ಅಮೆರಿಕದಲ್ಲಿ ಶೂಟೌಟ್: 3 ಮಂದಿ ಮೃತ್ಯು

ವಾಷಿಂಗ್ಟನ್: ಅಮೆರಿಕದ ಮೇರಿಲ್ಯಾಂಡ್ ರಾಜ್ಯದ ಅನ್ನಾಪೊಲಿಸ್ ನಗರದ ಖಾಸಗಿ ವಸತಿನಿಲಯದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಟ 3 ಮಂದಿ ಮೃತಪಟ್ಟಿದ್ದು ಇತರ ಮೂವರು ಗಾಯಗೊಂಡಿರುವುದಾಗಿ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಫಾಕ್ಸ್ ನ್ಯೂಸ್ ವರದಿ ಮಾಡಿದೆ.
ವಸತಿ ನಿಲಯದ ಬಳಿ ಔತಣ ಕೂಟ ನಡೆಯುತ್ತಿತ್ತು. ಕೆಲ ಸಮಯದ ಬಳಿಕ ವಸತಿ ನಿಲಯದಲ್ಲಿ ಗುಂಡು ಹಾರಾಟದ ಸದ್ದು ಕೇಳಿಬಂದಿದ್ದು ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಕನಿಷ್ಟ ಮೂರು ಮಂದಿ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. ಸ್ಥಳದಲ್ಲಿದ್ದ ಓರ್ವ ಶಂಕಿತ ವ್ಯಕ್ತಿಯನ್ನು ಬಂಧಿಸಿದ್ದು ಆತನ ಬಳಿಯಿದ್ದ ಪಿಸ್ತೂಲನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
Next Story