ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪ್ರಸಾರ ಕಡಿವಾಣಕ್ಕೆ ಕ್ರಮ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ, ರಾಷ್ಟ್ರ ನಾಯಕರ ಬಗ್ಗೆ ಇಲ್ಲ ಸಲ್ಲದ ಪೋಸ್ಟ್ ಮಾಡುವುದಕ್ಕೆ ಕಡಿವಾಣ ಹಾಕಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಹೇಳಿದರು.
ರವಿವಾರ ಕಲಬುರಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ಪ್ರಮುಖ 5 ಉಚಿತ ಗ್ಯಾರಂಟಿ ಯೋಜನೆಯಲ್ಲಿ ಒಂದಾದ "ಶಕ್ತಿ" ಯೋಜನೆಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಮಾಜದ ಸ್ವಾಸ್ಥ್ಯಕಗಕರ ಧಕ್ಕೆ ತರುವಂತಹ ಪೋಸ್ಟ್ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಸಮಾಜದ ಅಶಾಂತಿಗೆ ಕಾರಣಾಗುವುದನ್ನು ಕಂಡು ನಮ್ಮ ಸರ್ಕಾರ ಸುಮ್ಮನೆ ಕೂಡುವುದಿಲ್ಲ ಎಂದರು.
ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರವೇ ಸಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ಪೋಸ್ಟ್ ಗೆ ಕಡಿವಾಣ ಹಾಕಲಾಗುವುದು. ಇದು ತಮ್ಮ ಇಲಾಖೆಯ ವ್ಯಾಪ್ತಿಗೆ ಬರಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
ಶಾಸಕ ಅಲ್ಲಮಪ್ರಭು ಪಾಟೀಲ ಜೊತೆಗಿದ್ದರು.
ಸಾರ್ವಜನಿಕರ ಆವಾಹಲು ಸ್ವೀಕರಿಸಿದ ಸಚಿವರು
ನಗರದ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ಸಾರ್ವಜನಿಕರ ಅವಾಹಲು ಸ್ವೀಕರಿಸಿದರು.ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜನರ ಸಮಸ್ಯೆ ಆದಷ್ಟು ಬೇಗ ಬಗೆ ಹರಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.








