ಆದಿವಾಸಿ ಆರೋಗ್ಯ ಕಾರ್ಯಕರ್ತೆ, ಸಂಯೋಜಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಜೂ.13: ಪ್ರಸಕ್ತ ಸಾಲಿನಲ್ಲಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಆದಿವಾಸಿ ಆರೋಗ್ಯ ಸಂಯೋಜಕರು ಮತ್ತು ಕುಂದಾಪುರ ಹಾಗೂ ಕಾರ್ಕಳ ತಾಲೂಕುಗಳಲ್ಲಿ ಆದಿವಾಸಿ ಆರೋಗ್ಯ ಕಾರ್ಯಕರ್ತೆಯರ ತಲಾ 1 ಹುದ್ದೆಗೆ ನೇಮಕಾತಿಗೆ ನರ್ಸಿಂಗ್ ತರಬೇತಿ ಪಡೆದ ಅರ್ಹ ಬುಡಕಟ್ಟು ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವ ಯಾಧಿಕಾರಿಗಳ ಕಚೇರಿ, ಐಟಿಡಿಪಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820- 2574814ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story