ಜೂ.10: ದ.ಕ.ಜಿಲ್ಲಾ ಮಟ್ಟದ ಯುವ ಉತ್ಸವ

ಮಂಗಳೂರು: ನಗರದ ನೆಹರೂ ಯುವ ಕೇಂದ್ರದ ನೇತೃತ್ವದಲ್ಲಿ ದ.ಕ.ಜಿಲ್ಲಾಡಳಿತ, ಜಿಪಂ, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಎನ್‌ಎಸ್‌ಎಸ್ ಘಟಕ, ಡಾ.ಪಿ ದಯಾನಂದ ಪೈ-ಪಿ. ಸತೀಶ್ ಪೈ ಸರಕಾರಿ ಪ್ರಥಮ ದರ್ಜಿ ಕಾಲೇಜು ಹಾಗೂ ಜಿಲ್ಲಾ ಯುವ ಒಕ್ಕೂಟದ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಯುವ ಉತ್ಸವವು ಜೂ.10ರ ಬೆಳಗ್ಗೆ 9.30ಕ್ಕೆ ನಗರದ ಮಿನಿ ಟೌನ್‌ಹಾಲ್‌ನಲ್ಲಿ ನಡೆಯಲಿದೆ.
ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟನೆ ತಿಳಿಸಿದೆ
Next Story