Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಗೋಡ್ಸೆ ಭಕ್ತರನ್ನು ಬಿಜೆಪಿಯಿಂದ...

"ಗೋಡ್ಸೆ ಭಕ್ತರನ್ನು ಬಿಜೆಪಿಯಿಂದ ಹೊರದಬ್ಬಿರಿ ಇಲ್ಲವೇ ಗಾಂಧೀಜಿ ಪ್ರತಿಮೆಗೆ ನಮಸ್ಕರಿಸುವ ನಾಟಕ ನಿಲ್ಲಿಸಿ"

ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ಸವಾಲು

11 Jun 2023 9:38 PM IST
share
ಗೋಡ್ಸೆ ಭಕ್ತರನ್ನು ಬಿಜೆಪಿಯಿಂದ ಹೊರದಬ್ಬಿರಿ ಇಲ್ಲವೇ ಗಾಂಧೀಜಿ ಪ್ರತಿಮೆಗೆ ನಮಸ್ಕರಿಸುವ ನಾಟಕ ನಿಲ್ಲಿಸಿ
ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ಸವಾಲು

ಹೊಸದಿಲ್ಲಿ: ನಾಥೂರಾಮ್ ಗೋಡ್ಸೆಯನ್ನು ವೈಭವೀಕರಿಸಿ ಕೆಲವು ಬಿಜೆಪಿ ನಾಯಕರು ಹೇಳಿಕೆಗಳನ್ನು ನೀಡುತ್ತಿರುವ ಬಗ್ಗೆ ಕಾಂಗ್ರೆಸ್ ಪಕ್ಷವು ರವಿವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ‘‘ ಮಹಾತ್ಮಾ ಗಾಂಧೀಜಿಯವರ ಹಂತಕನ ಭಕ್ತರನ್ನು ನರೇಂದ್ರ ಮೋದಿಯವರು ಅವರ ಪಕ್ಷದಿಂದ ಹೊರದಬ್ಬಬೇಕು ಅಥವಾ  ಗಾಂಧೀಜಿ ಪ್ರತಿಮೆಗಳ ಮುಂದೆ ತಲೆಬಾಗಿ ನಮಿಸುವ  ನಾಟಕವನ್ನು ಕೊನೆಗೊಳಿಸಲಿ’’ ಎಂದು ಕಟಕಿಯಾಡಿದೆ.

ಗೋಡ್ಸೆಯನ್ನು ಭಾರತದ ಸುಪುತ್ರನೆಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಬಣ್ಣಿಸಿದ  ಮರುದಿನವೇ ಪ್ರಧಾನಿಯನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. ಬಿಜೆಪಿಯ ಹಿರಿಯ ನಾಯಕರು ಗೋಡ್ಸೆಯನ್ನು ವೈಭವೀಕರಿಸುತ್ತಿದ್ದರೆ ಪ್ರಧಾನಿ   ಆ ಬಗ್ಗೆ ಏನೂ ಹೇಳುತ್ತಿಲ್ಲ ಹಾಗೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.

‘‘ಇಂದು ನಾವು ಪ್ರಧಾನಿ ಮೋದಿಯವರಿಗೆ ಸವಾಲೆಸೆಯುತ್ತಿದ್ದೇವೆ.  ನಿಮ್ಮ ಪಕ್ಷದಿಂದ ಗೋಡ್ಸೆ ಭಕ್ತರನ್ನು ಹೊರಗೆಸೆಯಬೇಕು ಅತವಾ ಗಾಂಧೀಜಿ ಪ್ರತಿಮೆಯ ಮುಂದೆ ತಲೆಬಾಗಿ ನಮಸ್ಕರಿಸುವ ನಾಟಕವನ್ನು ಕೊನೆಗೊಳಿಸಬೇಕು. ದೇಶದಲ್ಲಿ ಗೋಡ್ಸೆ ಭಕ್ತರಿಗೆ ಸ್ಥಾನವಿಲ್ಲ. ಮೋದಿಜಿಯವರೇ , ಈ ಬಗ್ಗೆ ನೀವು ನಿರ್ಧರಿಸಬೇಕು’’ ಎಂದು ಕಾಂಗ್ರೆಸ್ ಹಿಂದಿಯಲ್ಲಿ ಟ್ವೀಟ್ ಮಾಡಿದೆ.
 
ಮೋದಿಯವರು ತನ್ನ ಜಪಾನ್ ಪ್ರವಾಸದ ವೇಳೆ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ ನಮಿಸುತ್ತಿರುವ ಛಾಯಾಚಿತ್ರವನ್ನು ಕೂಡಾ ಪ್ರಧಾನಿ ಮೋದಿ ಟ್ವೀಟಿಸಿದ್ದಾರೆ.

‘‘ಮೊದಲಿಗೆ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ನಾಥುರಾಮ್ ಗೋಡ್ಸೆಯನ್ನು ದೇಶಭಕ್ತನೆಂದು ಕರೆದಿದ್ದರು. ಈಗ ಕೇಂದ್ರ ಸಚಿವ  ಗಿರಿರಾಜ್ ಸಿಂಗ್ ಆತನ ಗುಣಗಾನ ಮಾಡಿದ್ದಾರೆ. ಆದರೆ, ಸ್ವಚ್ಛಭಾರತ ಆಂದೋಲನಕ್ಕೆ ಮಹಾತ್ಮಾಗಾಂಧೀಜಿಯರವ ಕನ್ನಡಕಗಳನ್ನೇ ಲೋಗೋ ಆಗಿ ಪರಿವರ್ತಿಸಿರುವ ವ್ಯಕ್ತಿಯು ತನ್ನ ಸಹದ್ಯೋಗಿಗಳ ವಿರುದ್ಧ ಯಾವುದೇ ಕ್ರಮವನ್ನು ಕೈಗೊಂಡಿಲ್ಲ’’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ಕೆಲವೇ ದಿನಗಳ ಮೊದಲು ಇನ್ನೋರ್ವ ಬಿಜೆಪಿ ನಾಯಕ, ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಕೂಡಾ ಗೋಡ್ಸೆಯನ್ನು ದೇಶಭಕ್ತನೆಂದು ಪ್ರಶಂಸಿದ್ದುದು ವಿವಾದಕ್ಕೆ ಕಾರಣವಾಗಿತ್ತು.

share
Next Story
X