ಬೈಕ್‌ಗಳ ಮಧ್ಯೆ ಅಪಘಾತ: ಓರ್ವ ಸವಾರ ಮೃತ್ಯು

ಶಿರ್ವ, ಜೂ.9: ಎರಡು ದ್ವಿಚಕ್ರ ವಾಹನಗಳ ಮಧ್ಯೆ ಶಿರ್ವ ಗ್ರಾಮದ ಸಾಲ್ಮರ ಇಂಚರ ಬಸ್ ನಿಲ್ದಾಣದ ಬಳಿ ಜೂ.8ರಂದು ರಾತ್ರಿ ವೇಳೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯ ಗೊಂಡ ಬಗ್ಗೆ ವರದಿಯಾಗಿದೆ. ನಡೆದಿದೆ.
ಮೃತರನ್ನು ಬೈಕ್ ಸವಾರ ಶಂಕರ ಆಚಾರ್ಯ(51) ಎಂದು ಗುರುತಿಸ ಲಾಗಿದೆ. ಇನ್ನೊಂದು ಬೈಕಿನ ಸವಾರ ಕರುಣಾಕರ ಮೂಲ್ಯ ಎಂಬವರು ಗಾಯ ಗೊಂಡು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಂಟಕಲ್ ಕಡೆಯಿಂದ ಶಂಕರಪುರ ಕಡೆಗೆ ಹೋಗುತ್ತಿದ್ದ ಬೈಕಿಗೆ ಕಟಪಾಡಿ ಕಡೆಯಿಂದ ಶಿರ್ವ ಕಡೆಗೆ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಸವಾರರಿಬ್ಬರೂ ವಾಹನ ಸಮೇತ ರಸ್ತೆಗೆ ಬಿದ್ದು ಗಾಯ ಗೊಂಡ ರೆನ್ನಲಾಗಿದೆ. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಶಂಕರ್ ಆಚಾರ್ಯ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story