ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿದ ಬಿಜೆಪಿ ಶಾಸಕರು

ಉಡುಪಿ: ಉಡುಪಿಗೆ ಆಗಮಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯರು ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್ ಅವರನ್ನು ಜಿಲ್ಲೆಯ ಶಾಸಕರು ಇಂದು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹಾಗೂ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಸಚಿವರನ್ನು ಉಡುಪಿಯ ಪ್ರವಾಸಿ ಮಂದಿರದಲ್ಲಿ ಭೇಟಿ ಮಾಡಿ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಉಪಸ್ಥಿತರಿದ್ದರು.
Next Story