Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಬಾಲಕಿಯನ್ನು ಅಪಹರಿಸಿ...

ಮಂಗಳೂರು: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಆರೋಪಿಗಳಿಗೆ 20 ವರ್ಷ ಶಿಕ್ಷೆ

13 Jun 2023 7:06 PM IST
share
ಮಂಗಳೂರು: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಆರೋಪಿಗಳಿಗೆ 20 ವರ್ಷ ಶಿಕ್ಷೆ

ಮಂಗಳೂರು, ಜೂ.13: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ ಇಬ್ಬರು ಆರೋಪಿ ಗಳಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್‌ಟಿಎಸ್‌ಸಿ-2 ನ್ಯಾಯಾಲಯವು 20 ವರ್ಷಗಳ ಸಜೆ ವಿಧಿಸಿ ತೀರ್ಪು ನೀಡಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಕಾವಳಗದ್ದೆಯ ಸಚಿನ್ ಸಂತೋಷ್ ನಾಯ್ಕ್ (22) ಮತ್ತು ಹಟ್ಟಿಕೆರೆಯ ಪ್ರವೀಣ್ ಜಯಪಾಲ್ ನಾಯ್ಕ್ (33) ಶಿಕ್ಷೆಗೊಳಗಾದವರು.

ಪಿಯುಸಿ ವಿದ್ಯಾರ್ಥಿನಿ 2022ರ ಎ.12ರ ಮಧ್ಯಾಹ್ನ 12.45ಕ್ಕೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಹರಿಯಾಣಕ್ಕೆ ಹೋಗುವ ಟಿಕೆಟ್ ಪಡೆಯಲೆಂದು ನಿಂತಿದ್ದಾಗ ಅಲ್ಲಿಗೆ ಬಂದ ಆರೋಪಿಗಳು ಆಕೆಯ ಬಳಿ ತೆರಳಿ ಟಿಕೆಟ್ ಮಾಡಿಸಿಕೊಡುವುದಾಗಿ ಹೇಳಿದ್ದರು. ಬಳಿಕ ಟಿಕೆಟ್ ಕೌಂಟರ್‌ನಲ್ಲಿ ಟಿಕೆಟ್ ಪಡೆಯುವಂತೆ ನಟಿಸಿ ‘ಇಲ್ಲಿ ಟಿಕೆಟ್ ಸಿಗುವುದಿಲ್ಲ. ಕಾರವಾರದಲ್ಲಿ ಟಿಕೆಟ್ ತೆಗೆಸಿಕೊಡುತ್ತೇವೆ. ಅಲ್ಲಿಗೆ ಹೋಗೋಣ’ ಎಂದು ನಂಬಿಸಿ ಆಕೆಯನ್ನು ರೈಲಿನಲ್ಲಿ ಕಾರವಾರಕ್ಕೆ ಕರೆದೊಯ್ದಿದ್ದರು ಎಂದು ಆರೋಪಿಸಲಾಗಿತ್ತು.

ಅಂಕೋಲಾದಲ್ಲಿ ಪ್ರವೀಣ್ ಜಯಪಾಲ್ ನಾಯ್ಕ್‌ನ ಮನೆಗೆ ಮತ್ತು ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಎ.14ರಂದು ಮಂಗಳೂರು ರೈಲು ನಿಲ್ದಾಣಕ್ಕೆ ಕರೆತಂದು ಬಿಟ್ಟಿದ್ದರು. ಬಾಲಕಿಯನ್ನು ಗಮನಿಸಿದ ರೈಲ್ವೆ ಪೊಲೀಸರಿಗೆ ಸಂಶಯ ಬಂದು ವಿಚಾರಿಸಿದಾಗ ಆಕೆ ನಡೆದ ಘಟನೆಯನ್ನು ವಿವರಿಸಿದ್ದರು. ಪ್ರಕರಣ ದಾಖಲಿಸಿಕೊಂಡ ರೈಲ್ವೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ರೈಲ್ವೆ ಪೊಲೀಸ್ ಇನ್‌ಸ್ಪೆಕ್ಟರ್ ಮೋಹನ್ ಕೊಟ್ಟಾರಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್‌ಟಿಎಸ್‌ಸಿ-2 ನ್ಯಾಯಾಧೀಶ ಕೆ.ಎಂ.ರಾಧಾಕೃಷ್ಣ ಜೂ.12ರಂದು ಅಪರಾಧಿಗಳಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಪೋಕ್ಸೋ ಕಾಯಿದೆ ಕಲಂ 6ರಂತೆ ಇಬ್ಬರಿಗೂ ತಲಾ 20 ವರ್ಷ ಕಠಿಣ ಸಜೆ, 50,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 1 ವರ್ಷ ಕಠಿಣ ಸಜೆ, ಭಾರತೀಯ ದಂಡ ಸಂಹಿತೆ ಕಲಂ 366ರಡಿ ತಲಾ 10 ವರ್ಷ ಕಠಿಣ ಸಜೆ, 30,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿಯಾಗಿ 6 ತಿಂಗಳ ಕಠಿಣ ಸಜೆ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

ಅಲ್ಲದೆ ಸಂತ್ರಸ್ತೆಗೆ 5 ಲ.ರೂ. ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಆ ಹಣದಲ್ಲಿ 1 ಲ.ರೂ.ಗಳನ್ನು ತಕ್ಷಣ ಆಕೆಯ ವಿದ್ಯಾಭ್ಯಾಸಕ್ಕೆ ಒದಗಿಸಬೇಕು. ಉಳಿದ ಮೊತ್ತವನ್ನು ಠೇವಣಿಯಾಗಿಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದರು.

share
Next Story
X