Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೀದರಿನ ಶಾಹೀನ್‌ ಶಾಲೆಯ ವಿರುದ್ಧದ...

ಬೀದರಿನ ಶಾಹೀನ್‌ ಶಾಲೆಯ ವಿರುದ್ಧದ ದೇಶದ್ರೋಹ ಪ್ರಕರಣ ವಜಾಗೊಳಿಸಿದ ಹೈಕೋರ್ಟ್‌

14 Jun 2023 2:13 PM IST
share
ಬೀದರಿನ ಶಾಹೀನ್‌ ಶಾಲೆಯ ವಿರುದ್ಧದ ದೇಶದ್ರೋಹ ಪ್ರಕರಣ ವಜಾಗೊಳಿಸಿದ ಹೈಕೋರ್ಟ್‌

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವನ್ನು ಟೀಕಿಸುವ ನಾಟಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಬೀದರಿನ ಶಾಹೀನ್‌ ಶಾಲಾ ಆಡಳಿತದ ವಿರುದ್ಧ ಬೀದರಿನ ಬಲಪಂಥೀಯ ನಾಯಕರೊಬ್ಬರು ದಾಖಲಿಸಿದ್ದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟಿನ ಕಲಬುರಗಿ ಪೀಠವು ಇಂದು ಶಾಲೆಯ ವಿರುದ್ಧದ ದೇಶದ್ರೋಹ ಮತ್ತಿತರ ಆರೋಪಗಳನ್ನು ಕೈಬಿಟ್ಟಿದೆ.

ಶಾಹೀನ್ ಶಾಲಾಡಳಿತದ ಪರ ವಕೀಲ ಅಮಿತ್‌ ಕುಮಾರ್‌ ದೇಶಪಾಂಡೆ ಅವರ ವಾದವನ್ನು ಆಲಿಸಿದ ನಂತರ ಜಸ್ಟಿಸ್‌ ಹೇಮಂತ್‌ ಚಂದನ್‌ಗೌಡರ್‌ ಪ್ರಕರಣವನ್ನು ವಜಾಗೊಳಿಸಿದ್ದಾರೆ.

ಜನವರಿ 2020ರಲ್ಲಿ ಬೀದರಿನ ಶಾಹೀನ್ ಶಾಲೇಯ ನಾಲ್ಕನೇ ತರಗತಿ ವಿದ್ಯಾರ್ಥಿಗಳು ಸಿಎಎ ವಿರೋಧಿ ಕಥಾವಸ್ತು ಹೊಂದಿದ ನಾಟಕ ಪ್ರದರ್ಶಿಸಿದ ನಂತರ ಶಾಲಾಡಳಿತದ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ನಾಟಕದಲ್ಲಿ ಮೋದಿ ವಿರೋಧಿ ಘೋಷಣೆಗಳು ಮತ್ತು ಮತೀಯ ನಿಂದನೆ ಪದಗಳಿದ್ದವು ಎಂದು ಆರೋಪಿಸಲಾಗಿತ್ತು.

ಬೀದರ್‌ ಪೊಲೀಸರು ನೀಲೇಶ್ ರಕ್ಷ್ಯಲ ಎಂಬವರ ದೂರಿನ ಆಧಾರದಲ್ಲಿ ಐಪಿಸಿ ಸೆಕ್ಷನ್‌ 504, 505(2), 124(ಎ), 153(ಎ)  ಅನ್ವಯ ಪ್ರಕರಣ ದಾಖಲಿಸಿದ್ದರು.

ಈ ಆರೋಪಗಳನ್ನು ನಿರಾಕರಿಸಿದ್ದ ಶಾಲೆ, ಪೊಲೀಸರು ಮಕ್ಕಳನ್ನು ʻದೇಶ-ವಿರೋಧಿಗಳುʼ ಎಂಬಂತೆ ಕಾಣುತ್ತಿದ್ದಾರೆ ಹಾಗೂ ಶಾಲೆಗೆ ಪ್ರತಿದಿನ ಭೇಟಿ ನೀಡುತ್ತಿದ್ದಾರೆ ಎಂದು ಹೇಳಿತ್ತು.

ಈ ಪ್ರಕರಣದಲ್ಲಿ ಮಕ್ಕಳನ್ನು ವಿಚಾರಣೆ ನಡೆಸುವ ವೇಳೆ ಸಶಸ್ತ್ರ ಪೊಲೀಸ್‌ ಅಧಿಕಾರಿಗಳ ಉಪಸ್ಥಿತಿಯು ಬಾಲ ನ್ಯಾಯ ಕಾಯಿದೆ 2015 ಮತ್ತು ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆಗಸ್ಟ್‌ 17, 2021 ರಂದು ಕರ್ನಾಟಕ ಹೈಕೋರ್ಟಿನ ಬೆಂಗಳೂರು ಪೀಠ ಹೇಳಿತ್ತು.

ಮಕ್ಕಳ ಹಕ್ಕಿಗೆ ಸಂಬಂಧಿಸಿದಂತೆ ಹೈಕೋರ್ಟಿಗೆ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅರ್ಜಿ ಸಲ್ಲಿಸಿದ್ದರು. ಒಂಬತ್ತು ವರ್ಷದಷ್ಟು ಕಿರಿಯ ಮಕ್ಕಳು ಸೇರಿದಂತೆ 85 ಮಕ್ಕಳು ಪೊಲೀಸ್‌ ವಿಚಾರಣೆ ಎದುರಿಸಬೇಕಾಯಿತು ಇದು ಮಕ್ಕಳ ಮನಃಸ್ಥಿತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಅರ್ಜಿಯಲ್ಲಿ ದೂರಲಾಗಿತ್ತು.

ನ್ಯಾಯಾಲಯದ ತೀರ್ಪಿಗೆ ಶಾಹೀನ್‌ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ ಡಾ. ಅಬ್ದುಲ್‌ ಖದೀರ್‌ ಸಂತಸ ವ್ಯಕ್ತಪಡಿಸಿದ್ದಾರೆ. ಈ ಸವಾಲುಭರಿತ ಸಮಯದಲ್ಲಿ ಶಾಲೆಗೆ ಬೆಂಬಲ ವ್ಯಕ್ತಪಡಿಸಿದ ವಕೀಲರು, ಮಾಧ್ಯಮ ಮತ್ತು ಇತರ ಹಿತೈಷಿಗಳಿಗೆ ಅವರು ಧನ್ಯವಾದ ತಿಳಿಸಿದ್ದಾರೆ.

share
Next Story
X