ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಗೆ ಪ್ರಸಾದ್‌ರಾಜ್ ಅಭಿನಂದನೆ

ಉಡುಪಿ: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ರಾಜ್ಯ ಸರಕಾರದಿಂದ ನೇಮಕಗೊಂಡಿರುವ ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಹಾಗೂ ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಕಾಂಗ್ರೆಸ್ ಮುಖಂಡ ಪ್ರಸಾದ್‌ರಾಜ್ ಕಾಂಚನ್ ಅಭಿನಂದಿಸಿದ್ದಾರೆ.
ಉಡುಪಿ ಜಿಲ್ಲೆ ಮತ್ತು ವಿಧಾನಸಭಾ ಕ್ಷೇತ್ರದ ಸಮಸ್ತ ಮತದಾರರ ಪರವಾಗಿ ಹೆಬ್ಬಾಳ್ಕರ್ ಅವರಿಗೆ ಶುಭ ಹಾರೈ ಸಿದ ಪ್ರಸಾದ್‌ರಾಜ್, ನಿಮ್ಮ ಅಧಿಕಾರದ ಅವಧಿಯಲ್ಲಿ ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿ, ಸರ್ವ ಜನಾಂಗೀಯ ಸಮಾಜ ನಿರ್ಮಾಣ ಮಾಡಿ, ಮಾದರಿ ಜಿಲ್ಲೆಯಾಗಿ ರೂಪಗೊಳ್ಳಲಿ ಎಂದು ಹಾರೈಸಿದ್ದಾರೆ.
Next Story