ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಂಗಳೂರು, ಜೂ.12: ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿ ಮಂಗಳೂರು ಕಣ್ಣೂರಿನ ನಿವಾಸಿ ನುಮನುಲ್ ಬಿರನ್ (28) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯಾಗಿದ್ದ ನುಮನುಲ್ ಬಿರನ್ 2018 ರಿಂದ ನ್ಯಾಯಾಲಯಕ್ಕೆ ಹಾಜರಾಗದೆ, ತಲೆ ಮೆರೆಸಿಕೊಂಡಿದ್ದನು. ಆರೋಪಿಯನ್ನು ಸೋಮವಾರ ಕದ್ರಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರು ನಗರದ ದಕ್ಷಿಣ ಪೊಲೀಸ್ ಠಾಣೆ ,ಕಂಕನಾಡಿ ನಗರ ಠಾಣೆ, ಮಂಗಳೂರು ಗ್ರಾಮಾಂತರ ಠಾಣೆ, ಮೂಡಬಿದ್ರೆ ಪೊಲೀಸ್ ಠಾಣೆ ,ಬಂಟ್ವಾಳ ಪೊಲೀಸ್ ಠಾಣೆ ಹಾಗೂ ಕೇರಳದ ಕಾಸರಗೋಡು ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ದರೋಡೆ, ಕಳ್ಳತನ ಪ್ರಕರಣಗಳು ದಾಖಲಾಗಿರುವ ಬಗ್ಗೆ ಮಾಹಿತಿ ಇರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story