Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಂಗ್ರೆಸ್ ಸರಕಾರದಲ್ಲಿ ಕಾಸಿಗಾಗಿ...

ಕಾಂಗ್ರೆಸ್ ಸರಕಾರದಲ್ಲಿ ಕಾಸಿಗಾಗಿ ಪೋಸ್ಟಿಂಗ್‍: ಎಚ್.ಡಿ.ಕುಮಾರಸ್ವಾಮಿ ಆರೋಪ

10 Jun 2023 2:23 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕಾಂಗ್ರೆಸ್ ಸರಕಾರದಲ್ಲಿ ಕಾಸಿಗಾಗಿ ಪೋಸ್ಟಿಂಗ್‍: ಎಚ್.ಡಿ.ಕುಮಾರಸ್ವಾಮಿ ಆರೋಪ

ಬೆಂಗಳೂರು, ಜೂ.10: ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರಿಗಳ ಪೋಸ್ಟಿಂಗ್‍ಗೆ ದರ ನಿಗದಿ ಮಾಡಿದೆ. ವಿದೇಶಿ ಪ್ರವಾಸದಲ್ಲಿರುವ ಸಚಿವರೊಬ್ಬರ ಇಲಾಖೆಗೆ ವರ್ಗ ಆಗಿರುವ ಹಿರಿಯ ಅಧಿಕಾರಿ ಒಬ್ಬರಿಗೆ ಅಧಿಕಾರ ವಹಿಸಿಕೊಳ್ಳಲು ಸ್ವತಃ ಸಚಿವರೆ ಅವಕಾಶ ನೀಡಿಲ್ಲ, ಯಾಕೆ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.

ಶನಿವಾರ ನಗರದಲ್ಲಿರುವ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬೆಂಗಳೂರು ನಗರದ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಭಾಗಿಯಾಗುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ವಿದೇಶಿ ಪ್ರವಾಸದಲ್ಲಿರುವ ಆ ಸಚಿವರು ಯಾರು? ಆ ಸಚಿವರ ಗಮನಕ್ಕೆ ಬಾರದೆಯೇ ಅವರ ಇಲಾಖೆಗೆ ಪೋಸ್ಟಿಂಗ್ ಆದ ಆ ಅಧಿಕಾರಿ ಯಾರು? ಎನ್ನುವುದನ್ನು ಬಹಿರಂಗ ಮಾಡಲಿ. ಮೊದಲು ಇವರು ನನ್ನ ಬಗ್ಗೆ ಲಘುವಾಗಿ ಮಾತಾನಾಡುವುದನ್ನು ನಿಲ್ಲಿಸಲಿ ಎಂದು ಅವರು ಕಿಡಿಕಾರಿದರು.

ಮುಖ್ಯಮಂತ್ರಿ ಅವರೇ ಆ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದಾರೆ. ಅದಕ್ಕೆ ಸಂಬಂಧಪಟ್ಟ ಮಂತ್ರಿ ವಿದೇಶದಲ್ಲಿ ಇದ್ದಾರೆ. ಸಿಎಂ ಆದೇಶ ಮಾಡಿದ್ದರೂ, ನಾನು ಬರುವವರೆಗೂ ಅಧಿಕಾರ ತೆಗೆದುಕೊಳ್ಳಬೇಡಿ ಅಂತ ತಾಕೀತು ಮಾಡಿದ್ದಾರಂತೆ. ಹಾಗಾದರೆ ಎಷ್ಟು ಹಣ ಕೊಟ್ಟು ಬಂದರು ಈ ಅಧಿಕಾರಿ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಈಗ ‘ವರ್ಗಾವಣೆ ಜ್ಯೋತಿ' ಕಾರ್ಯಕ್ರಮ ನಡೆಯುತ್ತಿದೆ. ಈ ದಂಧೆ ಬಗ್ಗೆ ಏನು ಹೇಳುತ್ತಾರೆ ಇವರು. ಎಸಿಬಿ ದಾಳಿಗೆ ಒಳಗಾಗಿದ್ದ ಇನ್ನೊಬ್ಬ ಅಧಿಕಾರಿಯನ್ನು ಸಿಎಂ ಕಚೇರಿಯಲ್ಲಿಯೆ ಇಟ್ಟುಕೊಂಡಿದ್ದಾರೆ. ಬಿಜೆಪಿ ಸರಕಾರದ ಬಗ್ಗೆ 40 ಪಸೆರ್ಂಟ್ ಬಗ್ಗೆ ಮಾತಾಡಿದ್ದರು. ಹಾದಿಬೀದಿಯಲ್ಲಿ ಜಾಗಟೆ ಹೊಡೆದುಕೊಂಡು ಪ್ರಚಾರ ಮಾಡಿದರು. ಈಗ ನೋಡಿದರೆ ಅಧಿಕಾರಿಗಳ ವರ್ಗಾವಣೆಯಲ್ಲಿ ದಂಧೆ ಶುರು ಮಾಡಿಕೊಂಡಿದ್ದಾರೆ ಎಂದು ಅವರು ಟೀಕಿಸಿದರು.

ರಾಜಕೀಯ ನಿವೃತ್ತಿಯ ಸವಾಲು: ನಾನು ಮುಖ್ಯಮಂತ್ರಿ ಆಗಿದ್ದಾಗ ಹಣ ಪಡೆದು ಪೋಸ್ಟಿಂಗ್ ಮಾಡಿದ್ದೆ ಎನ್ನುವುದನ್ನು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಹೊಂದುತ್ತೆನೆ ಎಂದ ಕುಮಾರಸ್ವಾಮಿ, ಈಗ ಅಧಿಕಾರಿಗಳ ಪೋಸ್ಟಿಂಗ್ ಗೆ ಯಾರು? ಎಲ್ಲಿ ಕೂತು ದರ ನಿಗದಿ ಮಾಡುತ್ತಿದ್ದಾರೆ? ಎನ್ನುವುದನ್ನು ಅಧಿಕಾರಿಗಳೆ ಮಾತನಾಡುತ್ತಿದ್ದಾರೆ ಎಂದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X