ಮಹಿಳೆಯರ ಉಚಿತ ಪ್ರಯಾಣಕ್ಕೆ ಇನ್ನು ಮುಂದೆ ಮೂಲ ದಾಖಲೆ ಬೇಕಿಲ್ಲ, ನಕಲು ಪ್ರತಿ ಇದ್ದರೆ ಸಾಕು

ಬೆಂಗಳೂರು: ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ರಾಜ್ಯದಲ್ಲಿ ರವಿವಾರ ಚಾಲನೆ ಸಿಕ್ಕಿದೆ.
ಇನ್ನು ಈ ಯೋಜನೆಯಡಿ ಕೆಎಸ್ಸಾರ್ಟಿಸಿ ಸೇರಿದಂತೆ ಸಾರಿಗೆ ಬಸ್‍ಗಳಲ್ಲಿ ಪ್ರಯಾಣಿಸಲು ವಿದ್ಯಾರ್ಥಿನಿಯರು-ಮಹಿಳೆಯರು 'ಆಧಾರ್ ಕಾರ್ಡ್ ಸೇರಿದಂತೆ ಗುರುತಿನ ಚೀಟಿಯ ಮೂಲ/ನಕಲು/ಡಿಜಿಲಾಕರ್(ಹಾರ್ಡ್ ಮತ್ತು ಸಾಫ್ಟ್ ಕಾಪಿ) ಮಾದರಿಯನ್ನು ಹಾಜರುಪಡಿಸಿ ಉಚಿತ ಟಿಕೆಟ್ ಪಡೆದು ಸಾರಿಗೆ ಬಸ್‍ಗಳಲ್ಲಿ ಪ್ರಯಾಣಿಸಬಹುದು’ ಎಂದು ಕೆಎಸ್ಸಾರ್ಟಿಸಿ ಪ್ರಕಟನೆ ತಿಳಿಸಿದೆ.
Next Story





