Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೋದಿ ವರ್ಚಸ್ಸಿನಿಂದ ಗೆಲ್ಲುವ ಬಿಜೆಪಿಯ...

ಮೋದಿ ವರ್ಚಸ್ಸಿನಿಂದ ಗೆಲ್ಲುವ ಬಿಜೆಪಿಯ ಲೆಕ್ಕಾಚಾರ ಕರ್ನಾಟಕ ಚುನಾವಣೆ ಹುಸಿಗೊಳಿಸಿದೆ: ಜಗದೀಶ್ ಶೆಟ್ಟರ್

10 Jun 2023 4:53 PM IST
share
ಮೋದಿ ವರ್ಚಸ್ಸಿನಿಂದ ಗೆಲ್ಲುವ ಬಿಜೆಪಿಯ ಲೆಕ್ಕಾಚಾರ ಕರ್ನಾಟಕ ಚುನಾವಣೆ ಹುಸಿಗೊಳಿಸಿದೆ: ಜಗದೀಶ್ ಶೆಟ್ಟರ್

ಮೈಸೂರು,ಜೂ.10:  ಸ್ಥಳೀಯ ನಾಯಕತ್ವವನ್ನು ಕಡೆಗಣಿಸಿ ಮೋದಿ ವರ್ಚಸ್ಸಿನಿಂದ ಚುನಾವಣೆ ಗೆಲ್ಲತ್ತೇವೆ ಎಂಬ ಬಿಜೆಪಿ ಲೆಕ್ಕಾಚಾರವನ್ನು ಕರ್ನಾಟಕ ಚುನಾವಣೆ ಹುಸಿಗೊಳಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಭಿಪ್ರಾಯಪಟ್ಟರು.

ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್ ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತಾರಣ ಕೇಂದ್ರ ವತಿಯಿಂದ ಶನಿವಾರ  ವಿಶ್ವಜ್ಞಾನಿ ಸಭಾಂಗಣದಲ್ಲಿ ಆಯೋಜಿಸಿದ್ದ 16 ನೇ ವಿಧಾನಸಭಾ ಚುನಾವಣೆ: ಪ್ರಭಾವ, ಪರಿಣಾಮ ಮತ್ತು ಭವಿಷ್ಯದ ರಾಜಕೀಯ ಆಯಾಮಗಳು ಎಂಬ ರಾಜ್ಯಮಟ್ಟದ ವಿಚಾರ ಸಂಕಿರಣ ಸಮಾರಂಭದಲ್ಲಿ ಅವರು ಮಾತನಾಡಿದರು.

ಮೋದಿ ವರ್ಚಸ್ಸಿನಿಂದ ಚುನಾವಣೆ ಗೆಲ್ಲುವುದು ನಿಜವಾಗಿದ್ದರೆ ಪಕ್ಕದ ತಮಿಳುನಾಡು, ಕೇರಳ, ಆಂದ್ರಪ್ರದೇಶ, ತೆಲಂಗಾಣದಲ್ಲಿ ಏಕೆ ಬಿಜೆಪಿ ಇಂದಿಗೂ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ? ಸ್ಥಳಿಯ ನಾಯಕರನ್ನು ದೂರವಿಟ್ಟು  ಚುನಾವಣೆ ಎದುರಿಸಿದ ಪರಿಣಾಮ ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿತು ಎಂಬುದನ್ನು ಆರೆಸ್ಸೆಸ್ ಮುಖವಾಣಿ ಪತ್ರಿಕೆಯಾದ ಆರ್ಗನೈಝರ್ ಪತ್ರಿಕೆಯೇ ಒಪ್ಪಿಕೊಂಡಿದೆ. ಕೆಲವೇ ವ್ಯಕ್ತಿಗಳ ಕಪಿಮುಷ್ಠಿಯಿಂದ ಸಿಲುಕಿರುವ ಬಿಜೆಪಿ ಟಿಕೆಟ್ ಹಂಚಿಕೆ ವೇಳೆ ಸ್ಥಳೀಯ ನಾಯಕರ ಮಾತಿಗೆ ಬೆಲೆಕೊಡದೇ ರಾಜಕೀಯ ಅನಭವವಿಲ್ಲದವರ ಮಾತಿನಂತೆ ನಡೆದುಕೊಂಡಿದ್ದರಿಂದ ದೊಡ್ಡ ಮಟ್ಟದಲ್ಲಿ  ಹಿನ್ನೆಡೆ ಎದುರಿಸಿತು. ಈಗಲೂ ಆ ಪಕ್ಷ ಕೆಲವರ ಕಪಿಮುಷ್ಠಿಯಿಂದ ಹೊರಬರುವಂತೆ ನನಗೆ ಕಾಣುತ್ತಿಲ್ಲ ಎಂದು ಹೇಳಿದರು.

ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದೆ. ಆದರೆ, ಶೇಕಡಾವಾರು ಮತದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಗೆ ಬಹಳ ದೊಡ್ಡ ವ್ಯಾತ್ಯಾಸವಾಗಿಲ್ಲ. ಸ್ವಲ್ಪ ಹಳಿ ತಪ್ಪಿದರೂ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಹೆಚ್ವಿತ್ತು. ಮುಂದಿನ ಲೋಕಸಭಾ ಚುನಾವಣೆ ಹಿತದೃಷ್ಟಿಯಿಂದ ಚುನಾವಣೆ ಪೂರ್ವ ನೀಡಿದ ಗ್ಯಾರಂಟಿ ಯೋಜನೆಗಳನ್ನು  ಜಾರಿಗೊಳಿಸಬೇಕು. ಹತ್ತು ಕೆ.ಜಿ ಉಚಿತ ಅಕ್ಕಿ, 200 ಯೂನಿಟ್ ವಿದ್ಯುತ್, ನಿರುದ್ಯೋಗಿ ಭತ್ಯೆಯಂತಹ  ಸವಲತ್ತುಗಳು ಬಡ ಜನರಿಗೆ ತಲುಪಬೇಕು ಹೊರತು ಅನಕೂಲ ಇರುವ ಶ್ರೀಮಂತರಿಗಲ್ಲ. ಹಾಗಾಗಿ ಗ್ಯಾರಂಟಿ ಯೋಜನೆಗಳಿಗೆ ಷರತ್ತು ವಿಧಿಸುವುದು ಸರಿಯಾಗಿಯೇ ಇದೆ ಎಂದು ಸಮರ್ಥಿಸಿದರು.

ಬಸವಣ್ಣ ಅವರ ಅನುಭವ ಮಂಟಪದ ತತ್ವ ಹಾಗೂ ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳ ಆಧಾರದ ಮೇಲೆ ಸರ್ಕಾರಗಳು ಆಡಳಿತ ಮಾಡಬೇಕು.ಅಂಬೇಡ್ಕರ್ ರಚಿಸಿರುವ ಸಂವಿಧಾನ ಜಗತ್ತಿನಲ್ಲೇ ಶ್ರೇಷ್ಠವಾದದ್ದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಸಂಶೋಧನಾ ಮತ್ತು ವಿಸ್ತರಣ ಕೇಂದ್ರದ ಸಂದರ್ಶಕ ಪ್ರಾಧ್ಯಾಪಕಿ ಪ್ರೊ.ಆರ್ ಇಂದಿರಾ, ಪ್ರಾಧ್ಯಾಪಕ  ಪ್ರೊ.ಜೆ.ಸೋಮಶೇಖರ್, ಅಂಬೇಡ್ಕರ್ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ನಿರ್ದೇಶಕ ಪ್ರೊ.ಎಸ್.ನರೇಂದ್ರ ಕುಮಾರ್ ಉಪಸ್ಥಿತರಿದ್ದರು.

share
Next Story
X