Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂವಿಧಾನ ಬದಲಾಯಿಸಲು ಬಂದವರನ್ನೇ...

ಸಂವಿಧಾನ ಬದಲಾಯಿಸಲು ಬಂದವರನ್ನೇ ಬದಲಾಯಿಸಿದ್ದೇವೆ, ಮುಂದಿನ ಗುರಿ ಲೋಕಸಭೆ ಚುನಾವಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ 'ಭೀಮ ಸಂಕಲ್ಪ' ಸಮಾವೇಶ

9 Jun 2023 1:59 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಂವಿಧಾನ ಬದಲಾಯಿಸಲು ಬಂದವರನ್ನೇ ಬದಲಾಯಿಸಿದ್ದೇವೆ, ಮುಂದಿನ ಗುರಿ ಲೋಕಸಭೆ ಚುನಾವಣೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರಿನಲ್ಲಿ 'ಭೀಮ ಸಂಕಲ್ಪ' ಸಮಾವೇಶ

ಬೆಂಗಳೂರು, ಜೂ.9: ‘ವಿಗ್ರಹ ಇಟ್ಟುಕೊಂಡು ವಿಚಾರಗಳನ್ನು ಕೊಲ್ಲುವುದು ಬಿಜೆಪಿ ಸಂಘ ಪರಿವಾರದ ಚಾಳಿ. ಸಂವಿಧಾನ ವಿರೋಧಿಸುವ ಬಿಜೆಪಿ, ಚುನಾವಣೆಗಾಗಿ ಅಂಬೇಡ್ಕರ್ ಪ್ರತಿಮೆಯನ್ನು ಇಟ್ಟುಕೊಂಡು ನಾಟಕ ಮಾಡುತ್ತಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. 

ಗುರುವಾರ ಟೌನ್‍ಹಾಲ್‍ನಲ್ಲಿ ರಾಜ್ಯದ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ ‘ಭೀಮ ಸಂಕಲ್ಪ' ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಮನುಸ್ಮೃತಿಯ ಆರಾಧಕರಾದ ಬಿಜೆಪಿ, ಆರೆಸ್ಸೆಸ್‍ನವರು ಸಂವಿಧಾನ ವಿರೋಧಿಗಳು. ಅಧಿಕಾರಕ್ಕಾಗಿ ಅಲ್ಲಿಗೆ ಹೋದ ಶೋಷಿತ ಸಮುದಾಯಗಳ ಪ್ರತಿನಿಧಿಗಳು ಮನುಸ್ಮೃತಿಯ ಆರಾಧಕರಾಗಿ ಸಂವಿಧಾನ ವಿರೋಧಿಗಳಾಗುತ್ತಿದ್ದಾರೆ’ ಎಂದು ಹೇಳಿದರು. 

ಅಂಬೇಡ್ಕರ್ ಅವರು ಸಂವಿಧಾನ ಜಾರಿಗೊಳ್ಳುವ ಹಿಂದಿನ ದಿನ ಐತಿಹಾಸಿಕ ಭಾಷಣ ಮಾಡುತ್ತಾ, ‘ಸಾಮಾಜಿಕ, ಆರ್ಥಿಕ ಅಸಮಾನತೆಯನ್ನು ತೊಡೆದು ಹಾಕದಿದ್ದರೆ, ಈ ಸ್ವಾತಂತ್ರ್ಯ ಸೌಧವನ್ನು ದೇಶದ ಜನರೇ ಧ್ವಂಸ ಮಾಡುತ್ತಾರೆ’ ಎಂದು ಎಚ್ಚರಿಸಿದ್ದರು. ಜಾತಿ ಸಮಾಜಕ್ಕೆ ಚಲನೆ ಇರುವುದಿಲ್ಲ. ಚಾಲನೆ ಬರಬೇಕಾದರೆ ಸಂವಿಧಾನ ಬದ್ಧವಾದ ಜಾತ್ಯತೀತ ಮೌಲ್ಯಗಳು ಜಾರಿಯಾಗಿ ಶೋಷಿತ ಸಮುದಾಯಗಳಿಗೆ ಸಾಮಾಜಿಕವಾಗಿ, ಆರ್ಥಿಕವಾಗಿ ಅವಕಾಶಗಳನ್ನು ಕಲ್ಪಿಸಿಕೊಡಬೇಕು. ಈ ಅವಕಾಶಗಳನ್ನು ಕಲ್ಪಿಸುವುದೇ ನನ್ನ ರಾಜಕೀಯ ಬದ್ಧತೆ ಎಂದರು.

ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವರಾಗಿದ್ದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿದ್ದ ಅಮಿತ್ ಶಾ ಅವರಾಗಲಿ, ಪ್ರಧಾನಿ ಮೋದಿ ಅವರಾಗಲಿ ಕ್ರಮ ಕೈಗೊಳ್ಳದೆ ಸುಮ್ಮನೆ ಕುಳಿತರು. ಆದರೆ, ನಾವು-ನೀವು ಸುಮ್ಮನೆ ಕೂರಲಿಲ್ಲ. ಸಂವಿಧಾನ ಬದಲಾಯಿಸಲು ಬಂದವರನ್ನೇ ನಾವು-ನೀವು  ಬದಲಾಯಿಸಿದ್ದೀವಿ. ಇದು 2024 ರಲ್ಲೂ ಪ್ರತಿಧ್ವನಿಸಬೇಕು, ಮರುಕಳಿಸಬೇಕು ಎಂದು ಕರೆ ನೀಡಿದರು. 

13 ಬೇಡಿಕೆಗಳಿಗೆ ಸ್ಪಂದನೆ: ಐಕ್ಯ ಹೋರಾಟ ಚಾಲನಾ ಸಮಿತಿ ಸಲ್ಲಿಸಿದ 13 ಬೇಡಿಕೆಗಳ ಕುರಿತು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಇವುಗಳಲ್ಲಿ ಹಲವು ಬೇಡಿಕೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ಉಳಿದವುಗಳನ್ನೂ ಈಡೇರಿಸುತ್ತೇವೆ ಎಂದು ಭರವಸೆ ನೀಡಿದರು. 

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ನಾನು ವಿದ್ಯಾರ್ಥಿ ನಾಯಕನಾಗಿದ್ದಾಗಿನಿಂದ ದಲಿತ ಸಂಘರ್ಷ ಸಮಿತಿ ಹೋರಾಟಗಳನ್ನು ನೋಡಿದ್ದೇನೆ. ನಿಮ್ಮ ಹೋರಾಟ ರಸ್ತೆಯಲ್ಲಿ ಜನರಿಗಾಗಿ ಜನರ ಮಧ್ಯೆ ನಡೆದುಕೊಂಡು ಬಂದಿದೆ. ಅಂಬೇಡ್ಕರ್ ಅವರು ಕೊಟ್ಟಿರುವ ದೀಕ್ಷೆ ಉಳಿಸಿಕೊಳ್ಳಲು ನಾವು ನೀವು ಹೋರಾಟ ಮಾಡುತ್ತಿದ್ದೇವೆ ಎಂದರು.

ನೀವು ನಾವು ಹೋರಾಟ ಮಾಡಿ, ಒಂದು ಗುರಿ ಸಾಧಿಸಿದ್ದೀರಿ. ನಮ್ಮೆಲ್ಲರ ಮುಂದಿನ ಗುರಿ 2024ರ ಲೋಕಸಭೆ ಚುನಾವಣೆ. ಅದಕ್ಕಾಗಿ ನೀವು, ನಾವು ಸಜ್ಜಾಗಬೇಕು. ನಿಮ್ಮ ಬೇಡಿಕೆ, ಆಕಾಂಕ್ಷೆಗಳನ್ನು ನಾವು ಸಾಕಾರಗೊಳಿಸುತ್ತೇವೆ. ನಾವು ದಲಿತರ ಕಲ್ಯಾಣಕ್ಕೆ ಅನೇಕ ಕ್ರಾಂತಿಕಾರಕ ಯೋಜನೆ ನೀಡಿದ್ದು, ದೇಶಕ್ಕೆ ಮಾದರಿ ಆಗಿದ್ದೇವೆ ಎಂದು ಅವರು ತಿಳಿಸಿದರು.

ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಆಹಾರ ಸಚಿವ ಕೆ.ಎಚ್. ಮುನಿಯಪ್ಪ ದಲಿತ ಮುಖಂಡರುಗಳಾದ ಎಸ್.ಮರಿಸ್ವಾಮಿ, ಮಾವಳ್ಳಿ ಶಂಕರ್, ಡಿ.ಜಿ.ಸಾಗರ್, ಗುರುಪ್ರಸಾದ್ ಕೆರಗೋಡು, ವಿ.ನಾಗರಾಜ್, ಎನ್.ವೆಂಕಟೇಶ್, ಇಂದೂಧರ ಹೊನ್ನಾಪುರ, ಜಿಗಣಿ ಶಂಕರ್, ಸೇರಿ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯ 50ಕ್ಕೂ ಹೆಚ್ಚು ಮುಖಂಡರುಗಳು ಸಮಾವೇಶದಲ್ಲಿ ಉಪಸ್ಥಿತರಿದ್ದರು. 

ಗ್ಯಾರಂಟಿ ವಿಫಲಗೊಳಿಸಲು ಬಿಜೆಪಿ ಹುನ್ನಾರ: ‘ದೇಶದ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸದೆ ವಂಚಿಸಿದ ಬಿಜೆಪಿ, ನುಡಿದಂತೆ ನಡೆದ ನಮ್ಮನ್ನು ಟೀಕಿಸುತ್ತಿದ್ದಾರೆ. ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ  ನಾವು ನೀಡಿರುವ ಗ್ಯಾರಂಟಿಗಳನ್ನು ವಿಫಲಗೊಳಿಸಲು ಬಿಜೆಪಿ ಯತ್ನಿಸುತ್ತಿದೆ. ಇದಕ್ಕಾಗಿ ಸುಳ್ಳುಗಳನ್ನು ಹೊಸೆದು, ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ನಮ್ಮ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ನಾಡಿನ ಶೇ.85ಕ್ಕೂ ಹೆಚ್ಚು ಜನರಿಗೆ ತಲುಪುತ್ತದೆ. ಉಳಿದವು ಇನ್ನೂ ಹೆಚ್ಚಿನ ಸಂಖ್ಯೆಯ ಜನರಿಗೆ ತಲುಪುತ್ತದೆ’

-ಸಿದ್ದರಾಮಯ್ಯ, ಮುಖ್ಯಮಂತ್ರಿ

ಕಾಂಗ್ರೆಸ್‍ಗೆ ಸಂವಿಧಾನದ ಬಗ್ಗೆ ಬದ್ಧತೆ ಇದೆ: ‘ನಾನು ಪಕ್ಷದ ಅಧ್ಯಕ್ಷನಾಗಿ ಅಧಿಕಾರ ತೆಗೆದುಕೊಂಡಾಗ 11 ಸಾವಿರ ಪಂಚಾಯಿತಿಗಳಲ್ಲಿ ಸಂವಿಧಾನದ ಪೀಠಿಕೆ ಓದಿ ಪ್ರತಿಜ್ಞೆ ಮಾಡಲಾಗಿತ್ತು. ಕಾಂಗ್ರೆಸ್ ಪಕ್ಷಕ್ಕೆ ಸಂವಿಧಾನದ ಬಗ್ಗೆ ಬದ್ಧತೆ ಇದೆ. ಪಕ್ಷ ಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಂಡಿದೆ. ಸಂವಿಧಾನ ನಮ್ಮ ಪಾಲಿನ ಭಗವದ್ಗೀತೆ, ಕುರಾನ್, ಬೈಬಲ್ ಆಗಿದೆ’

-ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X