Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನುಡಿದಂತೆ ನಡೆದಿದ್ದೇವೆ, ಗ್ಯಾರಂಟಿಗಳ...

ನುಡಿದಂತೆ ನಡೆದಿದ್ದೇವೆ, ಗ್ಯಾರಂಟಿಗಳ ಜಾರಿಗೆ ಬದ್ಧರಾಗಿದ್ದೇವೆ: ಸಚಿವ ಪ್ರಿಯಾಂಕ್ ಖರ್ಗೆ

11 Jun 2023 4:30 PM IST
share
ನುಡಿದಂತೆ ನಡೆದಿದ್ದೇವೆ, ಗ್ಯಾರಂಟಿಗಳ ಜಾರಿಗೆ ಬದ್ಧರಾಗಿದ್ದೇವೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದಂತೆ ಅಧಿಕಾರಕ್ಕೆ ಬಂದ ನಂತರ ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಸರ್ಕಾರಿ ಸಾರಿಗೆಯಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಯೋಜನೆಗೆ ಚಾಲನೆ ನೀಡುವ ಮೂಲಕ ನುಡಿದಂತೆ ನಡೆದಿದ್ದೇವೆ. ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕಲಬುರಗಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಶಕ್ತಿ ಯೋಜನೆಗೆ ಚಾಲನೆ ನೀಡಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ರಾಜ್ಯ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಹಾಕಿಕೊಳ್ಳುತ್ತಿದೆ. ಮೊದಲ ಪ್ರಯತ್ನ ವಾಗಿ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ರಾಜ್ಯದ 14.50 ಕೋಟಿ ಹಾಗೂ ಜಿಲ್ಲೆಯ 1.50 ಕೋಟಿ ಮಹಿಳೆಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದರು.

ಪಕ್ಷ ಅಧಿಕಾರಕ್ಕೆ ಬಂದ ಒಂದು ತಿಂಗಳ ಒಳಗಾಗಿ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ಮಾರ್ಗ ಸೂಚಿ ತಯಾರಿಸಲಾಗಿದ್ದು ಕನಿಷ್ಠ 50,000 ಕೋಟಿ ಹಣ ಬೇಕಾಗುತ್ತದೆ. ಇದರಿಂದ ಆರ್ಥಿಕ ಹೊರೆಯಾದರೂ ಕೂಡಾ ಅದನ್ನು ನಿಭಾಯಿಸುವ ಶಕ್ತಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಅವರಿಗಿದ್ದು ಈಗಾಗಲೇ ಈ ಯೋಜನೆಗಳ ಜಾರಿಗೆ ಬೇಕಾಗುವ ಹಣಕಾಸು ಹೊಂದಾಣಿಕೆಗೆ ಪರ್ಯಾಯ ಮಾರ್ಗ ಕೂಡಾ ಕಂಡುಹಿಡಿಯಲಾಗಿದೆ ಎಂದರು.

ಐದು ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ರಾಜ್ಯದ ಜನರ ಆರ್ಥಿಕ ಸ್ಥಿರತೆ ನಿರ್ಮಾಣ ಮಾಡಲಾಗುವುದು ಎಂದು ಪ್ರತಿಪಾದಿಸಿದ ಸಚಿವರು ಪಕ್ಷದ ಪ್ರಣಾಳಿಕೆಗಳನ್ನು ಹಾಗೂ ವಿಶೇಷವಾಗಿ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ 10 ಅಂಶಗಳ ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು ಅವುಗಳನ್ನೂ ಕೂಡಾ ಜಾರಿಗೊಳಿಸಲಾಗುವುದು ಎಂದರು.

ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಪ್ರಜಾಧ್ವನಿ ಯಾತ್ರೆಯ ಸಂದರ್ಭದಲ್ಲಿ ನಾಡಿನ ಜನರ ಸಂಕಷ್ಟಗಳನ್ನು ಅರಿತು ಅವರ ಆರ್ಥಿಕ ಸಬಲತೆಗೆ ಬೇಕಾಗುವ ಕಾರ್ಯಕ್ರಮಗಳನ್ನು ರೂಪಿಸಲು ನಿರ್ಧಾರ ಕೈಗೊಳ್ಳಲಾಯಿತು. ಅದರ ಪರಿಣಾಮವಾಗಿ ಪಕ್ಷ ಐದು ಪ್ರಮುಖ ಗ್ಯಾರಂಟಿಗಳನ್ನು ಘೋಷಿಸಲಾಯಿತು. ಈಗ ಅವುಗಳನ್ನು ಜಾರಿಗೆ ತರುವ ಬದ್ಧತೆ ಸರ್ಕಾರಕ್ಕಿದ್ದು ವಿರೋಧ ಪಕ್ಷ ಬಿಜೆಪಿ ಈ ಕುರಿತು ಅನಗತ್ಯ ಗೊಂದಲ ಸೃಷ್ಠಿಸುವ ಅಗತ್ಯವಿಲ್ಲ ಎಂದರು.

ಸಚಿವರು ಐದು ಸರ್ಕಾರಿ ಸಾರಿಗೆ ಬಸ್ ಗಳಲ್ಲಿದ್ದ ಮಹಿಳಾ ಪ್ರಯಾಣಿಕರಿಗೆ ಟಿಕೇಟ್ ನೀಡುವ ಮೂಲಕ ಯೋಜನೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ, ಕನೀಜ್ ಫಾತೀಮಾ, ಜಿಲ್ಲಾಧಿಕಾರಿ ಯಶವಂತ ಗುರುಕರ್, ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ ಗಿರೀಶ್ ಬದೋಲೆ, ಕೆಕೆಆರ್ ಡಿಬಿ ಕಾರ್ಯದರ್ಶಿ ಅನಿವೃದ್ಧಿ ಶ್ರವಣ್, ನಗರ ಪೊಲೀಸ್ ಆಯುಕ್ತ ಚೇತನ್ ಆರ್, ಮಹಾನಗರ ಪಾಲಿಕೆ ಕಮೀಷನರ್ ಭುವನೇಶ ಪಾಟೀಲ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
Next Story
X