Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟ್ವಿಟರ್‌ ಮುಚ್ಚುವಂತೆ ಕೇಂದ್ರ ಸರಕಾರ...

ಟ್ವಿಟರ್‌ ಮುಚ್ಚುವಂತೆ ಕೇಂದ್ರ ಸರಕಾರ ಬೆದರಿಕೆಯೊಡ್ಡಿದ್ದ ಪ್ರಕರಣ: ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳು ಹೇಳಿದ್ದೇನು?

13 Jun 2023 9:38 PM IST
share
ಟ್ವಿಟರ್‌ ಮುಚ್ಚುವಂತೆ ಕೇಂದ್ರ ಸರಕಾರ ಬೆದರಿಕೆಯೊಡ್ಡಿದ್ದ ಪ್ರಕರಣ: ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳು ಹೇಳಿದ್ದೇನು?

ಹೊಸದಿಲ್ಲಿ: ತನ್ನ ಸೂಚನೆಗಳನ್ನು ಪಾಲಿಸಲು ವಿಫಲಗೊಂಡರೆ ದೇಶದಲ್ಲಿ ಟ್ವಿಟರ್ ನನ್ನು ಮುಚ್ಚಿಸುವುದಾಗಿ ಸರಕಾರವು ಬೆದರಿಕೆಗಳನ್ನೊಡ್ಡಿತ್ತು ಎಂಬ ಕಂಪನಿಯ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಜಾಕ್ ಡಾರ್ಸಿಯವರ ಹೇಳಿಕೆಗಳು ಭಾರತದಲ್ಲಿ ಹೇಗೆ ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲಾಗುತ್ತಿದೆ ಎನ್ನುವುದನ್ನು ತೋರಿಸಿವೆ ಎಂದು ಪ್ರತಿಪಕ್ಷ ನಾಯಕರು ಹೇಳಿದ್ದಾರೆ.

ಸೋಮವಾರ ಯೂಟ್ಯೂಬ್ ಚಾನೆಲ್ ಬ್ರೇಕಿಂಗ್ ಪಾಯಿಂಟ್ಸ್ ಗೆ ನೀಡಿದ್ದ ಸಂದರ್ಶನದಲ್ಲಿ, ವಿದೇಶಿ ಸರಕಾರಗಳು ತಮ್ಮ ಆದೇಶಗಳನ್ನು ಪಾಲಿಸುವಂತೆ ಟ್ವಿಟರ್ ಮೇಲೆ ಒತ್ತಡ ಹೇರಿದ್ದ ನಿದರ್ಶನಗಳನ್ನು ನೀಡುವಂತೆ ಸಂದರ್ಶಕರು ಕೋರಿದಾಗಿ ಕಂಪನಿಯ ಸಹಸ್ಥಾಪಕರೂ ಆದ ಡಾರ್ಸಿ ಈ ಹೇಳಿಕೆಯನ್ನು ನೀಡಿದ್ದರು.

ಕೃಷಿ ಕಾಯ್ದೆಗಳ ವಿರುದ್ಧ ರೈತರ ಸುದೀರ್ಘ ಪ್ರತಿಭಟನೆ ಸಂದರ್ಭದಲ್ಲಿ ತನ್ನನ್ನು ಟೀಕಿಸುತ್ತಿದ್ದ ಪತ್ರಕರ್ತರ ಖಾತೆಗಳನ್ನು ನಿರ್ಬಂಧಿಸುವಂತೆ ಸರಕಾರವು ಹಲವು ಮನವಿಗಳನ್ನು ಮಾಡಿಕೊಂಡಿತ್ತು. ತನ್ನ ಸೂಚನೆಗಳನ್ನು ಪಾಲಿಸದಿದ್ದರೆ ಟ್ವಿಟರ್ ನನ್ನು ಮುಚ್ಚಿಸುವುದಾಗಿ ಮತ್ತು ಅದರ ಸಿಬ್ಬಂದಿಗಳ ಮನೆಗಳ ಮೇಲೆ ದಾಳಿ ನಡೆಸುವುದಾಗಿ ಸರಕಾರವು ಬೆದರಿಕೆಯೊಡ್ಡಿತ್ತು ಎಂದು ಡಾರ್ಸಿ ಹೇಳಿದ್ದರು.

ಕೇಂದ್ರ ವಿದ್ಯುನ್ಮಾನ ಮತ್ತು ತಂತ್ರಜ್ಞಾನ ರಾಜ್ಯಸಚಿವ ರಾಜೀವ್ ಚಂದ್ರಶೇಖರ್ ಅವರು ಡಾರ್ಸಿಯವರ ಆರೋಪಗಳನ್ನು ಸಂಪೂರ್ಣ ಸುಳ್ಳು ಎಂದು ತಳ್ಳಿಹಾಕಿದ್ದಾರೆ.

ಆದರೆ ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರೀನಾಠೆ ಅವರು,ದೇಶದ ರೈತರು ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರು ಅವರ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದರು. ಸತ್ಯವು ತನ್ನದೇ ಆದ ವಿಶೇಷವನ್ನು ಹೊಂದಿದೆ. ಅದನ್ನು ನಿಗ್ರಹಿಸಲು ನೀವೂ ಪ್ರಯತ್ನಿಸಿದಷ್ಟೂ ಹೆಚ್ಚು ಪ್ರಖರವಾಗಿ ಅದು ತೆರೆದುಕೊಳ್ಳುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಡಾರ್ಸಿ ಹೇಳಿಕೆಗಳಿಗೆ ಸಂಬಂಧಿಸಿದಂತೆ ಇತರ ಪ್ರತಿಪಕ್ಷ ನಾಯಕರೂ ಸರಕಾರವನ್ನು ಟೀಕಿಸಿದ್ದಾರೆ. ಡಾರ್ಸಿಯವರ ಹೇಳಿಕೆಗಳು ಭಾರತದಲ್ಲಿ ಹೇಗೆ ಪ್ರಜಾಪ್ರಭುತವನ್ನು ದಮನಿಸಲಾಗುತ್ತಿದೆ ಎನ್ನುವುದನ್ನು ತೋರಿಸುತ್ತಿವೆ ಎಂದು ಶಿವಸೇನೆ (ಠಾಕ್ರೆ ಬಣ) ಸಂಸದ ಸಂಜಯ ರಾವುತ್ ಹೇಳಿದ್ದರೆ,ಭಾರತ ಸರಕಾರವು ಟ್ವಿಟರ್ ಮೇಲೆ ಒತ್ತಡವನ್ನು ಹೇರುತ್ತಿರುವ ಕುರಿತು ಡಾರ್ಸಿ ಸುಳ್ಳು ಹೇಳಲು ಯಾವುದೇ ಕಾರಣವಿಲ್ಲ ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಹೇಳಿದ್ದಾರೆ.

‘ವಾಕ್ ಸ್ವಾತಂತ್ರವಿದೆ,ಆದರೆ ಮಾತನಾಡಿದ ಬಳಿಕ ಸ್ವಾತಂತ್ರವನ್ನು ನಾನು ಖಚಿತ ಪಡಿಸುವುದಿಲ್ಲ’ಎಂಬ ಉಗಾಂಡಾದ ಮಾಜಿ ಅಧ್ಯಕ್ಷ ಇದಿ ಅಮೀನ್ರ ಹೇಳಿಕೆಯನ್ನು ಪ್ರಸ್ತಾಪಿಸಿದ ಟಿಎಂಸಿ,ಇದನ್ನು ಮೋದಿಯವರು ತನ್ನ ಮಾರ್ಗದರ್ಶಿ ನೀತಿಗಳಲ್ಲಿ ಒಂದಾಗಿಸಿಕೊಂಡಿದ್ದಾರೆ ಎಂದು ಕುಟುಕಿದ್ದರೆ,ಡಾರ್ಸಿಯವರ ಆರೋಪಗಳು ಬಿಜೆಪಿ ದೇಶದಲ್ಲಿ ಪ್ರತಿಯೊಂದೂ ಭಿನ್ನಾಭಿಪ್ರಾಯದ ಧ್ವನಿಯನ್ನು ಹತ್ತಿಕ್ಕಲು ಹೇಗೆ ಪ್ರಯತ್ನಿಸಿದೆ ಎನ್ನುವುದನ್ನು ತೋರಿಸಿವೆ ಎಂದು ಆಪ್ ಸಂಸದ ರಾಘವ ಛಡ್ಡಾ ಹೇಳಿದ್ದಾರೆ.

share
Next Story
X