Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ತ್ರೀಯರ ಸಬಲೀಕರಣಕ್ಕೆ ಶಕ್ತಿ ಯೋಜನೆ:...

ಸ್ತ್ರೀಯರ ಸಬಲೀಕರಣಕ್ಕೆ ಶಕ್ತಿ ಯೋಜನೆ: ಸಚಿವ ಡಾ.ಎಚ್.ಸಿ. ಮಹದೇವಪ್ಪ

ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯಕ್ಕೆ ಸಚಿವರಿಂದ ಚಾಲನೆ

11 Jun 2023 6:29 PM IST
share
ಸ್ತ್ರೀಯರ ಸಬಲೀಕರಣಕ್ಕೆ ಶಕ್ತಿ ಯೋಜನೆ: ಸಚಿವ ಡಾ.ಎಚ್.ಸಿ. ಮಹದೇವಪ್ಪ
ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯಕ್ಕೆ ಸಚಿವರಿಂದ ಚಾಲನೆ

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್  ಸರ್ಕಾರ  ಬಂದ ಬಳಿಕ ಕರ್ನಾಟಕದಲ್ಲಿನ ಪ್ರತಿಯೊಬ್ಬ ಮಹಿಳೆಯರಿಗೆ ಅನುಕೂಲವಾಗುವಂತೆ ಕಾರ್ಯಕ್ರಮಗಳನ್ನು ನೀಡಿದೆ. ಸ್ತ್ರೀಯರ ಸಬಲೀಕರಣಕ್ಕಾಗಿ ರಚನೆಯಾಗಿರುವ ಕಾರ್ಯಕ್ರಮಗಳಲ್ಲಿ "ಶಕ್ತಿ ಯೋಜನೆಯು ಮಹಿಳೆಯರಿಗೆ ಉಚಿತ ಪ್ರಯಾಣ" ಕಾರ್ಯಕ್ರಮವು  ಪ್ರಮುಖವಾಗಿದ್ದು ಇಂದಿನಿಂದ ರಾಜ್ಯದಲ್ಲಿ ಅನುಷ್ಟಾನಗೊಳಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ  ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.

ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮೈಸೂರು ವಿಭಾಗದ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರಿಗೆ ನಗರ ಸಾರಿಗೆ ,ಸಾಮಾನ್ಯ ಸಾರಿಗೆ ಮತ್ತು ವೇಗದೂತ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣದ ಶಕ್ತಿ ಯೋಜನೆ ಕಾರ್ಯಕ್ರಮಕ್ಕೆ ರವಿವಾರ ವಿದ್ಯುಕ್ತವಾಗಿ  ಚಾಲನೆ ನೀಡಿ ಮಾತಾಡಿದರು.

ಕರ್ನಾಟಕದಲ್ಲಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಚನೆಯಾಗಿರುವ ಕಾಂಗ್ರೆಸ್ ಸರ್ಕಾರವು ಪ್ರತಿಯೊಬ್ಬರಿಗೂ ಉತ್ತಮವಾದ ಆಡಳಿತವನ್ನು ನೀಡುತ್ತಿದೆ. ಈ ಬಾರಿ ಕಾಂಗ್ರೆಸ್ ಸರ್ಕಾರವು ನೀಡಿರುವ ಐದು ಗ್ಯಾರೆಂಟಿಗಳಲ್ಲಿ ಮೊದಲನೆಯದಾಗಿ ಶಕ್ತಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಉಳಿದ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದರು.

ಶಕ್ತಿ ಯೋಜನೆಯಡಿಯಲ್ಲಿ  ರಾಜ್ಯದಲ್ಲಿ ಪ್ರತಿನಿತ್ಯ 40 ಲಕ್ಷಕ್ಕೂ ಅಧಿಕ ಮಹಿಳೆಯರು ಪ್ರಯಾಣ ಮಾಡುವರು. ಇದರಿಂದ  ಸರ್ಕಾರಕ್ಕೆ ವರ್ಷಕ್ಕೆ  ರೂ. 4,050  ಕೋಟಿಯಷ್ಟು ಖರ್ಚು ಬರಲಿದೆ. ಪ್ರತಿ ಮಹಿಳೆಯರು ಕೂಡ ಸ್ವಾವಲಂಬಿಯಾಗಿ ಜೀವನ ಮಾಡಲು ನಮ್ಮ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಮಾಡಲಿದೆ ಎಂದು ತಿಳಿಸಿದರು. 

ಮುಂದಿನ ದಿನಗಳಲ್ಲಿ ಸರ್ಕಾರವು ನೀಡಿರುವ ಉಳಿದ ಯೋಜನೆಗಳಾದ ಗೃಹ ಲಕ್ಷ್ಮಿ ,ಅನ್ನ ಭಾಗ್ಯ , ಯುವ ನಿಧಿ, ಗೃಹ ಜ್ಯೋತಿ ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಚುನಾವಣಾ ಸಂದರ್ಭದಲ್ಲಿ  ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಕಾರ್ಡ್ ನೀಡಲಾಗಿದೆ ಅದರಂತೆಯೇ ಪ್ರತಿಯೊಬ್ಬರಿಗೂ ನಮ್ಮ ಸರ್ಕಾರದ ಯೋಜನೆಗಳು ತಲುಪುವಂತೆ ಮಾಡಲಾಗುವುದು ರಾಜ್ಯದಲ್ಲಿ ಇರುವ ಪ್ರತಿಯೊಂದು ಕುಟುಂಬವು ಸಹ ಸ್ವಾವಲಂಬನೆಯಿಂದ  ಜೀವನ ನಡೆಸುವಂತೆ ನಮ್ಮ ಸರ್ಕಾರವು ಯೋಜನೆಗಳನ್ನು ರೂಪಿಸಿದೆ  ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕರುಗಳಾದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ಕೆ.ಹರೀಶ್ ಗೌಡ,  ವಿಧಾನಪರಿಷತ್ ಸದಸ್ಯರುಗಳಾದ ಎಚ್.ವಿಶ್ವನಾಥ್, ಮರಿತಿಬ್ಬೇಗೌಡ, ಡಿ. ತಿಮ್ಮಯ್ಯ, ಸಿ.ಎನ್‌.ಮಂಜೇಗೌಡ,   ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ಮೇಯರ್ ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ. ಗಾಯತ್ರಿ, ಮಹಾನಗರ ಪಾಲಿಕೆಯ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ ,    ಪೊಲೀಸ್  ಆಯುಕ್ತ ಬಿ ರಮೇಶ್ ಬಾನೋತ್, ಪೊಲೀಸ್ ಅಧಿಕ್ಷಕಿ ಸೀಮಾ ಲಾಟ್ಕರ್ ಹಾಗೂ ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗಳು ಉಪಸ್ಥಿತರಿದ್ದರು.

share
Next Story
X