ದಿಲ್ಲಿ, ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಕಂಪನ

ಹೊಸದಿಲ್ಲಿ ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಇಂದು ಮಧ್ಯಾಹ್ನ 5.4 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ದಿಲ್ಲಿ ಹಾಗೂ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ.
ಮಧ್ಯಾಹ್ನ 1:30 ರ ನಂತರ ಸಂಭವಿಸಿದ ಭೂಕಂಪವು ಕೆಲವು ಸೆಕೆಂಡುಗಳ ಕಾಲ ಉಳಿಯಿತು, ಆದರೆ ಇದುವರೆಗೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಹಲವಾರು ಜನರು ಟ್ವಿಟರ್ ನಲ್ಲಿ ತಮ್ಮ ಅನುಭವ ಹಂಚಿಕೊಂಡರು. ಇತ್ತೀಚಿನ ದಿನಗಳಲ್ಲಿ ಇಂತಹ ಹಲವಾರು ಘಟನೆಗಳನ್ನು ನೆನಪಿಸಿಕೊಳ್ಳುವ ಮೀಮ್‌ಗಳನ್ನು ಪೋಸ್ಟ್ ಮಾಡಿದ್ದಾರೆ.
ಕಳೆದ ತಿಂಗಳ ಕೊನೆಯಲ್ಲಿ ಅಫ್ಘಾನಿಸ್ತಾನದಲ್ಲಿ 5.2 ತೀವ್ರತೆಯ ಭೂಕಂಪ ಸಂಭವಿಸಿದಾಗ ದಿಲ್ಲಿಯಲ್ಲಿ ಲಘು ಕಂಪನದ ಅನುಭವವಾಗಿತ್ತು.
Next Story





