ನಿಂತಿದ್ದ ಲಾರಿಗೆ ಕಾರು ಢಿಕ್ಕಿ; ಮೂವರು ಸ್ಥಳದಲ್ಲೇ ಮೃತ್ಯು

ಕೊಪ್ಪಳ: ನಿಂತಿದ್ದ ಲಾರಿಗೆ ಕಾರೊಂದು ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ಮಂಗಳವಾರ ವರದಿಯಾಗಿದೆ.
ಮೃತರನ್ನು ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕೋಳೂರು ತಾಂಡಾದ ಚಾಲಕ ಪ್ರವೀಣ ಕುಮಾರ ಭೋಜಪ್ಪ ಚವ್ಹಾಣ್ (27), ಲೇಬಗೇರಿಯ ಸುರೇಶ್ ಈರಸಂಗಪ್ಪ ಹಂಡೆವಜೀರ (43) ಮತ್ತು ಗೌರಮ್ಮ ಹನುಮಗೌಡ ಹಂಡೆವಜೀರ (60) ಎಂದು ಗುರುತಿಸಲಾಗಿದೆ.
ದಾವಣಗೆರೆಯಿಂದ ಮರಳಿ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ಇಳಕಲ್ ಕಡೆಗೆ ಹೋಗುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಘಟನೆ ಕುರಿತು ಕುಷ್ಠಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರ ಸಂಬಂಧಿಕರು, ಬಂಧುಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.
Next Story





