ಜೂ.14ರಂದು ಕೊರಗರಿಗೆ ಭೂಮಿ ನೀಡುವಂತೆ ಆಗ್ರಹಿಸಿ ಧರಣಿ

ಕುಂದಾಪುರ: ಉಡುಪಿ ಜಿಲ್ಲಾ ಕೊರಗ ಸಂಘಟನೆಗಳು ಹಾಗೂ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಉಡುಪಿ ಜಿಲ್ಲಾ ಸಂಘಟನಾ ಸಮಿತಿಯ ನೇತೃತ್ವದಲ್ಲಿ ಡಾ.ಮಹಮ್ಮದ್ ಫೀರ್ ವರದಿ ಪ್ರಕಾರ ಪ್ರತಿ ಕೊರಗ ಕುಟುಂಬಗಳಿಗೆ 2.50 ಎಕರೆ ಭೂಮಿ ನೀಡಲು ಮತ್ತು ಪಡುಕೋಣೆ ಕೊರಗರ ಭೂಮಿಗೆ ಸಂಬಂಧಿಸಿದ ವಿವಾದ ಬಗೆಹರಿಸಿ ನ್ಯಾಯ ನೀಡಲು ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಜೂ.14ರಂದು ನಾಡಾ ಗ್ರಾಮ ಪಂಚಾಯತ್ ಎದುರು ಹಮ್ಮಿಕೊಳ್ಳಲಾಗಿದೆ.
ಧರಣಿಯಲ್ಲಿ ಕೊರಗ ಸಮುದಾಯದ ಮುಖಂಡರಾದ ವಿ.ಗಣೇಶ ಕೊರಗ, ಲಕ್ಷ್ಮಣ ಬೈಂದೂರು, ಮಹಬಲ ಕೋಟ, ಗೌರಿ ಕೆಂಜೂರು ಹಾಗೂ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ರಾಜ್ಯ ಮುಖಂಡರಾದ ಡಾ.ಎಸ್. ವೈ. ಗುರುಶಾಂತ, ಡಾಕ್ಟರ್ ಕೃಷ್ಣಪ್ಪಕೊಂಚಾಡಿ ಭಾಗವಹಿಸಲಿರುವರು ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಜಿಲ್ಲಾ ಸಂಚಾಲಕ ಶ್ರೀಧರ ನಾಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





