ಉಳ್ಳಾಲ: ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಉಳ್ಳಾಲ, ಜೂ.9: ಡೈಮಂಡ್ ಸ್ಪೋಟ್ಸ್ ಮತ್ತು ಕಲ್ಚರಲ್ ಅಸೋಸಿಯೇಶನ್ ವತಿಯಿಂದ ಉಳ್ಳಾಲ ಒಂಭತ್ತು ಕೆರೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ಶಾಲೆಯ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.
1 ಲಕ್ಷಕ್ಕೂ ಅಧಿಕ ಮೌಲ್ಯದ ಪುಸ್ತಕಗಳು, ಲೇಖನಿ ಸಮಗ್ರಿಗಳನ್ನು ವಿದ್ಯಾರ್ಥಿಗಳು ಮತ್ತು ಪೋಷಕರ ಸಮ್ಮುಖದಲ್ಲಿ ವಿತರಿಸಲಾಯಿತು. ಸಂಸ್ಥೆಯ ಗೌರವಾಧ್ಯಕ್ಷ ಖಲೀಲ್ ಇಬ್ರಾಹಿಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಉಳ್ಳಾಲ ನಗರಸಭೆ ಸದಸ್ಯ ಮುಹಮ್ಮದ್ ಮುಕ್ಕಚ್ಚೇರಿ, ಕಾಂಗ್ರೆಸ್ ಮುಖಂಡ ಫಾರೂಕ್ ಉಳ್ಳಾಲ್, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ, ನಗರ ಸಭೆ ಸದಸ್ಯ ಮುಹಮ್ಮದ್ ಅಶ್ರಫ್, ಮುಕ್ಕಚೇರಿಯ ರಾಯಲ್ ಫೌಂಡೇಶನ್‌ನ ಅಧ್ಯಕ್ಷ ತೌಸೀಫ್ ಉಪಸ್ಥಿತರಿದ್ದರು.
ಕಾರ್ಯದರ್ಶಿ ಖಲೀಲ್ ಜಮಾಲಿಯ ಸ್ವಾಗತಿಸಿದರು. ಅಧ್ಯಕ್ಷ ಅಬ್ದುಲ್ ರಝಾಕ್ ಸರ್ಮದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಸ್ಯ ಜಹೀರ್ ಅಬ್ಬಾಸ್ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಸಿರಾಜುದ್ದೀನ್ ಇಕ್ಬಾಲ್ ವಂದಿಸಿದರು.
Next Story