ಶಿವಮೊಗ್ಗ: ಪ್ರತಿಭಟನೆ ವೇಳೆ ಮೆಸ್ಕಾಂ ಕಚೇರಿಗೆ ಕಲ್ಲು ತೂರಿದ ಬಿಜೆಪಿ ಕಾರ್ಯಕರ್ತ

ಶಿವಮೊಗ್ಗ: ವಿದ್ಯುತ್ ದರ ಏರಿಕೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಈ ವೇಳೆ ಆಕ್ರೋಶಗೊಂಡ ಕಾರ್ಯಕರ್ತನೊಬ್ಬ ಮೆಸ್ಕಾಂ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆಯಿತು.
ಬಿಜೆಪಿ ಕಾರ್ಯಕರ್ತ ಮುರುಗೇಶ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಿದ್ಯುತ್ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗದ ರೈಲ್ವೆ ನಿಲ್ದಾಣದ ಬಳಿ ಇರುವ ಮೆಸ್ಕಾಂ ಕಚೇರಿ ಎದುರು ಜಿಲ್ಲಾ ಬಿಜೆಪಿ ವತಿಯಿಂದ ಇಂದು ಪ್ರತಿಭಟನೆ ಹಮ್ಮಿಕೊಂಡಿದ್ದರು.
ವಿದ್ಯುತ್ ಬೆಲೆ ಏರಿಕೆ ವಿರುದ್ದ ಬಿಜೆಪಿ ನಾಯಕರು ಭಾಷಣ ಮುಗಿಸಿ,ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪೊಲೀಸರು ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರನ್ನು ತಡೆಯಲು ಪೊಲೀಸರು ಯತ್ನಿಸಿದರು.
ಈ ವೇಳೆ ಮೆಸ್ಕಾಂ ಕಚೇರಿಗೆ ಬಿಜೆಪಿ ಕಾರ್ಯಕರ್ತ ಮುರುಗೇಶ್ ಕಲ್ಲು ತೂರಿದ್ದಾನೆ. ಪರಿಣಾಮ ಕಚೇರಿಯ ಕಿಟಕಿಯ ಗಾಜುಗಳು ಪುಡಿಪುಡಿಯಾಗಿವೆ. ಪೊಲೀಸರು ತಕ್ಷಣ ಆತನನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ; ವಿಜಯಪುರ: ರಸ್ತೆ ಅಪಘಾತದಲ್ಲಿ ನವದಂಪತಿ ಸ್ಥಳದಲ್ಲೇ ಮೃತ್ಯು










