆರೆಗೆ ಮತ್ತಿಗೋಡು ಆನೆ ಶಿಬಿರದಿಂದ ಆಗಮಿಸಿದ್ದ ಅಭಿಮನ್ಯು ನೇತೃತ್ವದ 5 ಸಾಕಾನೆಗಳಾದ ಭೀಮ, ಅರ್ಜುನ, ಮಹೇಂದ್ರ, ಶ್ರೀಕಂಠ ನೆರವಿನಿಂದ ಸಿಬ್ಬಂದಿ ಆನೆ ಸೆರೆಗೆ ಮೂರು ದಿನಗಳಿಂದ ಸತತ ಪ್ರಯತ್ನ ನಡೆಸುತ್ತಿದ್ದರು.
ಇಬ್ಬರ ಬಲಿ ಪಡೆದಿದ್ದ ಕಾಡಾನೆ
ಕಾಡಾನೆ ದಾಳಿಗೆ ಮೇ 30ರಂದು ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದ ರೈತ ಕಾಳಯ್ಯ ಹಾಗೂ ಜೂನ್ 3ರಂದು ಚನ್ನಪಟ್ಟಣ ತಾಲೂಕಿನ ವಿರುಪಸಂದ್ರದಲ್ಲಿ ಮಾವಿನ ತೋಟದ ಕಾವಲುಗಾರ ವೀರಭದ್ರಯ್ಯ ಎಂಬುವರು ಮೃತಪಟ್ಟಿದ್ದರು.
Next Story