Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರಿಷತ್ 3 ಸ್ಥಾನಗಳಲ್ಲಿ ಕಾಂಗ್ರೆಸ್...

ಪರಿಷತ್ 3 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲೋದು ಖಚಿತ, ಆದರೂ ನಾವು ‌ಸ್ಪರ್ಧಿಸುತ್ತೇವೆ ಎಂದ ಬೊಮ್ಮಾಯಿ

13 Jun 2023 6:58 PM IST
share
ಪರಿಷತ್ 3 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲೋದು ಖಚಿತ, ಆದರೂ ನಾವು ‌ಸ್ಪರ್ಧಿಸುತ್ತೇವೆ ಎಂದ ಬೊಮ್ಮಾಯಿ

ಹುಬ್ಬಳ್ಳಿ, ಜೂ.13: ''ವಿಧಾನ ಪರಿಷತ್ ಚುನಾವಣೆಯ ಮೂರೂ ಸ್ಥಾನಗಳಿಗೆ ನಾವು ಸ್ಪರ್ಧಿಸುತ್ತೇವೆ. ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ. ಆದರೂ ಪ್ರತಿಪಕ್ಷವಾಗಿ ಸ್ಪರ್ಧಿಸುತ್ತೇವೆ'' ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. 

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿವೆ. ಮುಂಗಾರು ಮಳೆ ತಡವಾಗಿದ್ದರಿಂದ ಬಿತ್ತನೆ ತಡವಾಗಿದೆ. ಸಕಾಲಕ್ಕೆ ಮುಂಗಾರು ಮಳೆ ಬಾರದಿದ್ದರೆ ರೈತರಿಗೆ ಬಹಳಷ್ಟು ಕಷ್ಟವಾಗುತ್ತದೆ. ಮತ್ತೊಂದು ಕಡೆ ಭೀಕರ ಚಂಡಮಾರುತದ ಸೂಚನೆ ಇದೆ. ಹೀಗಿದ್ದರೂ ಮುಖ್ಯಮಂತ್ರಿ ಇವುಗಳನ್ನು ನಿಭಾಯಿಸಲು ಯಾವುದೆ ರೀತಿ ಸನ್ನದ್ಧವಾಗಿಲ್ಲ'' ಎಂದು ದೂರಿದರು. 

''ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರಕಾರಕ್ಕೆ ಯಾವುದೆ ಜವಾಬ್ದಾರಿ ಇಲ್ಲ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಜಲಾಶಯಗಳ ನೀರು ಅತ್ಯಂತ ಕೆಳಮಟ್ಟದಲ್ಲಿದೆ'' ಎಂದರು.

''ಆದರೆ ನಾನು ಇಷ್ಟು ಬೇಗ ರಾಜ್ಯದಲ್ಲಿ ಬರಗಾಲ ಬರಲಿದೆ ಎಂದು ಹೇಳುವುದಿಲ್ಲ. ಆದರೆ ರಾಜ್ಯ ಸರಕಾರ ಸಮರ್ಪಕವಾಗಿ ಯೋಜನೆಗಳನ್ನು ಮಾಡಿಕೊಳ್ಳಬೇಕು. ತಾಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಿ ಅದರಲ್ಲಿ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳನ್ನು ಸೇರಿಸಿ ಸಹಕಾರ ಪಡೆಯಬೇಕು. ಈ ಕೂಡಲೆ ನೂರು ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕು. ಎನ್‍ಡಿಆರ್‍ಎಫ್ ತಂಡಗಳನ್ನು ಚುರುಕುಗೊಳಸಬೇಕು. ನಗರ ಪ್ರದೇಶಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಿದೆ'' ಎಂದು ಅವರು ಹೇಳಿದರು.

''ಗ್ಯಾರಂಟಿ ಬಗ್ಗೆ ಕಾದುನೋಡುವ ತಂತ್ರ ನಮ್ಮದಾಗಿದೆ. ಉಚಿತ ಬಸ್ ಪಾಸ್ ಆರಂಭದ ಶೂರತ್ವವನ್ನು ಸರಕಾರ ತೋರಿಸುತ್ತಿದೆ. ಗ್ಯಾರಂಟಿ ರೂಪದಲ್ಲಿ ಮಹಿಳೆಯರಿಗೆ ಉಚಿತ ನೀಡುವ ಸಲುವಾಗಿ ಅವರಿಗೆ ಸಮರ್ಪಕ ಪ್ರಯಾಣ ಇಲ್ಲದಂತೆ ಆಗುತ್ತಿದೆ'' ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

''ರಾಜ್ಯದಲ್ಲಿ ಬಸ್ ಗಳ ಸಮಸ್ಯೆ ಆಗುತ್ತಿದೆ. ಈಗಾಗಲೇ ನಾವು ಡೀಸೆಲ್ ಅನುದಾನ ಬಿಡುಗಡೆ ಮಾಡಿದ್ದೇವೆ. ಅದನ್ನು ಮುಂದುವರೆಸಬೇಕು. ಗ್ಯಾರಂಟಿಗಳಿಗೆ ಹಣಕಾಸಿನ ಹೊಂದಾಣಿಕೆ ಬಗ್ಗೆ ಸರಕಾರ ಸ್ಪಷ್ಟವಾಗಿ ಹೇಳುತ್ತಿಲ್ಲ. ಹಣಕಾಸಿನ ವಿಚಾರದಲ್ಲಿ ಜನರನ್ನು ಕತ್ತಲಲ್ಲಿ ಇಡಲು ಸರಕಾರ ಮುಂದಾಗಿದೆ'' ಎಂದು ಅವರು ತಿಳಿಸಿದರು.

ಅಧಿವೇಶನದ ವೇಳೆ ವಿಪಕ್ಷ ನಾಯಕನ ಆಯ್ಕೆ: ನಾನು ವಿಪಕ್ಷ ನಾಯಕನ ಸ್ಥಾನದ ಆಕಾಂಕ್ಷಿ ಅಲ್ಲ. ಅಧಿವೇಶನ ಕರೆದ ಕೂಡಲೆ ವಿರೋಧ ಪಕ್ಷದ ನಾಯಕರ ಆಯ್ಕೆ ನಡೆಯುತ್ತೆ. ಪ್ರತಿ ಬಾರಿ ನಡೆಯುವ ಸಂಪ್ರದಾಯ ಇದು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

share
Next Story
X