ಕೊಟ್ಟ ಮಾತಿನಂತೆ ಕಾಂಗ್ರೆಸ್ ಸರ್ಕಾರ ನಡೆದುಕೊಂಡಿದೆ: ಎಂಬಿ ಪಾಟೀಲ

ವಿಜಯಪುರ: ಕೊಟ್ಟ ಮಾತಿನಂತೆ ಕಾಂಗ್ರೆಸ್ ಸರ್ಕಾರ ನಡೆದುಕೊಂಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಹಾಗೂ ವಿಜಯಪುರ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ ಹೇಳಿದರು.
ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿ ರವಿವಾರ ಮಾತನಾಡಿದ ಅವರು, ಉಳಿದ ಯೋಜನೆಗಳು ಕೆಲವೇ ದಿನಗಳಲ್ಲಿ ಜಾರಿಯಾಗಲಿವೆ. ಕ್ಯಾಬಿನೆಟ್ ನಲ್ಲಿ ಮಂಜೂರಾಗಿವೆ. ಆದಷ್ಟು ಬೇಗನೆ ಜಾರಿ ಮಾಡುತ್ತೇವೆ ಎಂದು ತಿಳಿಸಿದರು.
ಮಹಿಳೆಯರಿಗೆ ಸಮಾನ ಹಕ್ಕು ಸಿಗಬೇಕು ಎಂದು ಬಸವಣ್ಣನವರು ಬಯಸಿದ್ದರು. ಬಸವಣ್ಣನವರ ಆಶಯದಂತೆ ಸಿದ್ದರಾಮಯ್ಯ ಯೋಜನೆ ಜಾರಿ ಮಾಡಿದ್ದಾರೆ ಎಂದರು.
ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ಇಡುತ್ತೇವೆ. ಆದಷ್ಟು ಬೇಗ ಪ್ರಸ್ತಾವಣೆ ನೀಡಿ ಅನುಮೋದನೆ ಪಡೆಯುತ್ತೇವೆ ಎಂದರು.
Next Story





