Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ MRI...

ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ MRI ಸ್ಕ್ಯಾನಿಂಗ್, ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಲು ಸಿಎಂ ಸೂಚನೆ

''ನಮ್ಮ ಜನ ಸರಕಾರಿ ಆಸ್ಪತ್ರೆಗಳಿಗೆ ಬರಬೇಕೋ ಬೇಡ್ವೋ?''

13 Jun 2023 2:00 PM IST
share
ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ MRI ಸ್ಕ್ಯಾನಿಂಗ್, ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಲು ಸಿಎಂ ಸೂಚನೆ
''ನಮ್ಮ ಜನ ಸರಕಾರಿ ಆಸ್ಪತ್ರೆಗಳಿಗೆ ಬರಬೇಕೋ ಬೇಡ್ವೋ?''

ಬೆಂಗಳೂರು, ಜೂ. 13: ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗದೆ ತಜ್ಞ ವೈದ್ಯರ ಕೊರತೆ ಮತ್ತು ಎಂಆರ್ ಐ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ತಾಲೂಕು ಆಸ್ಪತ್ರೆಗಳಲ್ಲಿ ಸಮರ್ಪಕವಾಗಿ ಅಳವಡಿಸದಿರುವುದಕ್ಕೆ  ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. 

ಮಂಗಳವಾರ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಭಿಯಾನದ ಕೊರತೆಗಳನ್ನು ಗುರುತಿಸಿ ಮುಂದಿನ ಸಭೆ ವೇಳೆಗೆ ಲೋಪಗಳನ್ನು ಸರಿಪಡಿಸಿರಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. 

ರಾಷ್ಟ್ರೀಯ ಆರೋಗ್ಯ ಅಭಿಯಾನ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌, ಆರೋಗ್ಯ ಸೇವೆಯ ಲಭ್ಯತೆ ಕುರಿತಂತೆ ಪ್ರತ್ಯೇಕವಾಗಿ ಪ್ರಗತಿ ಪರಿಶೀಲನೆ ನಡೆಸಿದರು. 

ರಾಷ್ಟ್ರೀಯ ಆರೋಗ್ಯ ಮಿಷನ್ ನ ಅನುದಾನ ಸಕಾಲದಲ್ಲಿ ವೆಚ್ಚವಾಗದಿರುವುದನ್ನು ಗುರುತಿಸಿದರು.  ಬಳಿಕ, ರಾಷ್ಟ್ರೀಯ ಆರೋಗ್ಯ ಮಿಷನ್‌ ನಡಿ ಆರೋಗ್ಯ ವ್ಯವಸ್ಥೆ ಬಲಪಡಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು. ಈ ಯೋಜನೆಯಡಿ ಶೇ. 52 ರಷ್ಟು ತಜ್ಞ ವೈದ್ಯರ ಕೊರತೆ ಇದೆ, ಶೇ. 31 ರಷ್ಟು ಎಂಬಿಬಿಎಸ್‌ ವೈದ್ಯರ ಕೊರತೆ ಹಾಗೂ ಶೆ. 18 ರಷ್ಟು ನರ್ಸ್‌ ಸಿಬ್ಬಂದಿ ಕೊರತೆ ಇರುವುದನ್ನು ಗಮನಿಸಿದ ಮುಖ್ಯಮಂತ್ರಿಗಳು, ಇವರಿಗೆ ವೇತನ ಹೆಚ್ಚಳ ಮಾಡುವ ಬಗ್ಗೆ ಪರಿಶೀಲಿಸಿ, ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. 

ನಿರಂತರವಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನೆ ಮಾಡಬೇಕು. ನಿಗದಿತ ಗುರಿ ಸಾಧನೆಯನ್ನು ಖಾತರಿ ಪಡಿಸಬೇಕು ಹಾಗೂ ಅನುದಾನ ಸಕಾಲದಲ್ಲಿ ವೆಚ್ಚ ಮಾಡಬೇಕು ಎಂದು ಮುಖ್ಯಮಂತ್ರಿಗಳು ಇಲಾಖೆಯ ಆಯುಕ್ತರಿಗೆ ಸೂಚಿಸಿದರು.

ಕಳೆದ ಒಂದು ವರ್ಷದಲ್ಲಿ ನಿಗಮಕ್ಕೆ 5 ಎಂ.ಡಿ. ನೇಮಕ ಮಾಡಿರುವುದರಿಂದ ಸಮಸ್ಯೆ ಆಗಿರುವುದನ್ನು ಅಧಿಕಾರಿಗಳಿಂದ ಕೇಳಿ ತಿಳಿದ ಮುಖ್ಯಮಂತ್ರಿಗಳು, ನಮ್ಮ ಸರ್ಕಾರದ ಅವಧಿಯಲ್ಲಿ ಈ ರೀತಿ ಆಗುವುದಿಲ್ಲ ಎಂದು ಭರವಸೆ ನೀಡಿದ್ದಲ್ಲದೆ, ನಿಗಮದ ವ್ಯವಸ್ಥಾಪಕ ನಿರ್ದೇಶಕರು ಕನಿಷ್ಠ 2 ವರ್ಷ ಸೇವೆ ಸಲ್ಲಿಸಬೇಕು ಎಂದು ಸೂಚಿಸಿದರು.

ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಎಂ.ಆರ್.ಐ. ಸ್ಕ್ಯಾನಿಂಗ್ ಹಾಗೂ ಡಯಾಲಿಸಿಸ್‌ ಯಂತ್ರಗಳನ್ನು ಅಳವಡಿಸಬೇಕು ಹಾಗೂ ಈ ಎಲ್ಲ ಸೇವೆಗಳನ್ನು ಒದಗಿಸಲು ತಂತ್ರಜ್ಞರನ್ನು ನೇಮಕ ಮಾಡಬೇಕು ಎಂದು ಸೂಚಿಸಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಬಡಜನರಿಗೆ ಈ ವಿಶೇಷ ಸೇವೆಗಳನ್ನು ಒದಗಿಸದಿದ್ದರೆ ಅವರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಹೇಗೆ ಸಾದ್ಯ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಮೂರು ತಿಂಗಳಲ್ಲಿ ವ್ಯವಸ್ಥೆ ಸರಿಪಡಿಸಬೇಕು. ಸರ್ಕಾರಿ ಆಸ್ಪತ್ರೆಗಳಿಗೆ ಜನ ನಮ್ಮ ಜನ ಬರಬೇಕೋ ಬೇಡ್ವೋ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. 

ಮೂರು ತಿಂಗಳಲ್ಲಿಮತ್ತೊಮ್ಮೆ ಪರಿಶೀಲನೆ ನಡೆಸುತ್ತೇನೆ. ಇದೇ ಪರಿಸ್ಥಿತಿ ಮುಂದುವರಿದರೆ ಅಧಿಕಾರಿಗಳೇ ಜವಾಬ್ದಾರರು ಎಂದು ಎಚ್ಚರಿಸಿದರು.

ಗ್ರಾಮೀಣ ಪ್ರದೇಶದಲ್ಲಿ ವೈದ್ಯರಿಗೆ ಕಟ್ಟಿಸಿರುವ ವಸತಿಗೃಹದಲಿ ಯಾವ ವೈದ್ಯರೂ ಉಳಿದುಕೊಳ್ಳುತ್ತಿಲ್ಲ. ಈ ಲೋಪ ಸರಿಪಡಿಸುವಂತೆ ಆಯುಕ್ತರಿಗೆ ಸೂಚಿಸಿದರು.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯಕ್ಷಮತೆ ಬಳಿಕ ಸಿಎಂ ಕೊಟ್ಟ ಸೂಚನೆಗಳು 

1. ಆಯುಷ್ಮಾನ್‌ ಭಾರತ್- ಆರೋಗ್ಯ ಕರ್ನಾಟಕ  ಯೋಜನೆಯು Assurance Mode ನಲ್ಲಿದೆ. ತಮಿಳುನಾಡು ಹಾಗೂ ರಾಜಸ್ಥಾನದಲ್ಲಿ ಜಾರಿಯಲ್ಲಿರುವ ಇನ್ಷೂರೆನ್ಸ್‌ ಮಾದರಿಯನ್ನು ಅಧ್ಯಯನ ಮಾಡಿ ವರದಿ ಕೊಡಬೇಕು ಎಂದರು.

2. ಪ್ರಗತಿ ಪರಿಶೀಲನೆ ಮಾಡಿ, ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಸೂಚಿಸಿದರು. 

3. ಮನುಷ್ಯರಿಗೆ ಸಹಾಯ ಮಾಡಬೇಕು ಆಗ ನಾವೂ ಮನುಷ್ಯರಾಗ್ತೀವಿ. ರೋಗಿಗಳಿಗೆ ಕಾಯಿಲೆ ವಾಸಿ ಮಾಡಲು ನಮ್ಮ ಪ್ರಯತ್ನ ಮಾಡಬೇಕು. ಪಾವತಿಯ ಅವಧಿ 14 ದಿನಕ್ಕೆ ಇಳಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆ ಗಳ ಎಂಪ್ಯಾನೆಲ್‌ ಮೆಂಟ್‌ ಸುಧಾರಿಸುವ ನಿರೀಕ್ಷೆ ಇದೆ ಎಂದರು. 

4. ಲ್ಯಾಬ್‌ ಟೆಕ್ನಿಷಿಯನ್‌ ಮತ್ತಿತರ ಅತಿ ಅಗತ್ಯವಿರುವ ಅರೆ ವೈದ್ಯಕೀಯ ಸಿಬ್ಬಂದಿ ನೇಮಕಕ್ಕೆ ಆದ್ಯತೆ ನೀಡುವಂತೆ ಹಣಕಾಸು ಇಲಾಖೆಗೆ ಸೂಚಿಸಿದರು.

5. ಔಷಧ ಖರೀದಿ ಪ್ರಕ್ರಿಯೆ ನಿರಂತರವಾಗಿ ನಡೆಯಲು ಅನುವಾಗುವಂತೆ ಎರಡು ವರ್ಷಕ್ಕೊಮ್ಮೆ ಟೆಂಡರ್‌ ಕರೆಯಲು ಇಲಾಖೆಯು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್‌ ಕುಮಾರ್‌, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್‌, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎನ್. ಜಯರಾಂ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
Next Story
X