Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಡವರಿಗೆ ಕೊಟ್ಟ ಯೋಜನೆಯನ್ನು ಬಿಜೆಪಿ...

ಬಡವರಿಗೆ ಕೊಟ್ಟ ಯೋಜನೆಯನ್ನು ಬಿಜೆಪಿ ಬೆಂಬಲಿಸಿದೆಯೇ ಹೊರತು ವಿರೋಧಿಸಿಲ್ಲ: ಕೋಟ ಶ್ರೀನಿವಾಸ ಪೂಜಾರಿ

13 Jun 2023 4:26 PM IST
share
ಬಡವರಿಗೆ ಕೊಟ್ಟ ಯೋಜನೆಯನ್ನು ಬಿಜೆಪಿ ಬೆಂಬಲಿಸಿದೆಯೇ ಹೊರತು ವಿರೋಧಿಸಿಲ್ಲ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಜೂ.13: ಬಡವರಿಗೆ ಕೊಟ್ಟ ಯೋಜನೆಯನ್ನು ಬಿಜೆಪಿ ಬೆಂಬಲಿ ಸಿದೆಯೇ ಹೊರತು ಯಾವತ್ತೂ ವಿರೋಧಿಸಿಲ್ಲ. ಶಕ್ತಿ ಯೋಜನೆಯನ್ನು ನಾವು ಸ್ವಾಗತ ಮಾಡುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಂದು ಆರ್ಥಿಕ ತಜ್ಞರು, ನಿವೃತ್ತ ಅಧಿಕಾರಿಗಳು ಗ್ಯಾರೆಂಟಿಗಳ ಜಾರಿ ಕಷ್ಟ ಎಂದು ಹೇಳಿದ್ದರು. ಆಗ ಸಂದೇಹ, ಸಂಶಯವನ್ನು ಬಿಜೆಪಿ ವ್ಯಕ್ತಪಡಿಸಿರುವುದು ನಿಜ. ಅದೇ ರೀತಿ ಉಳಿದ ನಾಲ್ಕು ಗ್ಯಾರಂಟಿಗಳನ್ನು ಜಾರಿಗೆ ತರುವ ಸರ್ವ ಜವಾಬ್ದಾರಿ ಕಾಂಗ್ರೆಸ್‌ನವರ ಮೇಲಿದೆ ಎಂದರು.

ಪ್ರತಿ ವರ್ಷ ಜನವರಿ ತಿಂಗಳಲ್ಲಿ ಕೆಇಆರ್‌ಸಿ ವಿದ್ಯುತ್ ದರ ಏರಿಕೆಯ ಪ್ರಸ್ತಾವ ಸಲ್ಲಿಸುವ ರೂಢಿ ಇದೆ. ನಮ್ಮ ಸರಕಾರ ವಿದ್ಯುತ್ ದರ ಏರಿಕೆಗೆ ಅನುಮೋದನೆ ಕೊಟ್ಟಿರಲಿಲ್ಲ. ಚುನಾವಣೆ ಘೋಷಣೆಯಾದ ನಂತರ ಅಧಿಕಾರಿಗಳು ಅನು ಮೋದನೆ ಕೊಟ್ಟಿರಬಹುದು. ಸಾರ್ವಜನಿಕ ಹಿತಾಸಕ್ತಿಯ ಕಾರಣ ಮುಂದಿಟ್ಟು ಈ ಆದೇಶ ರದ್ದು ಮಾಡಬೇಕೆಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಲ್ಲಿ ನಾನು ವಿನಂತಿ ಮಾಡುತ್ತೇನೆ ಎಂದು ಅವರು ಹೇಳಿದರು.

ನಮ್ಮ ಸರಕಾರ ಮಾಡಿದ ಗೋ ಹತ್ಯೆ ನಿಷೇಧ, ಮತಾಂತರ ನಿಷೇಧ ಕಾಯ್ದೆ ರದ್ದು ಮಾಡುತ್ತೇವೆ ಎಂದು ಹೇಳುತ್ತಾರೆ. ಅದೇ ರೀತಿ ವಿದ್ಯುತ್ ದರ ಪರಿಷ್ಕರಣೆ ಆದೇಶವನ್ನು ಕೂಡ ವಾಪಾಸ್ಸು ಪಡೆಯಲಿ. ಇದು ಕಾಯ್ದೆ ತಿದ್ದುಪಡಿಯ ವಿಚಾರ ಅಲ್ಲ. ಕೇವಲ ಸುತ್ತೋಲೆಯನ್ನು ವಾಪಾಸ್ಸು ಪಡೆಯುವುದಾಗಿದೆ. 200 ಯುನಿಟ್ ಉಚಿತ ಕೊಡುತ್ತೇವೆ ಎಂದು ಎರಡು ಮೂರು ಪಟ್ಟು ವಿದ್ಯುತ್ ದರ ಏರಿಸುವುದು ಸಮಂಜಸ ಅಲ್ಲ. ರಾಜ್ಯದ ಜನರಿಗೆ ಹಿಂದಿನ ದರವನ್ನೇ ನಿಗದಿಪಡಿಸಬೇಕು ಎಂದು ಅವರು ಮನವಿ ಮಾಡಿದರು.

ಪ್ರಜಾಪ್ರಭುತ್ವದಲ್ಲಿ ಜನ ಕಾಂಗ್ರೆಸ್ ಬೆಂಬಲಿಸಿದ್ದಾರೆ ಮತ್ತು ಅಧಿಕಾರ ಕೊಟ್ಟಿದ್ದಾರೆ. ಗ್ಯಾರೆಂಟಿ ಜಾರಿ ಮಾಡುವುದು ಸರಕಾರದ ಜವಾಬ್ದಾರಿಯಾಗಿದೆ. ಕೊಟ್ಟ ಮಾತು ಜಾರಿಗೆ ತನ್ನಿ ಎಂಬುದು ನಮ್ಮ ನಿಲುವು. ಗ್ಯಾರಂಟಿ ಕೊಡುವ ವರೆಗೆ ಬಿಜೆಪಿ ಜನರ ಜೊತೆ ಹೋರಾಟ ಮಾಡುತ್ತದೆ ಎಂದು ಅವರು ಹೇಳಿದರು.

share
Next Story
X