Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡುವ...

ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡುವ ಅಧಿಕಾರ ತನಗಿದೆ: ಸಲಹೆಗಾರರ ಹೆಸರು ಕೈಬಿಡಲು ನಿರಾಕರಿಸಿದ NCERT

10 Jun 2023 7:41 PM IST
share
ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡುವ ಅಧಿಕಾರ ತನಗಿದೆ: ಸಲಹೆಗಾರರ ಹೆಸರು ಕೈಬಿಡಲು ನಿರಾಕರಿಸಿದ NCERT

ಹೊಸದಿಲ್ಲಿ: "ಅತಾರ್ಕಿಕ ಹಾಗೂ ದೊಡ್ಡ ಮಟ್ಟದ ಕಡಿತ"ದ ಕಾರಣಕ್ಕೆ ರಾಜಕೀಯ ವಿಜ್ಞಾನ ಪಠ್ಯಪುಸ್ತಕಗಳಿಂದ ತಮ್ಮ ಹೆಸರು ಕೈಬಿಡುವಂತೆ ಆಕ್ಷೇಪಿಸಿರುವ ಇಬ್ಬರು ಮಾಜಿ ಸಲಹೆಗಾರರ ಕುರಿತು ಶುಕ್ರವಾರ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ(NCERT)ಯು, ಹಕ್ಕುಸ್ವಾಮ್ಯದ ಆಧಾರದಲ್ಲಿ ಪಠ್ಯಪುಸ್ತಕಗಳನ್ನು ಪರಿಷ್ಕರಿಸುವ ಅಧಿಕಾರ ತನಗಿದೆ ಎಂದು ಹೇಳಿದ್ದು, ಪಠ್ಯಪುಸ್ತಕಗಳು ಸಾಮೂಹಿಕ ಪ್ರಯತ್ನದ ಫಲವಾಗಿರುವುದರಿಂದ ಯಾವುದೇ ಸದಸ್ಯರು ತಮ್ಮ ಸಹಭಾಗಿತ್ವದಿಂದ ಹಿಂದೆ ಸರಿಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಪ್ರತಿಪಾದಿಸಿದೆ ಎಂದು indianexpress.com ವರದಿ ಮಾಡಿದೆ.

ಮೊದಲಿಗೆ 2006-07ರ ಅವಧಿಯಲ್ಲಿ ಪ್ರಕಟವಾಗಿದ್ದ ಒಂಬತ್ತನೇ ತರಗತಿಯಿಂದ ಹನ್ನೆರಡನೇ ತರಗತಿವರೆಗಿನ ರಾಜಕೀಯ ವಿಜ್ಞಾನ ಪಠ್ಯಪುಸ್ತಕಗಳ ಮುಖ್ಯ ಸಲಹೆಗಾರರಾಗಿದ್ದ ಸುಹಾಸ್ ಪಾಲ್ಷಿಕರ್ ಹಾಗೂ ಯೋಗೇಂದ್ರ ಯಾದವ್ ಅವರು, ಶುಕ್ರವಾರ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ ನಿರ್ದೇಶಕ ಡಿ‌.ಎಸ್.ಸಕ್ಲಾನಿ ಅವರಿಗೆ ಪತ್ರ ಬರೆದು ತಮ್ಮ ಕಳವಳ ವ್ಯಕ್ತಪಡಿಸಿದ್ದರು. ಇತ್ತೀಚಿನ ಪಠ್ಯಪುಸ್ತಕಗಳ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಮಗೆ ಯಾವುದೇ ಶೈಕ್ಷಣಿಕ ಸಮರ್ಥನೆ ಕಂಡು ಬಂದಿಲ್ಲ ಹಾಗೂ ತಿರುಚಿದ ಮತ್ತು ಶೈಕ್ಷಣಿಕವಾಗಿ ನಿಷ್ಕ್ರಿಯವಾಗಿರುವ ಪಠ್ಯಪುಸ್ತಕಗಳಿಂದ ತಮಗೆ ಮುಜುಗರವಾಗಿದೆ ಎಂದು ತಮ್ಮ ಪತ್ರದಲ್ಲಿ ಪ್ರತಿಪಾದಿಸಿದ್ದರು.

ಈ ಪತ್ರಕ್ಕೆ ಪ್ರತಿಯಾಗಿ ಶುಕ್ರವಾರ ರಾತ್ರಿ ಸಾರ್ವಜನಿಕ ಪ್ರಕಟಣೆ ಬಿಡುಗಡೆ ಮಾಡಿರುವ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯು, ಒಮ್ಮೆ ಪಠ್ಯಪುಸ್ತಕಗಳು ಪ್ರಕಟಗೊಂಡ ನಂತರ ಪಠ್ಯಪುಸ್ತಕ ಅಭಿವೃದ್ಧಿ ಸಮಿತಿಗಳ ಸದಸ್ಯರಾಗಿರುವ ಯಾದವ್ ಮತ್ತು ಪಾಲ್ಷಿಕರ್ ಅದಕ್ಕೆ ಬದ್ಧವಾಗಿರಬೇಕಾಗುತ್ತದೆ ಹಾಗೂ ಶೈಕ್ಷಣಿಕ ಸಾಮಗ್ರಿಗಳ ಹಕ್ಕುಸ್ವಾಮ್ಯವು ಮಂಡಳಿಯ ಸ್ವಾಯತ್ತ ಸಮಿತಿಯ ಬಳಿಯೇ ಉಳಿದಿದೆ. ಅಲ್ಲದೆ ಈ ವ್ಯವಸ್ಥೆಗೆ ಪಠ್ಯಪುಸ್ತಕ ಅಭಿವೃದ್ಧಿ ಸಮಿತಿಗಳ ಎಲ್ಲ ಸದಸ್ಯರೂ ಲಿಖಿತ ಸಮ್ಮತಿ ನೀಡಿದ್ದಾರೆ ಎಂದೂ ಹೇಳಿದೆ.

"ಪಠ್ಯಪುಸ್ತಕ ಅಭಿವೃದ್ಧಿ ಸಮಿತಿಗಳಲ್ಲಿ ಹಲವು ವಿಧದ ಸಾಮರ್ಥ್ಯದೊಂದಿಗೆ ಇರುವ ಸದಸ್ಯರ ಪಾತ್ರವು ಪಠ್ಯಪುಸ್ತಕಗಳನ್ನು ಹೇಗೆ ವಿನ್ಯಾಸಗೊಳಿಸಬೇಕು ಹಾಗೂ ಅಭಿವೃದ್ಧಿಗೊಳಿಸಬೇಕು ಎಂಬುದರ ಕುರಿತು ಸಲಹೆ ನೀಡಲು ಅಥವಾ ತಮ್ಮ ವಿಷಯಗಳನ್ನು ಅಭಿವೃದ್ಧಿಪಡಿಸಲು ಕೊಡುಗೆ  ನೀಡಲಷ್ಟೇ ಸೀಮಿತವೇ ಹೊರತು ಅದರಾಚೆಗೆ ಯಾವ ಅಧಿಕಾರವೂ ಇಲ್ಲ. ಶಾಲಾ ಹಂತದಲ್ಲಿನ ಪಠ್ಯಪುಸ್ತಕಗಳ ಅಭಿವೃದ್ಧಿಯು ನಮ್ಮ ಜ್ಞಾನ ಹಾಗೂ ವಿಷಯ ತಜ್ಞತೆಯನ್ನು ಆಧರಿಸಿದೆ. ಹೀಗಾಗಿ, ಯಾವುದೇ ಹಂತದಲ್ಲಿ ವೈಯಕ್ತಿಕ ಕರ್ತೃತ್ವವನ್ನು ಚಲಾಯಿಸಲು ಸಾಧ್ಯವಿಲ್ಲ. ಆದ್ದರಿಂದ ಯಾವುದೇ ಸದಸ್ಯನೂ ಸಹಭಾಗಿತ್ವದಿಂದ ಹಿಂದೆ ಸರಿಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ" ಎಂದು ತನ್ನ ಪ್ರಕಟಣೆಯಲ್ಲಿ NCERT ಸ್ಪಷ್ಟೀಕರಣ ನೀಡಿದೆ.

ಪಠ್ಯಪುಸ್ತಕಗಳಲ್ಲಿನ ಸಲಹೆಗಾರರ ಶೈಕ್ಷಣಿಕ ಕೊಡುಗೆಯನ್ನು ಮಾನ್ಯ ಮಾಡಲು ಹಾಗೂ ದಾಖಲೀಕರಣದ ಭಾಗವಾಗಿ ಎಲ್ಲ ಸಲಹೆಗಾರರ ಹೆಸರನ್ನು ಎಲ್ಲ ಪಠ್ಯಪುಸ್ತಕಗಳಲ್ಲಿ ಮುದ್ರಿಸುವುದನ್ನು ಮುಂದುವರಿಸುವುದಾಗಿಯೂ NCERT ಸ್ಪಷ್ಟಪಡಿಸಿದೆ.

share
Next Story
X