ವಿಟ್ಲ : ವಿವಾಹಿತ ಮಹಿಳೆ ಆತ್ಮಹತ್ಯೆ

ವಿಟ್ಲ : ವಿವಾಹಿತ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕರೋಪಾಡಿ ಗ್ರಾಮದ ಕಲಾಯಿಗುತ್ತು ಎಂಬಲ್ಲಿ ನಡೆದಿದೆ.
ಮಂಗಳೂರು ತಾಲೂಕು ಯೆಯ್ಯಾಡಿ, ಕೊಂಚಾಡಿ ಕೊಪ್ಪಳ ಕಾಡು ನಿವಾಸಿ ಸುರೇಶ್ ಚೌಟ ಎಂಬವರ ಪುತ್ರಿ ಪ್ರೀತಿ ಶೆಟ್ಟಿ (37) ಮೃತ ಮಹಿಳೆ.
ಪ್ರೀತಿ ಶೆಟ್ಟಿ ಅವರು ತನ್ನ ಮಗುವನ್ನು ಕಳೆದುಕೊಂಡು ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಜೂ.9ರಂದು ತೋಟಕ್ಕೆ ಸಿಂಪಡಿಸಲೆಂದು ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಕಲಾಯಿಗುತ್ತು ಮನೆಯಲ್ಲಿ ತಂದಿಟ್ಟಿದ್ದ ಯಾವುದೋ ವಿಷ ಪದಾರ್ಥವನ್ನು ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು.
ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಇಂದು ರಾತ್ರಿ ವೇಳೆ ಮೃತಪಟ್ಟಿರುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story