ಮೈಸೂರು: ಯತೀಂದ್ರ ಸಿದ್ದರಾಮಯ್ಯಗೆ ಲೋಕಸಭಾ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಅಂಚೆ ಅಭಿಯಾನ
ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ ದಿಂದ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ಮೈಸೂರು ಮಹಾ ನಗರ ಪಾಲಿಕೆ ಸದಸ್ಯರ ನೇತೃತ್ವದಲ್ಲಿ ಅಂಚೆ ಚಳವಳಿ ನಡೆಸಲಾಯಿತು.
ನಗರದ ರಾಮಸ್ವಾಮಿ ಮೃತ್ತದ ಬಳಿ ಶುಕ್ರವಾರ ನಡೆದ ಚಳವಳಿಯಲ್ಲಿ ಮಾತನಾಡಿದ ಲೋಕೇಶ್ ಪಿಯಾ, ಮಾಜಿ ಶಾಸಕ ಡಾ ಯತಿಂದ್ರ ಸಿದ್ದರಾಮಯ್ಯರಿಗೆ ಮುಂದಿನ ಲೋಕಸಭಾ ಚುನಾವಣೆ ಟಿಕೆಟ್ ನೀಡಬೇಕು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಅಂಚೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದೇವೆ. ಪ್ರತಾಪ್ ಸಿಂಹ ಸೋಲಿಸಬೇಕೆಂದರೆ ಯತೀಂದ್ರ ಅವರು ಸೂಕ್ತ ಎಂದು ಹೇಳಿದರು.
ಡಾ. ಯತೀಂದ್ರ ಜಾತ್ಯತೀತವಾಗಿ ಎಲ್ಲರೂ ಇಷ್ಟಪಡುವ ವ್ಯಕ್ತಿ. ಜಿಲ್ಲೆಯಲ್ಲೇ ಬೇರೆ ಯಾರಿಗೆ ಟಿಕೆಟ್ ಕೊಟ್ಟರೂ ಗೆಲ್ಲಲಾಗಲ್ಲ. ಯತಿಂದ್ರ ಸಿದ್ದರಾಮಯ್ಯ ಅವರೇ ಸೂಕ್ತ ವ್ಯಕ್ತಿ. ಸರಳ ವ್ಯಕ್ತಿತ್ವ ಹಾಗೂ ಯುವಕರಾಗಿದ್ದಾರೆ. ಆದ್ದರಿಂದ ಈ ಬಾರಿ ಯತೀಂದ್ರ ಸಿದ್ದರಾಮಯ್ಯರಿಗೆ ಎಂ.ಪಿ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ; ತುಮಕೂರು: ತಾಯಿಯಿಂದಲೇ ಮಗುವಿನ ಹತ್ಯೆ!