Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ.ಜಿಲ್ಲೆಯಲ್ಲಿ ನರ್ಮ್ ಬಸ್‌ಗಳ ಸಂಚಾರ...

ದ.ಕ.ಜಿಲ್ಲೆಯಲ್ಲಿ ನರ್ಮ್ ಬಸ್‌ಗಳ ಸಂಚಾರ ಆರಂಭಿಸಲು ಮನವಿ

13 Jun 2023 6:37 PM IST
share
ದ.ಕ.ಜಿಲ್ಲೆಯಲ್ಲಿ ನರ್ಮ್ ಬಸ್‌ಗಳ ಸಂಚಾರ ಆರಂಭಿಸಲು ಮನವಿ

ಮಂಗಳೂರು, ಜೂ.13: ದ.ಕ ಜಿಲ್ಲಾದ್ಯಂತ ಸ್ಥಗಿತಗೊಂಡಿರುವ ಸರಕಾರಿ ನಗರ ಸಾರಿಗೆ (ನರ್ಮ್) ಬಸ್ ಸಂಚಾರ ಸೇವೆಯನ್ನು ಮತ್ತೆ ಮುಂದುವರಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮತ್ತು ಜನರ ಬೇಡಿಕೆಯ ಅನುಗುಣವಾಗಿ ಮಂಜೂರಾಗದೆ ಬಾಕಿ ಇರುವ ಪ್ರದೇಶಗಳಿಗೂ ಶೀಘ್ರ ಬಸ್ ಸಂಚಾರ ಸೇವೆ ಆರಂಭಿಸಬೇಕು ಎಂದು ಆಗ್ರಹಿಸಿ ಡಿವೈಎಫ್‌ಐ ದ.ಕ ಜಿಲ್ಲಾ ಸಮಿತಿಯು ಮಂಗಳವಾರ ದ.ಕ. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

ರಾಜ್ಯಾದ್ಯಂತ ಸರಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಸಲಾಗಿದೆ. ಆದರೆ ಜಿಲ್ಲೆಯಲ್ಲಿ ಓಡಾಡುತ್ತಿದ್ದ ಬಹುತೇಕ ಸರಕಾರಿ ಬಸ್‌ಗಳ ಸಂಚಾರವನ್ನು ಕೊರೋನ ಕಾಲದ ಬಳಿಕ ಸ್ಥಗಿತಗೊಳಿಸಿದ ಕಾರಣ ಸೇವೆಯಲ್ಲಿ ಬಹಳಷ್ಟು ವ್ಯತ್ಯಯ ಕಂಡು ಬಂದಿದೆ. ಇದರಿಂದ ಪ್ರಯಾಣಿಕರು ಬಹಳಷ್ಟು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಅಲ್ಲದೆ ಈಗ ಮಹಿಳೆಯರು ಕೂಡ ಸರಕಾರದ ಈ ಸೌಲಭ್ಯದಿಂದಲೂ ವಂಚಿತರಾಗುತ್ತಿದ್ದಾರೆ.

ನರ್ಮ್ ಯೋಜನೆಯಡಿ ಜಿಲ್ಲೆಯಲ್ಲಿ ಸುಮಾರು 35 ರಷ್ಟು ಸರಕಾರಿ ನಗರ ಸಾರಿಗೆ ಬಸ್ಸುಗಳು ಸಂಚಾರ ಸೇವೆ ಒದಗಿಸಲು ಮಂಜೂರಾಗಿದ್ದವು. ಆದರೆ ಅದರಲ್ಲಿ 18 ಬಸ್‌ಗಳಿಗೆ ಸ್ಟೇಟ್‌ಬ್ಯಾಂಕ್ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿತ್ತು. ಬಾಕಿ ಉಳಿದ ಬಸ್ ನಗರದ ಹೊರಭಾಗದಿಂದ ಸೇವೆ ಸಲ್ಲಿಸಲು ಸಾರಿಗೆ ಪ್ರಾಧಿಕಾರದ ಸಭೆ ಒಪ್ಪಿಗೆ ನೀಡಿದ್ದವು.

ಆ ಸಂದರ್ಭ ಖಾಸಗಿ ಬಸ್ ಮಾಲಕರು ಹೈಕೋರ್ಟ್ ಮೆಟ್ಟಿಲೇರಿ ತಡೆ ಹೇರಿದರೂ ಮುಂದೆ ನರ್ಮ್ ಸಾರಿಗೆ ಸೇವೆಗೆ ಸಂಬಂಧಿಸಿದ ಹೈಕೋರ್ಟ್ ದೂರನ್ನು ಜಿಲ್ಲಾಧಿಕಾರಿ ಹಂತದಲ್ಲಿ ಇತ್ಯರ್ಥ ಪಡಿಸಲು ನಿರ್ದೇಶನ ನೀಡಿತ್ತು. ಖಾಸಗಿ ಬಸ್ ಮಾಲಕರ ವಿರೋಧದ ನಡುವೆಯೂ ಆಗಿನ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅವರ ಜನಪರ ನಡೆಯಿಂದ ಸರಕಾರಿ (ನರ್ಮ್) ಬಸ್ ತನ್ನ ಸೇವೆಯನ್ನು ಸಲ್ಲಿಸುತ್ತಾ ಬಂದಿದೆ. ಅದರ ಜೊತೆ ಸುಳ್ಯ, ಪುತ್ತೂರು, ಬೆಳ್ತಂಗಡಿಯಂತಹ ಗ್ರಾಮೀಣ ಭಾಗಗಳಿಗೂ ಸರಕಾರಿ ಗ್ರಾಮಾಂತರ ಸಾರಿಗೆ ಬಸ್ ನಿರಂತರ ಸೇವೆಯನ್ನು ನೀಡಿದೆ. ಆದರೆ ಕೊರೋನ ಕಾಲದಲ್ಲಿ ಸ್ಥಗಿತಗೊಂಡಿರುವ ಸರಕಾರಿ ಬಸ್ ಸಂಚಾರ ಸೇವೆಯು ಮತ್ತೆ ಹಿಂದಿನ ರೀತಿಯಲ್ಲಿ ನೀಡಲೇ ಇಲ್ಲ. ಸರಕಾರಿ ನರ್ಮ್ ನಗರ ಸಾರಿಗೆ ಬಸ್ ಮತ್ತು ಗ್ರಾಮೀಣ ಭಾಗದ ಸರಕಾರಿ ಬಸ್ ಸಂಚಾರ ಸೇವೆಯಲ್ಲಿ ಅರ್ಧಕ್ಕರ್ಧ ವ್ಯತ್ಯಯ ಉಂಟಾಗಿದೆ ಎಂದು ಡಿವೈಎಫ್‌ಐ ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಡಿವೈಎಫ್‌ಐ ದ.ಕ. ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ಕಾರ್ಯದರ್ಶಿ ಸಂತೋಷ್ ಬಜಾಲ್, ಮಂಗಳೂರು ನಗರ ಕಾರ್ಯದರ್ಶಿ ನವೀನ್ ಕೊಂಚಾಡಿ, ಉಳ್ಳಾಲ ವಲಯ ಅಧ್ಯಕ್ಷ ರಫೀಕ್ ಹರೇಕಳ, ಜಿಲ್ಲಾ ಮುಖಂಡರಾದ ರಝಾಕ್ ಮೊಂಟೆಪದವು, ಉಸ್ಮಾನ್ ಕಣ್ಣೂರು, ಮುಸ್ತಫಾ ಕಲ್ಲಕಟ್ಟೆ ನಿಯೋಗದಲ್ಲಿದ್ದರು.

share
Next Story
X