Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸರಕಾರಿ ಕಚೇರಿಗಳಿಗೆ ಬಾಡಿಗೆ...

ಸರಕಾರಿ ಕಚೇರಿಗಳಿಗೆ ಬಾಡಿಗೆ ನೀಡುವುದನ್ನು ನಿಯಂತ್ರಿಸಿ

-ಕೆ.ಎಸ್. ನಾಗರಾಜ್ ಹನುಮಂತನಗರ, ಬೆಂಗಳೂರು-ಕೆ.ಎಸ್. ನಾಗರಾಜ್ ಹನುಮಂತನಗರ, ಬೆಂಗಳೂರು8 Jun 2023 6:34 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ಮಾನ್ಯರೇ,

ರಾಜ್ಯದ ಹಲವು ಇಲಾಖೆಗಳಲ್ಲಿನ ಅನೇಕ ಕಚೇರಿಗಳು ಬಾಡಿಗೆಗೆ ಕಟ್ಟಡಗಳಲ್ಲಿ ಕಚೇರಿಯನ್ನು ನಡೆಸುತ್ತಿವೆೆ. ಕಂದಾಯ ಇಲಾಖೆ ಒಂದರಲ್ಲಿಯೇ ಹಲವಾರು ಕೋಟಿ ರೂ.ಗಳ ಬಾಡಿಗೆಯನ್ನು ಪ್ರತೀವರ್ಷ ಪಾವತಿಸಲಾಗುತ್ತಿದೆ. ಇದೇ ರೀತಿಯಲ್ಲಿ ಹಿಂದುಳಿದ ವರ್ಗದ ಮತ್ತು ದಲಿತರ ಮಕ್ಕಳಿಗೆ ಮೀಸಲಿರುವ ವಸತಿ ನಿಲಯಗಳನ್ನು ಸಹ ಬಾಡಿಗೆಗೆ ಪಡೆದು ಅಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ. ಇನ್ನೂ ಇತರ ಅನೇಕ ಇಲಾಖೆಗಳಲ್ಲಿ ಸ್ವಂತ ಕಟ್ಟಡವಿಲ್ಲದೆ ಬಾಡಿಗೆ ಕಟ್ಟಡದಲ್ಲಿ ಕಚೇರಿ ಕೆಲಸ ನಿಭಾಯಿಸಲಾಗುತ್ತಿದೆ. ಒಂದು ಅಂದಾಜಿನ ಪ್ರಕಾರ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಕಟ್ಟಡಗಳ ಬಾಡಿಗೆಗೆ 500ರಿಂದ 600 ಕೋಟಿ ರೂ.ಗಳ ತನಕ ವ್ಯಯ ಮಾಡಲಾಗುತ್ತಿದೆ.
ಈಗ ರಾಜ್ಯದಲ್ಲಿ ಆಡಳಿತ ನಡೆಸುವ ಹೊಸ ಸರಕಾರ ಕೂಡಲೇ ಬಾಡಿಗೆ ಕೊಟ್ಟು ಕಚೇರಿಗಳನ್ನು ನಿರ್ವಹಿಸುತ್ತಿರುವ ಕಟ್ಟಡಗಳ ಮಾಹಿತಿ ಮತ್ತು ಬಾಡಿಗೆ ಮೊತ್ತದ ವಿವರವನ್ನು ಪಡೆದುಕೊಳ್ಳಬೇಕು. ಸರಕಾರದ ಅಧೀನದಲ್ಲಿ ಸಾವಿರಾರು ಎಕರೆ ಜಮೀನು, ಸಾವಿರಾರು ಸ್ಥಿರಾಸ್ತಿಗಳು ತಾಲೂಕು, ಜಿಲ್ಲೆ ಮತ್ತು ನಗರ ಮಟ್ಟದಲ್ಲಿ ಇರುತ್ತದೆ. ಇಂತಹ ಸ್ಥಳಗಳಲ್ಲಿ ಸರಕಾರ ಸ್ವಂತ ಕಟ್ಟಡವನ್ನು ಮಾಡಿಕೊಂಡು ಬಾಡಿಗೆ ನೀಡುವುದನ್ನು ತಪ್ಪಿಸಬೇಕು.
ಕೆಎಸ್‌ಆರ್‌ಟಿಸಿ ಮತ್ತು ಬಿಟಿಎಸ್ ನಿಗಮಗಳಲ್ಲಿ ಬೆಂಗಳೂರು ನಗರವೂ ಸೇರಿದಂತೆ ಅನೇಕ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಬಸ್ ನಿಲ್ದಾಣಗಳಲ್ಲಿ ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸಿದ್ದಾರೆ. ಇವುಗಳಿಗಾಗಿ ನೂರಾರು ಕೋಟಿ ರೂ.ಗಳನ್ನು ಖರ್ಚು ಮಾಡಿದ್ದಾರೆ. ಹಲವಾರು ವರ್ಷಗಳಾದರೂ ಅನೇಕ ಕಟ್ಟಡಗಳು ಬಾಡಿಗೆಗೆ ಉಪಯೋಗವಾಗದೆ ಧೂಳು ಮುಚ್ಚಿಕೊಂಡಿವೆ. ಇವುಗಳ ನಿರ್ವಹಣೆಗೂ ಸಂಸ್ಥೆಯಿಂದಲೇ ಹಣವನ್ನು ಪಾವತಿಸಬೇಕಾಗಿದೆ. ಹಲವಾರು ಬಾರಿ ವಾಣಿಜ್ಯ ಕಟ್ಟಡಗಳಲ್ಲಿರುವ ಅಂಗಡಿಗಳಿಗೆ ಟೆಂಡರ್ ಕರೆದರೂ ನಿಗಮದ ದರವನ್ನು ಒಪ್ಪದ ಗ್ರಾಹಕರು ಯಾರೂ ಬಾಡಿಗೆಗೆ ಸ್ಥಳವನ್ನು ಪಡೆಯಲು ಬಂದಿಲ್ಲ. ಮಾನ್ಯ ಸಾರಿಗೆ ಸಚಿವರು ಈ ನಿಟ್ಟಿನಲ್ಲಿ ವಿಶೇಷ ಗಮನವನ್ನು ಹರಿಸಿ ಖಾಲಿ ಇರುವ ಕೆಎಸ್‌ಆರ್‌ಟಿಸಿ ಮತ್ತು ಇದರ ಸಮೂಹ ಸಂಸ್ಥೆಗಳ ವಾಣಿಜ್ಯ ಕಟ್ಟಡಗಳನ್ನು ಗ್ರಾಹಕರಿಗೆ ಹೊರೆಯಾಗದ, ಸಂಸ್ಥೆಗೂ ನಷ್ಟವಾಗದ ರೀತಿಯಲ್ಲಿ ಎಚ್ಚರಿಕೆ ವಹಿಸಿ ಬಾಡಿಗೆಗೆ ನೀಡಿದರೆ ಇದರಿಂದ ಸಾಕಷ್ಟು ಆದಾಯ ಸಂಸ್ಥೆಗೆ ಬರುತ್ತದೆ. ರಾಜ್ಯ ಸರಕಾರದ ಉಚಿತ ಯೋಜನೆಗಳಿಗೆ ಈ ಮೊತ್ತವನ್ನೂ ಬಳಸಿ ಒಂದಷ್ಟು ಹೊರೆಯನ್ನು ತಗ್ಗಿಸಬಹುದು.
ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಕಾರು ಮತ್ತು ಇತರ ವಾಹನಗಳನ್ನು ಸಹ ಬಾಡಿಗೆಗೆ ಪಡೆದು ಅಧಿಕಾರಿಗಳ ಉಪಯೋಗಕ್ಕೆ ನೀಡುತ್ತಾರೆ. ಈ ವಾಹನಗಳಿಗೆ ಒಂದು ವರ್ಷದಲ್ಲಿ ನೀಡುವ ಬಾಡಿಗೆಯನ್ನು ಒಟ್ಟುಗೂಡಿಸಿದರೆ ಸರಕಾರವೇ ಸ್ವಂತ ವಾಹನವನ್ನು ಖರೀದಿಸಬಹುದು. ಈ ನಿಟ್ಟಿನಲ್ಲಿಯೂ ಸರಕಾರ ಗಂಭೀರವಾಗಿ ಚಿಂತಿಸಲಿ. ಮುಂದಿನ ಐದು ವರ್ಷದ ಅವಧಿಯಲ್ಲಿ ರಾಜ್ಯ ಸರಕಾರ ಕನಿಷ್ಠ ಪಕ್ಷ ಕಂದಾಯ ಇಲಾಖೆ ಮತ್ತು ಸಮಾಜ ಇಲಾಖೆಯ ವಸತಿ ನಿಲಯಗಳನ್ನು ಬಾಡಿಗೆ ರಹಿತವಾದ ಸರಕಾರಿ ಕಟ್ಟಡಗಳಲ್ಲಿಯೇ ಕಾರ್ಯನಿರ್ವಹಿಸುವಂತಹ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿ ಮುಂದಿನ ಸರಕಾರಗಳಿಗೆ ಮಾದರಿಯಾಗಲಿ.
 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
-ಕೆ.ಎಸ್. ನಾಗರಾಜ್ ಹನುಮಂತನಗರ, ಬೆಂಗಳೂರು
-ಕೆ.ಎಸ್. ನಾಗರಾಜ್ ಹನುಮಂತನಗರ, ಬೆಂಗಳೂರು
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X