Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು | ಕಲುಷಿತ ನೀರು ಸೇವನೆ; 118...

ಬೆಂಗಳೂರು | ಕಲುಷಿತ ನೀರು ಸೇವನೆ; 118 ಮಂದಿ ಅಸ್ವಸ್ಥ

9 Jun 2023 10:32 AM IST
share
ಬೆಂಗಳೂರು | ಕಲುಷಿತ ನೀರು ಸೇವನೆ; 118 ಮಂದಿ ಅಸ್ವಸ್ಥ

ಬೆಂಗಳೂರು: ಕಲುಷಿತ ನೀರು ಸೇವನೆಯಿಂದ ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಚೂಡಸಂದ್ರದಲ್ಲಿರುವ ಮಹಾವೀರ್‌ ರಾರ‍ಯಂಚೆಸ್‌ ಅಪಾರ್ಟ್‌ಮೆಂಟ್‌ನ 118 ಮಂದಿ ನಿವಾಸಿಗಳು ಅಸ್ವಸ್ಥರಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ಪೈಕಿ ನಾಲ್ಕು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಅಸ್ವಸ್ಥಗೊಂಡಿದ್ದ ನಾಲ್ಕು ಮಕ್ಕಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರಲ್ಲಿ ಇಬ್ಬರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ವಾಂತಿ, ಭೇದಿಯಿಂದ ನರಳುತ್ತಿರುವ ನಿವಾಸಿಗಳಿಗೆ ಚಿಕಿತ್ಸೆ ನೀಡಲು, ಅಪಾರ್ಟ್‌ಮೆಂಟ್‌ ಆವರಣದಲ್ಲಿಯೇ ಬಿಬಿಎಂಪಿ ತಾತ್ಕಾಲಿಕ ಕ್ಲಿನಿಕ್‌ ತೆರೆದಿದೆ. ನಿವಾಸಿಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಸಲುವಾಗಿ ವೈದ್ಯರ ತಂಡವನ್ನು ನಿಯೋಜಿಸಿದೆ. ಜತೆಗೆ ಆ್ಯಂಬುಲೆನ್ಸ್‌ ಕೂಧಿಡ ಒದಗಿಸಲಾಗಿದೆ.

ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಶುದ್ಧ ನೀರು ಒದಗಿಸದ ಬಿಲ್ಡರ್‌ ವಿರುದ್ಧ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘವು ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದೆ. ಅಲ್ಲದೆ, ಬಿಬಿಎಂಪಿಯ ಆರೋಗ್ಯ ವಿಭಾಗದ ಅಧಿಕಾರಿಗಳು ಕೂಡ ಬಿಲ್ಡರ್‌ಗೆ ನೋಟಿಸ್‌ ಜಾರಿ ಮಾಡಿ, ಪೊಲೀಸರಿಗೆ ದೂರು ನೀಡಿದ್ದಾರೆ.

ಸಿಂಗಸಂದ್ರ ವಾರ್ಡ್‌ ವ್ಯಾಪ್ತಿಯ ಚೂಡಸಂದ್ರದಲ್ಲಿನ ಮಹಾವೀರ್‌ ರಾರ‍ಯಂಚೆಸ್‌ ಅಪಾರ್ಟ್‌ಮೆಂಟ್‌ನ ನಿರ್ಮಾಣ ಕಾಮಗಾರಿಯು ಅಪೂರ್ಣಗೊಂಡಿದೆ. ಜಾಗದ ಮಾಲಕರು ಹಾಗೂ ಬಿಲ್ಡರ್‌ ನಡುವಿನ ವ್ಯಾಜ್ಯದಿಂದ ಕಾಮಗಾರಿ ಸ್ಥಗಿತಗೊಂಡಿದೆ. ವಸತಿ ಸಮುಚ್ಚಯದ ಕೆಲ ಬ್ಲಾಕ್‌ಗಳು ಪೂರ್ಣಗೊಂಡಿದ್ದು, ಹಲವು ಫ್ಲ್ಯಾಟ್‌ಗಳಲ್ಲಿ ನಿವಾಸಿಗಳು ನೆಲೆಸಿದ್ದಾರೆ. ಈ ನಿವಾಸಿಗಳಿಗೆ 4 ಕೊಳವೆಬಾವಿಗಳು ಹಾಗೂ ಖಾಸಗಿ ಟ್ಯಾಂಕರ್‌ಗಳಿಂದ ನೀರು ಪೂರೈಕೆಯಾಗುತ್ತಿದೆ. ಬಹುತೇಕ ನಿವಾಸಿಗಳು ಕುಡಿಯುವ ನೀರಿಗಾಗಿ ವಾಟರ್‌ ಫಿಲ್ಟರ್‌ಗಳನ್ನು ಅಳವಡಿಸಿಕೊಂಡಿದ್ದಾರೆ. ಅಡುಗೆಗಾಗಿ ಬೋರ್‌ವೆಲ್‌ ಅಥವಾ ಟ್ಯಾಂಕರ್‌ ನೀರು ಬಳಸುತ್ತಿರಬಹುದು. ಹೀಗಾಗಿ, ಸಮಸ್ಯೆಯಾಗಿದೆ ಎಂದು ಪಾಲಿಕೆಯ ಅಧಿಕಾರಿಯೊಬ್ಬರು ತಿಳಿಸಿದರು.

''ಕಲುಷಿತ ನೀರು ಸೇವನೆಯಿಂದ 140 ಕುಟುಂಬಗಳು ತೊಂದರೆಗೀಡಾಗಿವೆ. ಇದರಲ್ಲಿ ಮಕ್ಕಳೂ ಸೇರಿದಂತೆ 118 ಮಂದಿ ವಾಂತಿ, ಭೇದಿಯಿಂದ ಅಸ್ವಸ್ಥಗೊಂಡಿದ್ದರು. ಚಿಕಿತ್ಸೆ ಪಡೆದ ಬಳಿಕ ಬಹುತೇಕರು ಚೇತರಿಸಿಕೊಂಡಿದ್ದಾರೆ. ಕಲುಷಿತ ನೀರಿನ ಪೂರೈಕೆ ಕುರಿತು ಪರಿಶೀಲಿಸಲಾಗುತ್ತಿದೆ. ನೀರಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು, ವರದಿ ಬಂದಿಲ್ಲ. ಅಲ್ಲಿನ ನಿವಾಸಿಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಸಲುವಾಗಿ ವೈದ್ಯರ ತಂಡವನ್ನು ನಿಯೋಜಿಸಲಾಗಿದೆ. ಜಲಮಂಡಳಿಯಿಂದ ಶುದ್ಧ ಕುಡಿಯುವ ನೀರು ಪೂರೈಸಲಾಗುತ್ತಿದೆ. ಅಪಾರ್ಟ್‌ಮೆಂಟ್‌ನಲ್ಲಿನ ಟ್ಯಾಂಕ್‌ ಅನ್ನು ಸ್ವಚ್ಛಗೊಳಿಸಲಾಗಿದೆ,'' ಎಂದು ಹೇಳಿದರು.

ಈ ಕುರಿತು ಪ್ರತಿಕ್ರಿಯಿಸಿರುವ ಅಪಾರ್ಟ್‌ಮೆಂಟ್‌ನ ನಾಗರಿಕರೊಬ್ಬರು, ''ಅಪಾರ್ಟ್‌ಮೆಂಟ್‌ನಲ್ಲಿ ನೀರು ಶುದ್ಧೀಕರಣ ಘಟಕವಿಲ್ಲ. ಬೋರ್‌ವೆಲ್‌ ಹಾಗೂ ಟ್ಯಾಂಕರ್‌ ನೀರನ್ನು ಬಳಸಲಾಗುತ್ತಿದೆ. ಹೀಗಾಗಿ, ಕಲುಷಿತ ನೀರು ಎಲ್ಲರ ಮನೆಗೆ ಪೂರೈಕೆಯಾಗಿದೆ. ಅಪಾರ್ಟ್‌ಮೆಂಟ್‌ನ ಹಲವು ಮಕ್ಕಳು, ಹಿರಿಯ ನಾಗರಿಕರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದೆ,'' ಎಂದು ತಿಳಿಸಿದರು.

''ಮಾರ್ಚ್‌ನಲ್ಲಿ ನೀರನ್ನು ಪರೀಕ್ಷೆಗೆ ಒಳಪಡಿಸಿದಾಗ ಮಲಿನಗೊಂಡಿರುವುದು ದೃಢಪಟ್ಟಿತ್ತು. ಈ ವರದಿಯನ್ನು ಬಿಲ್ಡರ್‌ ಸಂಸ್ಥೆಗೆ ಕಳುಹಿಸಿ, ಶುದ್ಧ ಕುಡಿಯುವ ನೀರು ಒದಗಿಸಲು ಮನವಿ ಮಾಡಿದ್ದೆವು. ಆದರೆ, ಯಾವುದೇ ಕ್ರಮ ಕೈಗೊಂಡಿರಲಿಲ್ಲ,'' ಎಂದು ಮಾಹಿತಿ ನೀಡಿದರು.

share
Next Story
X