Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೈದರಾಬಾದ್: ಪ್ರೇಯಸಿಯನ್ನು ಕೊಂದು...

ಹೈದರಾಬಾದ್: ಪ್ರೇಯಸಿಯನ್ನು ಕೊಂದು ಮೃತದೇಹವನ್ನು ಮ್ಯಾನ್‌ಹೋಲ್‌ಗೆ ಎಸೆದ ಅರ್ಚಕನ ಬಂಧನ

10 Jun 2023 7:20 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹೈದರಾಬಾದ್: ಪ್ರೇಯಸಿಯನ್ನು ಕೊಂದು ಮೃತದೇಹವನ್ನು ಮ್ಯಾನ್‌ಹೋಲ್‌ಗೆ ಎಸೆದ ಅರ್ಚಕನ ಬಂಧನ

ಹೈದರಾಬಾದ್:‌ ನಗರದ ಹೊರವಲಯದ ಶಂಶಾಬಾದ್‌ ಎಂಬಲ್ಲಿಂದ ನಾಪತ್ತೆಯಾಗಿದ್ದ 30 ವರ್ಷದ ಮಹಿಳೆಯೊಬ್ಬರ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ಜೂನ್‌ 4ರಂದು ಪತ್ತೆಯಾಗಿದ್ದು ಈ ಸಂಬಂಧ ಪೊಲೀಸರು ದೇವಳದ ಅರ್ಚಕನೊಬ್ಬನನ್ನು ಬಂಧಿಸಿದ್ದಾರೆ.

ಆರೋಪಿ ಅಯ್ಯಗಿರಿ ಸಾಯಿ ಕೃಷ್ಣ (36) ಮಹಿಳೆಯನ್ನು ಕೊಲೆಗೈದು ಮೃತದೇಹವನ್ನು ಮ್ಯಾನ್‌ಹೋಲ್‌ ಒಂದರೊಳಗೆ ಎಸೆದು ನಂತರ ಠಾಣೆಗೆ ನಾಪತ್ತೆ ದೂರು ದಾಖಲಿಸಲು ತೆರಳಿದ್ದ.

ಮೃತ ಮಹಿಳೆ ಕುರುಗಂಟಿ ಅಪ್ಸರಾ ಎಂಬಾಕೆಗೆ ಸಾಯಿ ಕೃಷ್ಣನನ್ನು ಮದುವೆಯಾಗುವ ಹಂಬಲವಿತ್ತು. ಆರೋಪಿಗೆ ಅದಾಗಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ತನ್ನನ್ನು ಮದುವೆಯಾಗುವಂತೆ ಆಕೆ ಆತನ  ಮೇಲೆ ದಂಬಾಲು ಬಿದ್ದಿದ್ದಳಲ್ಲದೆ ತನ್ನ ಮಾತು ಕೇಳದೇ ಇದ್ದರೆ ತಮ್ಮ ಸಂಬಂಧದ ಬಗ್ಗೆ ಎಲ್ಲರಿಗೂ  ತಿಳಿಸುವುದಾಗಿ ಬೆದರಿಸಿದ್ದಳೆಂದು ತಿಳಿದು ಬಂದಿದೆ. ಇತ್ತೀಚೆಗೆ ಗರ್ಭಪಾತ ಮಾಡಿಸಿಕೊಂಡಿದ್ದ ಅಪ್ಸರಾ   ಆರೋಪಿ ತನ್ನ ಕುಟುಂಬ ತೊರೆದು ತನ್ನನ್ನು ಮದುವೆಯಾಗುವಂತೆ ಬಲವಂತಪಡಿಸಿದ್ದಳು. ಇದೇ ಕಾರಣಕ್ಕೆ ಸಾಯಿ ಕೃಷ್ಣ ಆಕೆಯನ್ನು ಸಾಯಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ ಎಂದು indianexpress.com ವರದಿ ಮಾಡಿದೆ.

ಸರೂರ್‌ ನಗರ ಎಂಬಲ್ಲಿನ ದೇವಸ್ಥಾನವೊಂದರ ಅರ್ಚಕನಾಗಿರುವ ಸಾಯಿ ಕೃಷ್ಣ, ಜೂನ್‌ 3ರಂದು ಅಪ್ಸರಾಳನ್ನು ಶಂಶಾಬಾದ್‌ ಸಮೀಪ ಕರೆದೊಯ್ದಿದ್ದ. ಅಲ್ಲಿ ಅವರಿಬ್ಬರ ನಡುವೆ ಜಗಳವಾಗಿ ಕಲ್ಲಿನಿಂದ ಆತ ಆಕೆಯ ತಲೆಯನ್ನು ಜಜ್ಜಿದ್ದ. ನಂತರ ಸರೂರ್‌ನಗರ್‌ ಎಂಬಲ್ಲಿ ಮೃತದೇಹವನ್ನು ಮ್ಯಾನ್‌ಹೋಲ್‌ನಲ್ಲಿ ಬಿಸಾಕಿ ನಂತರ ಜೂನ್‌ 5ರಂದು  ಪೊಲೀಸರಿಗೆ ದೂರು ನೀಡಿ ತಾನು ಅಪ್ಸರಾಳನ್ನು ಶಂಶಾಬಾದ್‌ ತನಕ ಡ್ರಾಪ್‌ ಮಾಡಿದ್ದಾಗಿ ಹಾಗೂ ಆಕೆ ಸ್ನೇಹಿತೆಯರೊಂದಿಗೆ ಭದ್ರಾಚಲಂಗೆ ತೆರಳಿದ್ದಾಳೆ ಆದರೆ ಜೂನ್‌ 4ರಿಂದ ಕರೆ ಸ್ವೀಕರಿಸುತ್ತಿಲ್ಲ ಎಂದು ದೂರಿದ್ದ.

ಆದರೆ ಸಿಸಿಟಿವಿ ದಾಖಲೆಗಳನ್ನು ಪರಿಶೀಲಿಸಿದ ಪೊಲೀಸರಿಗೆ ಸಾಯಿ ಕೃಷ್ಣ ಸುಳ್ಳು ಹೇಳುತ್ತಿದ್ದಾನೆಂದು ತಿಳಿದು ಆತನನ್ನು ವಿಚಾರಿಸಿದಾಗ ಸತ್ಯ ಬಾಯ್ಬಿಟ್ಟಿದ್ದನನಲ್ಲದೆ ಆಕೆಯ ಮೃತದೇಹ ಬಿಸಾಕಿದ ಮ್ಯಾನ್‌ಹೋಲ್‌ಗೆ ಎರಡು ಟ್ರಕ್‌ ಲೋಡ್‌ ಮಣ್ಣು ಹಾಕಿಸಿದ್ದೇ ಅಲ್ಲದೆ ಆಕೆಯ ಬ್ಯಾಗುಗಳಿಗೆ ಬೆಂಕಿ ಹಚ್ಚಿ ನಾಶಗೈದಿರುವುದಾಗಿ ತಿಳಿಸಿದ್ದ. ಮರುದಿನ ಮೃತದೇಹ ಎಸೆದುದ್ದ ಮ್ಯಾನ್‌ಹೋಲ್‌ ಅನ್ನು ಕಾಂಕ್ರೀಟ್‌ನಿಂದ ಮುಚ್ಚಿದ್ದ ಎಂದು ವರದಿಯಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X