Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಲ್ಪಸಂಖ್ಯಾತರ ನಿಗಮದಲ್ಲಿ...

ಅಲ್ಪಸಂಖ್ಯಾತರ ನಿಗಮದಲ್ಲಿ ಮಧ್ಯವರ್ತಿಗಳಿಗೆ ಕಡಿವಾಣ ಹಾಕಲು ಸಚಿವ ಝಮೀರ್ ಅಹ್ಮದ್ ಸೂಚನೆ

'ವಕ್ಫ್ ಆಸ್ತಿ ರಕ್ಷಣೆಗೆ ಕಾರ್ಯಪಡೆ ರಚನೆ'

13 Jun 2023 9:30 PM IST
share
ಅಲ್ಪಸಂಖ್ಯಾತರ ನಿಗಮದಲ್ಲಿ ಮಧ್ಯವರ್ತಿಗಳಿಗೆ ಕಡಿವಾಣ ಹಾಕಲು ಸಚಿವ ಝಮೀರ್ ಅಹ್ಮದ್ ಸೂಚನೆ
'ವಕ್ಫ್ ಆಸ್ತಿ ರಕ್ಷಣೆಗೆ ಕಾರ್ಯಪಡೆ ರಚನೆ'

ಬೆಂಗಳೂರು, ಜೂ.13: ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ, ನಿಗಮದ ಯೋಜನೆಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಿ, ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕ ವ್ಯವಸ್ಥೆ ಅಳವಡಿಸಿಕೊಳ್ಳುವಂತೆ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ಸೂಚನೆ ನೀಡಿದ್ದಾರೆ.

ಮಂಗಳವಾರ ಶೇಷಾದ್ರಿಪುರದಲ್ಲಿರುವ ಕೆಎಂಡಿಸಿ ಭವನದ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿದ ಅವರು, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಲ್ಲಿ ಹೆಸರಿಗೆ ಮಾತ್ರ ಯೋಜನೆಗಳು ಇರಬಾರದು, ರಾಜ್ಯವ್ಯಾಪಿ ಪ್ರಚಾರ ಪಡಿಸಿ ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂದು ತಾಕೀತು ಮಾಡಿದರು.

ಅಲ್ಪಸಂಖ್ಯಾತ ಇಲಾಖೆ ಹಾಗೂ ಅಭಿವೃದ್ಧಿ ನಿಗಮದಲ್ಲಿ ಲಭ್ಯ ಇರುವ ಯೋಜನೆಗಳ ಬಗ್ಗೆ ಸಮುದಾಯಕ್ಕೆ ಮಾಹಿತಿ ನೀಡಲು ಬೃಹತ್ ಮಟ್ಟದ ಪ್ರಚಾರ ಅಭಿಯಾನ ಆರಂಭಿಸಬೇಕು. ನಿಗಮದ ವತಿಯಿಂದ ನೀಡಲಾಗುವ ಟ್ಯಾಕ್ಸಿ, ಆಟೋ, ಸರಕು ಸಾಗಣೆ ವಾಹನ ಸಾಲ ಯೋಜನೆಯಲ್ಲಿ ಫಲಾನುಭವಿಗಳಿಂದ ಶೇ.10ರಷ್ಟು ವಂತಿಗೆ ಪಡೆಯುವುದು ಕಡ್ಡಾಯಗೊಳಿಸಬೇಕು. ನಿಗಮವೆ ಬ್ಯಾಂಕುಗಳ ಜತೆ ಸಮನ್ವಯ ಸಾಧಿಸಿ ನಮ್ಮ ಮೂಲಕವೆ  ಏಕ ಗವಾಕ್ಷಿ (ಸಿಂಗಲ್ ವಿಂಡೋ)ಅಡಿ ಸಾಲ ಸೌಲಭ್ಯ ಸಿಗುವಂತೆ ಮಾಡಬೇಕು ಎಂದು ಅವರು ನಿರ್ದೇಶನ ನೀಡಿದರು.

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಾಲ ವಸೂಲಾತಿ ಪ್ರಮಾಣ ಶೇ.15ರಷ್ಟು ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಝಮೀರ್ ಅಹ್ಮದ್, ಈ ವರ್ಷ ಶೇ.50ರಷ್ಟು ವಸೂಲಾತಿ ಆಗಬೇಕು. 760 ಕೋಟಿ ರೂ. ಶಿಕ್ಷಣ ಸಾಲ ವಸೂಲಾತಿಗೆ ಬಾಕಿ ಇದ್ದು ಒಂದು ಬಾರಿಗೆ ಇತ್ಯರ್ಥ(ಒನ್ ಟೈಮ್ ಸೆಟಲ್ ಮೆಂಟ್)ಯೋಜನೆ ಜಾರಿಗೊಳಿಸಿ ಬಡ್ಡಿ ಮನ್ನಾ ಮಾಡಿ ಸಾಲ ವಸೂಲಿ ಮಾಡಲು ಸೂಚಿಸಿದರು.

ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರು ಹೊಸ ಸ್ಟಾರ್ಟ್ ಅಪ್ ಗೆ ಮುಂದಾದರೆ ಸಬ್ಸಿಡಿ ಸಹಿತ ಹಣಕಾಸು ನೆರವು ಕೊಡುವ ಯೋಜನೆ ಹೆಚ್ಚು ಮಂದಿಗೆ ತಲುಪುವಂತೆ ಮಾಡಿ. ಕೋಮುಗಲಭೆಯಿಂದ ಸಂತ್ರಸ್ತರಾಗುವ ಕುಟುಂಬಗಳಿಗೆ ಪುನರ್ ವಸತಿ ಕಲ್ಪಿಸುವ ಮನೆಯ ಮಾಳಿಗೆ ಯೋಜನೆ ಅನುದಾನ ಬಳಕೆ ಮಾಡಲು ಅವರು ಸೂಚನೆ ನೀಡಿದರು.

ಅಭಿವೃದ್ಧಿ ನಿಗಮದ ವತಿಯಿಂದ ಬಡವರು ಮನೆ ನಿರ್ಮಿಸಿಕೊಳ್ಳಲು ಕೊಳೆಗೇರಿ ಮಂಡಳಿ ಗೆ ನೀಡಿರುವ 31 ಕೋಟಿ ರೂ.ಎಷ್ಟರ ಮಟ್ಟಿಗೆ ಪ್ರಯೋಜನವಾಗಿದೆ ಎಂಬುದರ ಕುರಿತು ಪ್ರಗತಿಯ ವಿವರ ನೀಡುವಂತೆ ಸೂಚಿಸಿ ಈ ಯೋಜನೆಯ ಅಗತ್ಯವಿದ್ದು  ಹೊಸ ಪ್ರಸ್ತಾವ ಸಿದ್ದಪಡಿಸಿ. ನಿಗಮದ ಯೋಜನೆಗಳ ಜಾರಿಗೆ ಬಜೆಟ್ ನಲ್ಲಿ ಅಗತ್ಯವಾದ ಅನುದಾನದ ಬಗ್ಗೆ ಪ್ರಸ್ತಾವ ಸಿದ್ಧಪಡಿಸುವಂತೆ ಅವರು ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ವೃತ್ತಿ ಪರ ಕೋರ್ಸ್ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ಸಮುದಾಯದ 6500 ವಿದ್ಯಾರ್ಥಿಗಳಿಗೆ 10 ಕೋಟಿ ರೂ. ಸಾಲ ನೀಡುವ ಅರಿವು ಯೋಜನೆಯ ಚೆಕ್ ಪರೀಕ್ಷಾ ಪ್ರಾಧಿಕಾರಕ್ಕೆ ಸಚಿವ ಝಮೀರ್ ಅಹ್ಮದ್ ಹಸ್ತಾಂತರ ಮಾಡಿದರು.

ಬಿಜೆಪಿ ಸರಕಾರದ ಅವಧಿಯಲ್ಲಿ ಸ್ಥಗಿತಗೊಂಡಿದ್ದ ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ನೆರವು ನೀಡುವ 10 ಕೋಟಿ ರೂ.ಯೋಜನೆ ಹಾಗೂ 5 ರಿಂದ 20 ಲಕ್ಷ ರೂ.ಗಳವರೆಗೆ ಸ್ವ ಉದ್ದಿಮೆ ಸ್ಥಾಪಿಸಲು ನೀಡುವ ನೇರ ಸಾಲ ಯೋಜನೆಗೂ ಚಾಲನೆ ನೀಡಿದರು. ಇದಕ್ಕೂ ಮುನ್ನ 12 ಟ್ಯಾಕ್ಸಿ, 12 ಆಟೋ, 4 ಗೂಡ್ಸ್ ಆಟೋ ಗಳನ್ನು ಫಲಾನುಭವಿಗಳಿಗೆ ಹಸ್ತಾಂತರ ಮಾಡಿದರು.

ಸಂತಸ: ಸಲ್ಮಾನ್ ಎಂಬ ಫಲಾನುಭವಿ ಮಾತನಾಡಿ, ಈ ಮುಂಚೆ ಬಾಡಿಗೆ ಆಟೋ ಓಡಿಸಿ ಜೀವನ ಸಾಗಿಸುತ್ತಿದ್ದೆ. ಇದೀಗ ನಿಗಮ ನನ್ನ ನೆರವಿಗೆ ಬಂದಿದ್ದು 20 ಸಾವಿರ ರೂ. ಪಡೆದು  9.20 ಲಕ್ಷ ರೂ.ಮೌಲ್ಯದ ಟ್ಯಾಕ್ಸಿ ಖರೀದಿಗೆ 2.50 ಲಕ್ಷ ರೂ.ಸಬ್ಸಿಡಿ ನೀಡಿದೆ. ಇದರಿಂದ ನನ್ನ ಬದುಕಿನ ಹಾದಿ ಬದಲಾಗಿದೆ ಎಂದು ಸಂತಸ ವ್ಯಕ್ತ ಪಡಿಸಿದರು.

ಮತ್ತೊಬ್ಬ ಫಲಾನುಭವಿ ಮಾರ್ವಿನ್ ಮಾತನಾಡಿ, 3.65 ಲಕ್ಷ ರೂ.ಮೊತ್ತದ ಆಟೊ 1 ಲಕ್ಷ ರೂ.ಸಬ್ಸಿಡಿ ಯೊಂದಿಗೆ ಬಂದಿದೆ. ನನಗೆ ಖುಷಿ ಆಗಿದೆ. ಬದುಕು ಕಟ್ಟಿಕೊಳ್ಳುವಂತಾಗಿದೆ ಎಂದು ಹೇಳಿದರು. ಈ ವೇಳೆ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಇಲಾಖೆಯ ಕಾರ್ಯದರ್ಶಿ ಮನೋಜ್ ಜೈನ್, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮುಹಮ್ಮದ್ ನಝೀರ್ ಉಪಸ್ಥಿತರಿದ್ದರು.

ವಕ್ಫ್ ಆಸ್ತಿ ರಕ್ಷಣೆಗೆ ಕಾರ್ಯಪಡೆ ರಚನೆ: ‘ವಕ್ಫ್ ಆಸ್ತಿ ರಕ್ಷಣೆಗೆ ಕಾರ್ಯಪಡೆ ರಚಿಸಿ ಎಲ್ಲ ಆಸ್ತಿಗಳಿಗೆ ಕಾಪೌಂಡ್ ಹಾಕಲು ಕ್ರಮ ಕೈಗೊಳ್ಳಲಾಗುವುದು. ವಕ್ಫ್ ಆಸ್ತಿ ಸಂರಕ್ಷಣೆ ಹಾಗೂ ಸ್ಥಳೀಯ ಮಟ್ಟದಲ್ಲೆ ಕುಂದು ಕೊರತೆ ಪರಿಹಾರಕ್ಕೆ ವಿಭಾಗೀಯ ಮಟ್ಟದ ಕಚೇರಿ ಸ್ಥಾಪಿಸಲಾಗುವುದು. ವಕ್ಫ್ ಆಸ್ತಿ ಸಮುದಾಯದ ಅಭಿವೃದ್ಧಿಗೆ ಬಳಕೆ ಆಗಬೇಕು. ಅದರಲ್ಲೂ ಶಾಲೆ ಹಾಗೂ ಆಸ್ಪತ್ರೆಗೆ ಹೆಚ್ಚು ಆದ್ಯತೆ ನೀಡಲಾಗುವುದು’

-ಝಮೀರ್ ಅಹ್ಮದ್ ಖಾನ್, ಅಲ್ಪಸಂಖ್ಯಾತರ ಕಲ್ಯಾಣ ಸಚಿವ 

share
Next Story
X