ಜೂ.11: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿಗೆ ಭೇಟಿ

ಉಡುಪಿ, ಜೂ.10: ಉಡುಪಿ ಜಿಲ್ಲೆಗೆ ಉಸ್ತುವಾರಿ ಸಚಿವೆಯಾಗಿ ನೇಮಕ ಗೊಂಡಿರುವ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ರವಿವಾರ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಲಿದ್ದಾರೆ.
ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು, ಅಲ್ಲಿಂದ ಉಡುಪಿಗೆ ಆಗಮಿಸಿ 10:15ಕ್ಕೆ ಕೃಷ್ಣ ಮಠಕ್ಕೆ ಭೇಟಿ ನೀಡುವರು. ಬಳಿಕ 11:00ಗಂಟೆಗೆ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ.
ಅಪರಾಹ್ನ 12:00ಗಂಟೆಗೆ ಬನ್ನಂಜೆಯಲ್ಲಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ರಾಜ್ಯದ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇದೂತ ಸರಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ ಯೋಜನೆ’ಗೆ ಚಾಲನೆ ನೀಡಲಿದ್ದಾರೆ. ಸಂಜೆ 7:00ಗಂಟೆಗೆ ಬಜ್ಪೆ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಬೆಂಗಳೂರಿಗೆ ಪ್ರಯಾಣಿಸುವರು.
Next Story