Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾಂಗ್ರೆಸ್ ಗ್ಯಾರಂಟಿಗೆ ಬಿಜೆಪಿಯಿಂದ...

ಕಾಂಗ್ರೆಸ್ ಗ್ಯಾರಂಟಿಗೆ ಬಿಜೆಪಿಯಿಂದ ವ್ಯರ್ಥಾಲಾಪ: ಉಡುಪಿ ಜಿಲ್ಲಾ ಕಾಂಗ್ರೆಸ್

10 Jun 2023 7:41 PM IST
share
ಕಾಂಗ್ರೆಸ್ ಗ್ಯಾರಂಟಿಗೆ ಬಿಜೆಪಿಯಿಂದ ವ್ಯರ್ಥಾಲಾಪ: ಉಡುಪಿ ಜಿಲ್ಲಾ ಕಾಂಗ್ರೆಸ್

ಉಡುಪಿ, ಜೂ.10: ವಿಧಾನಸಭೆಯಲ್ಲಿ ಪ್ರತಿಪಕ್ಷವಾಗಿ ತನ್ನ ನಾಯಕನನ್ನು ಆಯ್ಕೆ ಮಾಡುವ ಕನಿಷ್ಟ ಸಾಮರ್ಥ್ಯ ವನ್ನೂ ತೋರದ ಬಿಜೆಪಿ, ತನ್ನ ಅಸ್ತಿತ್ವ ತೋರಿಸಿಕೊಳ್ಳುವ ಸಲುವಾಗಿ  ಕಾಂಗ್ರೆಸ್ ನೀಡಿದ ಗ್ಯಾರಂಟಿಗಳ ಬಗ್ಗೆ ವ್ಯರ್ಥ ಆಲಾಪ ಮಾಡುತ್ತಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿಕೆಯಲ್ಲಿ ಟೀಕಿಸಿದೆ.

ವಿದ್ಯುತ್ ಬಿಲ್ ಯುನಿಟಿಗೆ 70 ಪೈಸೆ ಹೆಚ್ಚಳ ಆದೇಶ ಬಿಜೆಪಿ ಆಡಳಿತಾ ವಧಿಯದ್ದೇ ಹೊರತು ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರದ್ದಲ್ಲ. 22-23ನೇ ಸಾಲಿನ ಇಂಧನ ಹೊಂದಾಣಿಕೆ ಶುಲ್ಕ, ಆರ್ಥಿಕ ಕ್ರೋಢೀಕರಣದ ಗುರಿಯೊಂದಿಗೆ ರಾಜ್ಯದ 5ಎಸ್ಕಾಂಗಳು ಈ ವರ್ಷಾರಂಭದಲ್ಲಿ ಸಲ್ಲಿಸಿದ ಬೇಡಿಕೆಯಂತೆ ಕರ್ನಾಟಕ ವಿಧ್ಯುತ್ ನಿಯಂತ್ರಣ ಆಯೋಗ ಎಪ್ರಿಲ್ ಒಂದರಿಂದಲೇ ಪೂರ್ವಾನ್ವಯವಾಗುವಂತೆ ಮೇ 8ರಂದು ಈ ಪ್ರಸ್ತಾವನೆ ಅನುಮೋದಿಸಿ ಮೇ 12ರಂದು ಆದೇಶಿಸಿತ್ತು. ಆಗ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರಲಿಲ್ಲ ಎಂದು ಹೇಳಿಕೆ ಬಹಿರಂಗ ಪಡಿಸಿದೆ. ಆದರೆ 200 ಯುನಿಟ್ ಉಚಿತ ವಿದ್ಯುತ್  ಹಾಗೂ ಇತರ ಗ್ಯಾರಂಟಿಗಳ ವಿರುದ್ದ ಅಪಪ್ರಚಾರ ಮಾಡುತ್ತಲೇ ಇರುವ ಬಿಜೆಪಿ, ಈ ಬಿಲ್ ದರ ಏರಿಕೆ ಯನ್ನು  ಕಾಂಗ್ರೆಸ್ಸಿನ ತಲೆಗೆ ಕಟ್ಟಲು ನೋಡಿ ತಾನು ಜನ ವಿರೋಧಿ ಎಂಬುದನ್ನು ಸಾಬೀತು ಮಾಡಿದೆ ಎಂದು ಕಾಂಗ್ರೆಸ್ ಹೇಳಿದೆ.

ಒಂದು ಅಂದಾಜಿನಂತೆ ರಾಜ್ಯದ ಈ ಎಲ್ಲ ಉಚಿತ ಯೋಜನೆಗಳಿಗೆ ಬೇಕಿರುವುದು ಸುಮಾರು 53ರಿಂದ 56ಸಾವಿರ ಕೋಟಿ ರೂ. ಈ ಉಚಿತ ಯೋಜನೆಯ ಗ್ಯಾರಂಟಿಯಿಂದ ದೇಶ ದಿವಾಳಿಯಾಗುತ್ತದೆ ಎನ್ನುವ ದೇಶದ ಪ್ರಧಾನಿ ಆದಿಯಾಗಿ ಬಿಜೆಪಿ ನಾಯಕರಿಗೆ ದೇಶದ 6.25ಲಕ್ಷ  ಕೋಟಿಯ ಉದ್ಧಿಮೆಯನ್ನು ಖಾಸಗಿಯವರಿಗೆ ನೀಡಿದಾಗ, ದೇಶದ ಬೃಹತ್ ಉದ್ಧಿಮೆದಾರರಿಗೆ 2.25ಲಕ್ಷ ಕೋಟಿ ರೂ. ತೆರಿಗೆ ವಿನಾಯತಿ ನೀಡಿದಾಗ, ಬೃಹತ್ ಉದ್ದಿಮೆದಾರರ ಸುಮಾರು 10 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದಾಗ, ತಮ್ಮ ವೈಯಕ್ತಿಕ ಪ್ರತಿಷ್ಟೆಗಾಗಿ ಅನಗತ್ಯ ಯೋಜನೆಗಳಿಗಾಗಿ ಕೋಟಿಗಟ್ಟಲೆ ಹಣ ವ್ಯಯಿಸಿದಾಗ ಯಾಕೆ ದಿವಾಳಿತನ ಗೋಚರಿಸಲಿಲ್ಲ ಎಂದು ಪ್ರಶ್ನಿಸಿದೆ.

ಈಗ ತಾನೆ ಅಧಿಕಾರ ಹಿಡಿದ ರಾಜ್ಯ ಸರಕಾರದ ಉಚಿತ ಯೋಜನೆಗಳನ್ನು ಟೀಕಿಸುವವರು ಈ ಹಿಂದಿನ ಅವಧಿ ಯಲ್ಲಿ ಕಾಂಗ್ರೆಸ್ ಪಕ್ಷ  ನೀಡಿದ ಯಶಸ್ವಿ ಆಡಳಿತ, ಆರ್ಥಿಕ ನೀತಿ ಮತ್ತು ಅಂದು ಜಾರಿಗೆ ತಂದ ಯೋಜನೆಗಳ ಬಗ್ಗೆ ಪುನರಾವಲೋಕನ ಮಾಡಿಕೊಳ್ಳಲಿ. ಸೋಲಿನಿಂದ ಧೃತಿಗೆಟ್ಟು ಸುಳ್ಳು ಹೇಳಿಕೆಗಳ ಮೂಲಕ ಜನರ ದಿಕ್ಕು ತಪ್ಪಿಸುತ್ತೇವೆ ಎಂಬ ಭ್ರಮೆಯನ್ನು ಬಿಟ್ಟು  ತಾಕತ್ತಿದ್ದರೆ ಈ ಉಚಿತ ಜನಪರ ಯೋಜನೆಗಳು ಬೇಕೇ ಬೇಡವೇ ಎಂಬುದನ್ನು ಜನರ ಮುಂದೆ ನೇರವಾಗಿ ಹೇಳಲಿ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
Next Story
X