Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲೆಯ ಅಭಿವೃದ್ಧಿ, ಕಾನೂನು...

ದ.ಕ. ಜಿಲ್ಲೆಯ ಅಭಿವೃದ್ಧಿ, ಕಾನೂನು ಸುವ್ಯವಸ್ಥೆಗೆ ಪ್ರಥಮ ಆದ್ಯತೆ: ಸಚಿವ ದಿನೇಶ್ ಗುಂಡೂರಾವ್

11 Jun 2023 10:52 PM IST
share
ದ.ಕ. ಜಿಲ್ಲೆಯ ಅಭಿವೃದ್ಧಿ, ಕಾನೂನು ಸುವ್ಯವಸ್ಥೆಗೆ ಪ್ರಥಮ ಆದ್ಯತೆ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ದ.ಕ. ಜಿಲ್ಲೆಯ ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಜಿಲ್ಲೆಗೆ ಮೊದಲ ಬಾರಿ ಭೇಟಿ ನೀಡಿದ ಅವರು ರವಿವಾರ ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ನಮ್ಮ ಪ್ರಥಮ ಆದ್ಯತೆ ಯಾವಾಗಲೂ ಅಭಿವೃದ್ಧಿ ಇರಬೇಕು. ಯೋಜನೆಗಳು  ಸರಿಯಾದ ರೀತಿಯಲ್ಲಿ ಅನುಷ್ಠಾನ ವಾದರೆ  ಮಾತ್ರ ನಮ್ಮ ಉದ್ದೇಶ ಈಡೇರುತ್ತದೆ.  ಇದರ ಜೊತೆಗೆ ಅಭಿವೃದ್ಧಿಗೆ ಪೂರಕವಾಗಿ ಕಾನೂನು ಸುವ್ಯವಸ್ಥೆ ಇರಬೇಕು. ಶಾಂತಿ, ನೆಮ್ಮದಿ, ಸಾಮರಸ್ಯ ಇದ್ದರೆ ಅಭಿವೃದ್ಧಿಗೆ ಪೂರಕವಾದ ವಾತಾವರಣ ಇರುತ್ತದೆ, ಜಿಲ್ಲೆಯಲ್ಲಿ ಕೆಲವೊಮ್ಮೆ ಕಾನೂನು ಸುವ್ಯವಸ್ಥೆ ಹದಗೆಡುವುದನ್ನು ನಾನು ಗಮನಿಸಿದ್ದೇನೆ. ಮುಂದೆ ಯಾವತ್ತೂ ಇಂತಹ ಪರಿಸ್ಥಿತಿ ಬರಬರಬಾರದು. ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ಜಿಲ್ಲಾಡಳಿತ, ಪೊಲೀಸ್ ಇಲಾಖೆ   ಯಾವುದೇ ಪಕ್ಷಪಾತವಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಶಾಂತಿ , ಸಾಮರಸ್ಯಕ್ಕೆ ಪೂರಕವಾದ ವಾತಾವರಣ ನಿರ್ಮಾಣ ಮಾಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ನೀಡಬೇಕು. ಸಾಮರಸ್ಯವನ್ನು ಕಾಪಾಡುವುದು  ಎಲ್ಲರ ಜವಾಬ್ದಾರಿಯಾಗಿದೆ. ಪ್ರಚೋದನೆ ಮಾಡುವುದು, ಬೆಂಕಿ ಹಚ್ಚುವುದು ಬಹಳ ಸುಲಭ. ಆದರೆ ಅದರ ನಿಯಂತ್ರಣ  ಮಾಡುವುದು ಮತ್ತು ಶಾಂತಿ ಸ್ಥಾಪನೆ ಕಷ್ಟದ ಕೆಲಸ. ಶಾಂತಿ, ಸಾಮರಸ್ಯ ಕಾಪಾಡಲು ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಮಳೆಗಾಲದಲ್ಲಿ ದ.ಕ.ಜಿಲ್ಲೆಯಲ್ಲಿ ಯಾವುದೇ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಮಳೆಗಾಲದಲ್ಲಿ ಸಂಭವಿಸುವ ಅನಾಹುತವನ್ನು ಎದುರಿಸಲು ಜಿಲ್ಲಾಡಳಿತ ಸಜ್ಜಾಗಬೇಕಾಗಿದೆ. ಮುಂದಿನ ವಾರ ತಾನು ಬಂದಾಗಿ ಜಿಲ್ಲೆಯ ಪ್ರಗತಿಯ ಬಗ್ಗೆ ಶಾಸಕರು, ಅಧಿಕಾರಿಗಳ ಉಪಸ್ಥಿತಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುವುದಾಗಿ ವಿವರಿಸಿದರು.

ಸಾರ್ವಜನಿಕರ  ಸಮಸ್ಯೆಗಳಿಗೆ ಸ್ಪಂದಿಸಲು ಉಸ್ತುವಾರಿ ಸಚಿವರ ಕಚೇರಿಯನ್ನು ಶೀಘ್ರದಲ್ಲೇ ಆರಂಭಿಸುವುದಾಗಿ ಮತ್ತು  ಜಿಲ್ಲೆಯ ಅಭಿವೃದ್ಧಿಗೆ ಎಲ್ಲರ ಸಹಾಯ,  ಸಹಕಾರವನ್ನು ಬಯಸುವುದಾಗಿ ತಿಳಿಸಿದರು.

ಸರಕಾರದ  ಯೋಜನೆಗಳು ಸರಿಯಾದ ರೀತಿಯಲ್ಲಿ ಅನುಷ್ಠಾನವಾಗಬೇಕು. ನೈಜ ಫಲಾನುಭವಿಗಳಿಗೆ ಸೌಲಭ್ಯ ಗಳು ತಲುಪಬೇಕು. ನಾನು ಉಸ್ತುವಾರಿ ಸಚಿವನಾಗಿ ಮುಂದೆ ಆಗಾಗ ಈ ಜಿಲ್ಲೆಗೆ ಆಗಮಿಸಿ , ತಾಲೂಕುಗಳಿಗೆ ಭೇಟಿ ಕೊಟ್ಟು ಅಭಿವೃದ್ಧಿ ಕಾರ್ಯಗಳ, ಸರಕಾರಿ ಯೋಜನೆಗಳ ಬಗ್ಗೆ  ಸರಿಯಾದ ಅನುಷ್ಠಾನದ ಬಗ್ಗೆ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಮತ್ತು ಸಾಮಾನ್ಯ ಜನರನ್ನು ಭೇಟಿಯಾಗಿ ಅವರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಸ್ಥಳೀಯಾಡಳಿತ ಸಂಸ್ಥೆಗಳು ಸೇರಿದಂತೆ ಎಲ್ಲ ಇಲಾಖೆಗಳು ಬಹಳ  ಚುರುಕಾಗಿ ಮತ್ತು ಜನರ ವಿಶ್ವಾಸವನ್ನು  ಗಳಿಸಿಕೊಂಡು  ಕೆಲಸ ಮಾಡುವ ವ್ಯವಸ್ಥೆಯನ್ನು  ಕಲ್ಪಿಸಿಕೊಡಲು ಪ್ರಯತ್ನ ಮಾಡುವುದಾಗಿ ತಿಳಿಸಿದರು.

ದ.ಕ.ಜಿಲ್ಲೆಯ ಉಸ್ತುವಾರಿಯನ್ನು ನನಗೆ ವಹಿಸಿರುವುದು ಹೆಮ್ಮೆಯ ವಿಚಾರ. ನನಗೆ ಈ ಜಿಲ್ಲೆಯ ಹತ್ತಿರದ ಸಂಬಂಧ ಇದೆ. ಹಲವು ವರ್ಷಗಳಿಂದ ಈ ಜಿಲ್ಲೆಯ ಸಂಪರ್ಕ ಹೊಂದಿದ್ದೇನೆ. ಇಲ್ಲಿನ ಜನರ ನಾಡಿಮಿಡಿತವನ್ನು ಅರಿತಿದ್ದೇನೆ. ದ.ಕ. ಜಿಲ್ಲೆಗೆ ಎಲ್ಲ ಕ್ಷೇತ್ರಗಳಲ್ಲೂ ರಾಜ್ಯದಲ್ಲಿ ಉತ್ತಮ ಹೆಸರಿದೆ. ಆದ ಕಾರಣ ಇಲ್ಲಿಗೆ ಬಂದು ಕೆಲಸ ಮಾಡಲು ತಮಗೆ  ಒಳ್ಳೆಯ ಅವಕಾಶ ಎಂದರು.

ಒಂದು ಜಿಲ್ಲೆಗೆ ಅಲ್ಲಿನ ಸ್ಥಳೀಯರೇ ಉಸ್ತುವಾರಿ ಸಚಿವರಾದರೆ ಉತ್ತಮ. ಸ್ಥಳೀಯರೇ ಉಸ್ತುವಾರಿ ಸಚಿವರಾದರೆ ಅಭಿವೃದ್ಧಿಗೆ ಅನುಕೂಲವಾಗುತ್ತದೆ ಎಂಬ ವಿಚಾರವನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ದ.ಕ.ಜಿಲ್ಲೆಯಲ್ಲಿ ಶಾಸಕರಾಗಿ ಆಯ್ಕೆಯಾದ ಇಬ್ಬರ ಪೈಕಿ ಯು.ಟಿ. ಖಾದರ್ ಅವರಿಗೆ ಸ್ಪೀಕರ್ ಆಗಿ ದೊಡ್ಡ ಹುದ್ದೆ ಸಿಕ್ಕಿತು. ಇನ್ನೊಬ್ಬರು  ಶಾಸಕ ಅಶೋಕ್ ಕುಮಾರ್ ರೈ ಮೊದಲ ಬಾರಿ ಶಾಸಕರಾದವರು. ಜಿಲ್ಲೆಗೆ ಜಿಲ್ಲೆಯ ಜನಪ್ರತಿನಿಧಿಗೆ ಉಸ್ತುವಾರಿ ಸಚಿವ ಹುದ್ದೆ ಸಿಗದಿದ್ದರೂ ತಾನು ಅದನ್ನು ನೀಗಿಸುವ ಪ್ರಯತ್ನವನ್ನು  ಪ್ರಾಮಾಣಿಕ ವಾಗಿ ಮಾಡುವೆನು ಎಂದು ಭರವಸೆ ನೀಡಿದರು.

ಮಂಗಳೂರಿನಲ್ಲಿ ಅನೈತಿಕ ಪೊಲೀಸ್‌ಗಿರಿ ಹಾಕಲು ಕಡಿವಾಣ ಹಾಕಲು ಪ್ರಾರಂಭಿಸಲಾಗುವ ‘ಆ್ಯಂಟಿ ಕಮ್ಯುನಲ್ ವಿಂಗ್’  ಸಾಮರಸ್ಯಕ್ಕೆ ದಾರಿಯಾಗಬೇಕು. ದ್ವೇಷ ಸಾಧಿಸುವ ವಿಂಗ್ ಆಗಬಾರದು. ಇಂತಹ ಘಟನೆ ನಡೆಯುವು ದನ್ನು ತಡೆಗಟ್ಟಲು ಮುನ್ನಚ್ಚೆರಿಕೆ ನೀಡುವ, ಯಾರು ಕಾನೂನು ಉಲ್ಲಂಘನೆ ಮಾಡುತ್ತಾರೊ ಅವರ ಮೇಲೆ ಕ್ರಮ  ಕೈಗೊಳ್ಳುವ  ವಿಂಗ್ ಆಗಬೇಕು. ಗೃಹ ಸಚಿವರಿಗೆ ಬಂದಿರುವ ವರದಿ ಪ್ರಕಾರ ಮಂಗಳೂರಿಗೆ ಆ್ಯಂಟಿ ಕಮ್ಯುನಲ್ ವಿಂಗ್ ಅನಿವಾರ‌್ಯ. ಹೀಗಾಗಿ ಗೃಹ ಸಚಿವರು ಹೇಳಿಕೆ ನೀಡಿದ್ದಾರೆ. ಅವರು ಖಂಡಿತ ಈ ವ್ಯವಸ್ಥೆಯನ್ನು ಜಾರಿಗೆ ತರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾನೂನು ಬಾಹಿರವಾಗಿ ಭೂಮಿ ಯಾರಿಗೆ ಕೊಟ್ಟಿದ್ದರೂ ಕ್ರಮ: ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಆರ್‌ಎಸ್‌ಎಸ್‌ಗೆ ಸೇರಿರುವ ವಿದ್ಯಾ ಸಂಸ್ಥೆಗಳಿಗೆ  ಮಾತ್ರವಲ್ಲ ಯಾರಿಗೂ ಕಾನೂನು ಬಾಹಿರವಾಗಿ ಭೂಮಿ ನೀಡಿದ್ದರೂ ಕ್ರಮ ಕೈಗೊಳ್ಳಲಾಗುವುದು. ಹಿಂದಿನ ಸರಕಾರದ ಅವಧಿಯಲ್ಲಿ  ಅನುಷ್ಠಾನಗೊಳಿಸಲಾಗಿದ್ದ ಜನಪರ ಅಭಿವೃದ್ಧಿ ಕಾಮಗಾರಿಗಳನ್ನು ನಿಲ್ಲಿಸುವುದಿಲ್ಲ. ತಾನು ಅದರ ಬಗ್ಗೆ ಪರಿಶೀಲನೆ ಮಾಡುತ್ತೇನೆ.  ಆಯಾ ಇಲಾಖೆಗಳು ಅಗತ್ಯದ ಕಾಮಗಾರಿಗಳ ಕಡೆಗೆ ಗಮನ ಹರಿಸಬೇಕು. ಅನಗತ್ಯ ಕಾಮಗಾರಿಗಳು,  ಕಾನೂನು ಬಾಹಿರ ಟೆಂಡರ್ ಕಾಮಗಾರಿಗಳ  ಬಗ್ಗೆ ಇಲಾಖೆಗಳು ಸರಕಾರಕ್ಕೆ ವರದಿ  ನೀಡಬೇಕು. ಎಲ್ಲ ಜಿಲ್ಲೆಗಳಲ್ಲೂ ಸರಕಾರಿ ಮೆಡಿಕಲ್ ಸ್ಥಾಪನೆ ಮಾಡುವುದು ಸರಕಾರದ ಯೋಜನೆಯಾಗಿದೆ. ದ.ಕ. ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್  ಕಾಲೇಜು ಇಲ್ಲ. ಇದರ ಬಗ್ಗೆ ತಾನು ಗಮನ ಹರಿಸುವುದಾಗಿ ಸಚಿವ ಗುಂಡೂರಾವ್ ಹೇಳಿದರು.

ಶಕ್ತಿ ಯೋಜನೆಯಡಿ  ಮಹಿಳೆಯರಿಗೆ ಸರಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದಂತೆ , ಖಾಸಗಿ ಕ್ಷೇತ್ರಕ್ಕೆ ವಿಸ್ತರಿಸಲು ಸಾಧ್ಯವಾಗುವುದಿಲ್ಲ. ಮಂಗಳೂರು ನಗರದಲ್ಲಿ ಸರಕಾರಿ ಬಸ್‌ಗಳ ಕೊರತೆ ಇದೆ ಎಂಬ ಕಾರಣಕ್ಕಾಗಿ ಅವರಿಗೆ ಖಾಸಗಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ನೀಡಲು  ಮತ್ತು ಖಾಸಗಿ ಬಸ್‌ಗಳ ಓಡಾಟ ಜಾಸ್ತಿ ಇರುವ ಮಂಗಳೂರಿಗೆ ಬೇಕಾಗಿ ಪ್ರತ್ಯೇಕ ನಿಯಮ ರೂಪಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಮರಳು ಕೊರತೆ ನಿವಾರಣೆ: ಕರಾವಳಿಗೆ ಪ್ರತ್ಯೇಕ ಮರಳು ನೀತಿ ಬೇಕು ಎನ್ನುವ ಬೇಡಿಕೆಯ  ಬಗ್ಗೆ ಮುಂದೆ ಯೋಚಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಶಾಸಕ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕರಾದ ಅಭಯಚಂದ್ರ ಜೈನ್, ಶಕುಂತಲಾ ಶೆಟ್ಟಿ, ಜೆ.ಆರ್.ಲೋಬೊ, ರಾಜ್ಯ ಸಭೆಯ ಮಾಜಿ ಸದಸ್ಯ ಬಿ.ಇಬ್ರಾಹೀಂ, ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ಜಿ.ಪಂ ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
Next Story
X