ಸ್ವೀಡನ್ ನಲ್ಲಿ ಶೂಟೌಟ್: ಬಾಲಕ ಮೃತ್ಯು; ಮೂರು ಮಂದಿಗೆ ಗಾಯ

ಸ್ಟಾಕ್ಹೋಮ್: ಸ್ವೀಡನ್ನ ರಾಜಧಾನಿ ಸ್ಟಾಕ್ಹೋಮ್ನಲ್ಲಿ ಶನಿವಾರ ನಡೆದ ಗುಂಡಿನ ದಾಳಿಯಲ್ಲಿ 15 ವರ್ಷದ ಬಾಲಕ ಮೃತಪಟ್ಟಿದ್ದು ಇತರ ಮೂವರು ಗಾಯಗೊಂಡಿದ್ದಾರೆ. ಬಳಿಕ ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ದಕ್ಷಿಣ ಸ್ಟಾಕ್ಹೋಮ್ನ ಪ್ರಮುಖ ರಸ್ತೆಯ ವೃತ್ತದಲ್ಲಿ ಶನಿವಾರ ಸಂಜೆ ಇಬ್ಬರು ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದಾಗ 15 ವರ್ಷದ ಬಾಲಕ ಸ್ಥಳದಲ್ಲೇ ಮೃತನಾಗಿದ್ದಾನೆ. ಮತ್ತೊಬ್ಬ ಬಾಲಕ, 45 ವರ್ಷದ ಪುರುಷ ಹಾಗೂ 65 ವರ್ಷದ ಮಹಿಳೆ ಗುಂಡೇಟಿನಿಂದ ತೀವ್ರ ಗಾಯಗೊಂಡಿದ್ದು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಂಡಿನ ದಾಳಿ ನಡೆಸಿದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು ಸುಮಾರು 1 ಗಂಟೆಯ ಕಾರ್ಯಾಚರಣೆಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಸ್ಟಾಕ್ಹಾಮ್ ಪೊಲೀಸ್ ಇಲಾಖೆಯ ವಕ್ತಾರೆ ಟೋವೆ ಹಾಗ್ರನ್ನು ಉಲ್ಲೇಖಿಸಿ ಎಎಫ್ಪಿ ಸುದ್ಧಿಸಂಸ್ಥೆ ವರದಿ ಮಾಡಿದೆ.
Next Story





