ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಮಡಿಕೇರಿ ಜೂ.9 : ಕಾರು ಮತ್ತು ಬೈಕ್ ನಡುವೆ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಪೋಕ್ಲು- ಮೂರ್ನಾಡು ಮುಖ್ಯ ರಸ್ತೆಯ ಹೊದವಾಡ ಗ್ರಾಮದಲ್ಲಿ ಶುಕ್ರವಾರ ವರದಿಯಾಗಿದೆ.
ನಾಪೋಕ್ಲುವಿನ ಪೆಟ್ರೋಲ್ ಬಂಕ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಪ್ಪಾಜಿ (ನವೀನ) (19) ಮೃತ ಯುವಕ ಎಂದು ಗುರುತಿಸಲಾಗಿದೆ.
ಮೂರ್ನಾಡು ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಮತ್ತು ಮೂರ್ನಾಡು ಕಡೆಯಿಂದ ನಾಪೋಕ್ಲುವಿಗೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಸಹ ಪ್ರಯಾಣಿಕನಿಗೆ ಗಂಭೀರ ಗಾಯವಾಗಿದ್ದು, ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಸ್ಥಳಕ್ಕೆ ನಾಪೋಕ್ಲು ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story