ಜೂ.10: ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮ

ಮಂಗಳೂರು, ಜೂ.8: ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ ಮತ್ತು ಜಿಲ್ಲಾ ವೆನ್ಲಾಕ್ ಆಸ್ಪತ್ರೆ ವತಿಯಿಂದ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮ ಜೂ.10ರಂದು ಬೆಳಗ್ಗೆ 9:30ರಿಂದ ವೆನ್ಲಾಕ್ ಆಸ್ಪತ್ರೆಯ ಆರ್‌ಎಪಿಸಿಸಿ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾ ವೈದ್ಯಾಧಿಕಾರಿ ಡಾ.ಸದಾಶಿವ ಶಾನ್‌ಭೋಗ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರೆಡ್‌ಕ್ರಾಸ್ ಜಿಲ್ಲಾ ಘಟಕದ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಖಜಾಂಜಿ ಮೋಹನ್ ಶೆಟ್ಟಿ.ಕೆ., ಉಪ ಸಮಿತಿ ಚೇರ್ಮನ್‌ಗಳಾದ ಡಾ.ಬಿ.ಸಚ್ಚಿದಾನಂದ ರೈ, ಪಿ.ಬಿ.ಹರಿಪ್ರಸಾದ್ ರೈ, ಡಾ.ಕೆ.ಆರ್.ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಯೂತ್ ರೆಡ್‌ಕ್ರಾಸ್‌ನ ನಿರ್ದೇಶಕ ಸಚೇತ್ ಸುವರ್ಣ. ಯೇನೆಪೊಯ ಡೀಮ್ಡ್ ವಿ.ವಿ.ಯ ನೋಡಲ್ ಅಧಿಕಾರಿ ನಿತ್ಯಶ್ರೀ ಬಿ.ವಿ., ಯೋಜನಾಧಿಕಾರಿ ಜ್ಯೋತಿ ತರಬೇತಿ ನೀಡಲಿದ್ದಾರೆ ಎಂದು ರೆಡ್‌ಕ್ರಾಸ್ ಸೊಸೈಟಿಯ ಕಾರ್ಯದರ್ಶಿ ಸಂಜಯ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story