ಕೆಎಂಎಫ್‍ನೊಂದಿಗೆ ಅಮೂಲ್ ವಿಲೀನವಿಲ್ಲ: ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟನೆ

ಬೆಂಗಳೂರು, ಜೂ.13: ತೀವ್ರ ಚರ್ಚೆಗೆ ಕಾರಣವಾಗಿದ್ದ ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳನ್ನು ಪರಸ್ಪರ ವಿಲೀನಗೊಳಿಸುವ ಪ್ರಸ್ತಾಪ ಯಾವ ಕಾರಣಕ್ಕೂ ಅನುಷ್ಠಾನಗೊಳಿಸುವುದಿಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳನ್ನು ಪರಸ್ಪರ ವಿಲೀನಗೊಳಿಸುವುದು ಅಸಾಧ್ಯದ ಕೆಲಸ. ಯಾವ ಕಾರಣಕ್ಕೂ ರಾಜ್ಯ ಸರಕಾರದ ಈ ವಿಲೀನದ ಪರವಾಗಿಲ್ಲ. ಬದಲಿಗೆ ಕೆಎಂಎಫ್ ಸಂಸ್ಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸಿ ರೈತರಿಗೆ ಮತ್ತಷ್ಟು ಶಕ್ತಿ ನೀಡುವುದು ನಮ್ಮ ಉದ್ದೇಶ ಎಂದು ನುಡಿದರು.
ಇನ್ನೂ, ರೈತರಿಗೆ ಪಾವತಿಸಬೇಕಿರುವ ಹಾಲಿನ ಪ್ರೋತ್ಸಾಹಧನ ಬಾಕಿ ಇದ್ದು, ಶೀಘ್ರವಾಗಿ ಈ ಬಾಕಿಯನ್ನು ನೀಡುತ್ತೇವೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.
Next Story





