Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಾಮಂಜೂರು | ಪ್ರತಿಭಟನೆಯ ದಾರಿ ತಪ್ಪಿಸಲು...

ವಾಮಂಜೂರು | ಪ್ರತಿಭಟನೆಯ ದಾರಿ ತಪ್ಪಿಸಲು ಅಣಬೆ ತಯಾರಿಕಾ ಘಟಕಕ್ಕೆ ಕಲ್ಲುತೂರಾಟ ನಡೆಸಿ ಗಲಭೆಗೆ ಯತ್ನ; ಅರೋಪ

ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮವಾಗದಿದ್ದರೆ ವಾಮಂಜೂರು ಪೊಲೀಸ್ ಠಾಣೆಗೆ ಮುತ್ತಿಗೆ: ಹೋರಾಟ ಸಮಿತಿ ಎಚ್ಚರಿಕೆ

13 Jun 2023 9:18 AM IST
share
ವಾಮಂಜೂರು | ಪ್ರತಿಭಟನೆಯ ದಾರಿ ತಪ್ಪಿಸಲು ಅಣಬೆ ತಯಾರಿಕಾ ಘಟಕಕ್ಕೆ ಕಲ್ಲುತೂರಾಟ ನಡೆಸಿ ಗಲಭೆಗೆ ಯತ್ನ; ಅರೋಪ
ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮವಾಗದಿದ್ದರೆ ವಾಮಂಜೂರು ಪೊಲೀಸ್ ಠಾಣೆಗೆ ಮುತ್ತಿಗೆ: ಹೋರಾಟ ಸಮಿತಿ ಎಚ್ಚರಿಕೆ

ವಾಮಂಜೂರು, ಜೂ.13: ತಿರುವೈಲು ವಾರ್ಡ್ ನಲ್ಲಿ ಕಾರ್ಯಾಚರಿಸುತ್ತಿರುವ ವೈಟ್‌ ಗ್ರೋ ಅಗ್ರಿ ಎಲ್‌ ಎಲ್‌ ಪಿ ಅಣಬೆ ಉತ್ಪಾದನಾ ಘಟಕ ತೆರವಿಗೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ದಾರಿ ತಪ್ಪಿಸಲು ಗಲಭೆ ನಡೆಸಲು‌ ಮುಂದಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸದಿದ್ದಲ್ಲಿ ವಾಮಂಜೂರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಾಗುವುದು ಎಂದು ಹೋರಾಟ‌ ಸಮಿತಿ ಎಚ್ಚರಿಸಿದೆ.

ಕಳೆದ ಕೆಲವು ದಿನಗಳಿಂದ ವಾಮಂಜೂರಿನಲ್ಲಿ ಅಣಬೆ ಫ್ಯಾಕ್ಟರಿ ವಿರುದ್ಧ ಶಾಂತಿಯುತ ರೀತಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಮೊಟುಕುಗೊಳಿಸುವ ಸಲುವಾಗಿ ರವಿವಾರ ರಾತ್ರಿ ವೇಳೆ ಫ್ಯಾಕ್ಟರಿಗೆ ಕಲ್ಲೆಸೆದು ಪ್ರತಿಭಟನೆಯ ದಾರಿ ತಪ್ಪಿಸಲು ಯತ್ನಿಸಲಾಗಿತ್ತು. ಈ ವೇಳೆ ಕಲ್ಲೆಸೆದಿದ್ದ ಪ್ರಮುಖ ಆರೋಪಿಗಳಾದ ಗಣೇಶ್ ನೀರುಮಾರ್ಗ ಹಾಗೂ ಇತರ ಮೂವರು ಆರೋಪಿಗಳನ್ನು ಪ್ರತಿಭಟನಾಕಾರರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

ಆದರೆ, ಈ ಆರೋಪಿಗಳು ಕೆಲವು ಪ್ರಭಾವಿಗಳ  ನೆರವಿನಿಂದ ಯಾವುದೇ ಶಿಕ್ಷೆ ಇಲ್ಲದೆ ಹೊರಬಂದಿದ್ದಾರೆ. ಈ ರೀತಿ ತಪ್ಪು ಮಾಡಿಯೂ ಅವರಿಗೆ ನೆರವಾಗುವ ಆ ಪ್ರಭಾವಿಗಳು ಮತ್ತು ಇವರಿಗೆ ಕುಮ್ಮಕ್ಕು ನೀಡಿದವರು ಹಾಗೂ ಅವರ‌ ಹಿಂದಿರುವ  ಪ್ರತಿಯೊಬ್ಬರ ಮೇಲೆ ಸರಿಯಾದ ತನಿಖೆಯಾಗಬೇಕು ಎಂದು ಹೋರಾಟ‌ ಸಮಿತಿ ಒತ್ತಾಯಿಸಿದೆ.

ಆರೋಪಿಗಳ‌ ವಿರುದ್ಧ ಪೊಲೀಸರು ಕ್ರಮಕ್ಕೆ ಮುಂದಾಗದಿದ್ದರೆ, ಮುಂದಿನ ದಿನಗಳಲ್ಲಿ ವಾಮಂಜೂರು ನಾಗರಿಕರು ವಾಮಂಜೂರು ಪೊಲೀಸ್ ಠಾಣೆ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದು ಖಂಡಿತ ಎಂದು ಹೋರಾಟ ಸಮಿತಿ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದ್ದು, ಇದಕ್ಕೆ ಅಧಿಕಾರಿಗಳು ಅವಕಾಶ ಮಾಡಿಕೊಡದೆ ನಿಜವಾದ ಅಪರಾಧಿಗಳು ಹಾಗೂ ಈ ಶಾಂತಿ ಕದಡುವ ಕೃತ್ಯವನ್ನು ಬೆಂಬಲಿಸುವ ಪ್ರಭಾವಿಗಳನ್ನು ಬಂಧಿಸಿ ನ್ಯಾಯೋಚಿತ‌ ಹೋರಾಟಕ್ಕೆ ಅನುವುಮಾಡಿಕೊಡಬೇಕೆಂದು ಹೋರಾಟ ಸಮಿತಿ ಆಗ್ರಹಿಸಿದೆ.

share
Next Story
X