ಕಾರು ಢಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತ್ಯು

ಉಡುಪಿ, ಜೂ.10: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜೂ.9ರಂದು ಬೆಳಗಿನ ಜಾವ ಪುತ್ತೂರು ಗ್ರಾಮದ ಅಂಬಾಗಿಲು ಸುಜಾನ ಕಾಂಪ್ಲೆಕ್ಸ್ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಸಂತೆಕಟ್ಟೆ ಸುಬ್ರಹ್ಮಣ್ಯ ನಗರದ ಶಂಕರ ಬಿ.ಆಚಾರ್ಯ(58) ಎಂದು ಗುರುತಿಸಲಾಗಿದೆ. ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ರಸ್ತೆ ದಾಟುತ್ತಿದ್ದ ಶಂಕರ ಆಚಾರ್ಯ ಅವರಿಗೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡರು. ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಇವರು, ಚಿಕಿತ್ಸೆಗೆ ಸ್ವಂದಿಸದೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story