ಕಾರು- ಬಸ್ ಢಿಕ್ಕಿ; ನಾಲ್ವರು ಗಂಭೀರ

ಕಲಬುರಗಿ: ನಗರದ ಜೇವರ್ಗಿ ರಸ್ತೆಯ ಪಾಣೇಗಾಂವ ಹತ್ತಿರ ಇಂದು (ಶನಿವಾರ) ಮಧ್ಯಾಹ್ನ ಬಸ್ ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಮಹಿಳೆಯರು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದರಲ್ಲಿ ರುದ್ರಗೌಡ ಶಿವನಗೌಡ ಮಾಗಣಗೇರಾ (35) ಎಂಬುವವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನೊಳಗೆ ಸಿಲುಕಿಕೊಂಡಿದ್ದ ರುದ್ರಗೌಡ ಅವರನ್ನು ಹೊರ ತೆಗೆಯಲು ಹರಸಾಹಸ ಪಡಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಸಂಬಂಧ ಸಂಚಾರ ಪೊಲೀಸ್ ಠಾಣೆ-1ರಲ್ಲಿ ಪ್ರಕರಣ ದಾಖಲಾಗಿದೆ.
ಸಂಚಾರ ಪೊಲೀಸ್ ಠಾಣೆ ಪಿಐ ಶಾಂತಿನಾಥ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತಿದ್ದಾರೆ.
Next Story