Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ: ಅರಣ್ಯ ಇಲಾಖೆ ಇರಿಸಿದ್ದ...

ಕುಂದಾಪುರ: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ

14 Jun 2023 11:09 AM IST
share
ಕುಂದಾಪುರ: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಗ್ರಾಮಪಂಚಾಯತ್ ವ್ಯಾಪ್ತಿಯ ಮಾಲಾಡಿ ಎಂಬಲ್ಲಿನ ಶ್ರೀ ನಂದಿಕೇಶ್ವರ ದೇವಸ್ಥಾನ ಹಾಗೂ ಅಂಗನವಾಡಿ, ಶಾಲೆ ಹಿಂಭಾಗದ ಹಾಡಿಯಲ್ಲಿ ಅರಣ್ಯ ಇಲಾಖೆಯಿಟ್ಟ ಬೋನಿನಲ್ಲಿ ಗಂಡು ಚಿರತೆ ಸೆರೆಯಾಗಿದ್ದು ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ. ಕಳೆದ 5 ವರ್ಷದಲ್ಲಿ ಈ ಪ್ರದೇಶದಲ್ಲಿಟ್ಟ ಬೋನಿಗೆ ಬಿದ್ದ 8ನೇ ಚಿರತೆ ಇದಾಗಿದೆ.

ಈ ಭಾಗದಲ್ಲಿ ಆಗಾಗ್ಗೆ ಚಿರತೆ ಪ್ರತ್ಯಕ್ಷವಾಗುತ್ತಿದ್ದು ಸಮೀಪದ ಶಾಲೆಗೆ ಬರುವ ವಿದ್ಯಾರ್ಥಿಗಳು ಕೂಡ ಚಿರತೆ ಕಾಟದಿಂದ ಭಯಭೀತರಾಗಿದ್ದಾರೆ.

ಕಳೆದ ವಾರವಷ್ಟೇ ಇಲ್ಲಿಗೆ ಸಮೀಪದ ಕೆಲವು ಮನೆಗಳ ಅಂಗಳಕ್ಕೆ ಬಂದ ಚಿರತೆ ನಾಯಿಗಳನ್ನು ಎಳೆದೊಯ್ಯಲು ಪ್ರಯತ್ನಿಸಿತ್ತು. ನಿರಂತರ ಈ ಭಾಗದಲ್ಲಿ ಚಿರತೆ ಕಾಟವಿದ್ದರಿಂದ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು, ಅರಣ್ಯ ಇಲಾಖೆ ಬೋನ್ ಇಟ್ಟು ಚಿರತೆ ಹಿಡಿಯುವ ಕಾರ್ಯಾಚರಣೆ ನಡೆಸಲು ಮುಂದಾಗಿತ್ತು.

ಕೆಲವು ದಿನಗಳ ಹಿಂದೆ ಬೋನು ಇಡಲಾಗಿದ್ದು ಅಂದಾಜು 4-5 ವರ್ಷ ಪ್ರಾಯದ ಗಂಡು ಚಿರತೆ ಸೆರೆಯಾಗಿದೆ. ಸ್ಥಳೀಯ ನಿವಾಸಿಗಳಾದ ಸತೀಶ್ ದೇವಾಡಿಗ ಮತ್ತು ಸುರೇಶ್ ಅವರು ಚಿರತೆ ಸೆರೆ ಕಾರ್ಯಾಚರಣೆಗೆ ಇಲಾಖೆ ಇಟ್ಟ ಬೋನಿಗೆ ನಾಯಿ ಕಟ್ಟಿ ಸಹಕಾರ ನೀಡುತ್ತಿದ್ದರು.

ಕುಂದಾಪುರ ವಲಯ ಅರಣ್ಯಾಧಿಕಾರಿ ಕಿರಣ್ ಬಾಬು, ಉಪವಲಯ ಅರಣ್ಯಾಧಿಕಾರಿ ಉದಯ್, ಗಸ್ತು ಅರಣ್ಯ ಪಾಲಕಿ ಮಾಲತಿ, ಸ್ಥಳೀಯ ಪ್ರಮುಖರಾದ ಗಣಪತಿ ಟಿ. ಶ್ರೀಯಾನ್, ಸುರೇಶ್ ದೇವಾಡಿಗ, ಸತೀಶ್ ದೇವಾಡಿಗ ಮೊದಲಾದವರು ಭೇಟಿ ನೀಡಿದ್ದಾರೆ.

► 5 ವರ್ಷದ ಅಂತರದಲ್ಲಿ 8 ಚಿರತೆ ಸೆರೆ…

ಮಾಲಾಡಿ ಅಸುಪಾಸಿನಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಚಿರತೆಯು ನಾಯಿ, ಜಾನುವಾರು ಸೇರಿದಂತೆ ಸಾಕುಪ್ರಾಣಿಗಳನ್ನು ಹೊತ್ತೊಯ್ದಿದೆ. ಹಾಡುಹಗಲೇ ಕಾಣಿಸಿಕೊಂಡು ಜನರಲ್ಲಿ ಭೀತಿ ಸೃಷ್ಟಿಸಿದೆ. ಈ ಭಾಗದಲ್ಲಿ ಮೊದಲಿಗೆ 2018 ಆಗಸ್ಟ್ ತಿಂಗಳಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿತ್ತು. ಬಳಿಕ 2019 ಅಕ್ಟೋಬರ್ 6, ಡಿ.12, 2019, ಡಿ.24 ,2019 ರಲ್ಲಿ ಹಾಗೂ 2022 ರ ಎಪ್ರಿಲ್ ತಿಂಗಳಿನಲ್ಲಿ, 2022 ಅಕ್ಟೋಬರ್ 2 ರಂದು ಹಾಗೂ 2023 ಮಾ.10ರಂದು ಚಿರತೆ ಬೋನಿಗೆ ಬಿದ್ದಿದೆ. ಈ ವರ್ಷದಲ್ಲಿ ಸೆರೆಯಾದ ಎರಡನೇ ಚಿರತೆ ಇದಾಗಿದ್ದು ತೆಕ್ಕಟ್ಟೆ ಸಮೀಪದ ಮಾಲಾಡಿ ಭಾಗವು ಚಿರತೆಗಳ ಹಾಟ್ ಸ್ಪಾಟ್ ಆಗಿದೆ.

ಚಿರತೆ ಸೆರೆಯಾದ ಮಾಲಾಡಿ ಹಾಡಿ ಬಳಿಯೇ ಸರಕಾರಿ ಶಾಲೆ, ಅಂಗನವಾಡಿ ಹಾಗೂ ದೇವಸ್ಥಾನ ಸೇರಿದಂತೆ ವಸತಿ ಪ್ರದೇಶವಿದೆ. ಆಸುಪಾಸಿನಲ್ಲಿ 50ಕ್ಕೂ ಅಧಿಕ ಮನೆಗಳಿವೆ. ನಿರಂತರವಾಗಿ ಚಿರತೆ ಕಾಟದಿಂದ ಇಲ್ಲಿನ ಜನರು ಆತಂಕಗೊಂಡಿದ್ದಾರೆ.

share
Next Story
X