ಹುಬ್ಬಳ್ಳಿ | ಕೊನೆಗೂ ಬೋನಿಗೆ ಬಿತ್ತು ಚಿರತೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಹುಬ್ಬಳ್ಳಿ: ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಿಂಗನಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಹಲವು ಬಾರಿ ಗ್ರಾಮಸ್ಥರಿಗೆ ಕಾಣಿಸಿಕೊಂಡಿದ್ದ ಚಿರತೆಯಿಂದ ಜನರು ಭಯಭೀತರಾಗಿದ್ದರು. ಅಲ್ಲದೆ ಚಿರತೆ ಕಂಡು ಜಮೀನಿಗೆ ತೆರಳುವುದಕ್ಕೂ ಆತಂಕಗೊಂಡಿದ್ದ ರೈತರು, ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ಇನ್ನೂ ಅರಣ್ಯ ಇಲಾಖೆಯಿಂದ ಚಿರತೆ ಸೆರೆ ಹಿಡಿಯಲು ಎರಡೂ ದಿನಗಳಿಂದ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ, ಚಿರತೆ ಸೆರೆ ಹಿಡಿದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

.jpeg)
Next Story