Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನ ಅಗತ್ಯ ಜಮೀನು ಕೊಟ್ಟರೆ ಪಾವಗಡ ಸೋಲಾರ್...

ಜನ ಅಗತ್ಯ ಜಮೀನು ಕೊಟ್ಟರೆ ಪಾವಗಡ ಸೋಲಾರ್ ಪಾರ್ಕ್ ವಿಸ್ತರಣೆಗೆ ಸಿದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

14 Jun 2023 4:14 PM IST
share
ಜನ ಅಗತ್ಯ ಜಮೀನು ಕೊಟ್ಟರೆ ಪಾವಗಡ ಸೋಲಾರ್ ಪಾರ್ಕ್ ವಿಸ್ತರಣೆಗೆ ಸಿದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಪಾವಗಡ: “ಏಷ್ಯಾದ ಅತಿ ದೊಡ್ಡ ಸೋಲಾರ್ ಪಾರ್ಕ್ ಅನ್ನು ಅಭಿವೃದ್ಧಿ ಪಡಿಸಿ ಅದನ್ನು ವಿಸ್ತರಣೆ ಮಾಡಲು ಸರ್ಕಾರ ಸಿದ್ಧವಾಗಿದ್ದು, ಈ ಭಾಗದ ಜನರು ತಮ್ಮ ಭೂಮಿಯನ್ನು ಸ್ವಯಂ ಪ್ರೇರಿತವಾಗಿ ಬಿಟ್ಟುಕೊಟ್ಟರೆ ಈ ಕುರಿತು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಇಲ್ಲಿನ ಸೋಲಾರ್ ಡೆವಲಪ್ಮೆಂಟ್ ಕಾರ್ಪೊರೇಷನ್ ಗೆ ಭೇಟಿ ನೀಡಿ ಇಂಧನ ಸಚಿವ ಕೆ.ಜೆ. ಜಾರ್ಜ್, ಸ್ಥಳೀಯ ಶಾಸಕ ವೆಂಕಟೇಶ್ ಹಾಗೂ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಡಿಸಿಎಂ, ‘ರಾಜ್ಯದಲ್ಲಿ ಜಮೀನು ನೀಡಿದರೆ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಇಂಗಿತ ವ್ಯಕ್ತಪಡಿಸಿದೆ. ರಾಜ್ಯದ ವಿವಿಧ ಭಾಗಗಳಲ್ಲೂ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಬೇಡಿಕೆ ಇದ್ದು ಆದಷ್ಟು ಬೇಗ ಈ ಭಾಗದ ಜನರು ಚರ್ಚೆ ಮಾಡಿ ತೀರ್ಮಾನ ಮಾಡಬೇಕು’ ಎಂದು ತಿಳಿಸಿದರು. 

‘ಕಳೆದ ಬಾರಿ ಸೋಲಾರ್ ಪಾರ್ಕ್ ಮಾಡುವಾಗ ಜಮೀನು ನೀಡದವರು ನಂತರ ನಮ್ಮ ಜಮೀನು ಬಳಸಿಕೊಳ್ಳಿ ಎಂದು ನನ್ನ ಬಳಿ ಬಂದಿದ್ದರು. ಮನೆ ಬಾಗಿಲಿಗೆ ಬಂದ ಲಕ್ಷ್ಮಿ ಕಳುಹಿಸಿ ಈಗ ಬಂದಿದ್ದೀರಾ ಎಂದು ಬೈದು ಕಳಿಸಿದ್ದೆ ಎಂದರು. 

ಈ ತಾಲೂಕಿನಲ್ಲಿ ರೈತರು ಮುಂದೆ ಬಂದರೆ ಇಲ್ಲಿ ಈ ಪಾರ್ಕ್ ವಿಸ್ತರಣೆ ಮಾಡಬಹುದು. ನಿಮ್ಮ ಜಮೀನು ನಿಮ್ಮ ಹೆಸರಿನಲ್ಲೇ ಇರುತ್ತದೆ. ಈ ಯೋಜನೆಯಲ್ಲಿ ನೀವು ಪಾಲುದಾರರಾಗುತ್ತೀರಿ. ಈಗ ಪ್ರತಿ ಜಮೀನಿಗೆ ನೀಡುತ್ತಿರುವಷ್ಟೇ ಬಾಡಿಗೆ ನೀಡಲಾಗುವುದು. ನೀವು ನಿಮ್ಮ ಬಾಡಿಗೆ ಆಧಾರದ ಮೇಲೆ ಸಾಲ ಸೌಲಭ್ಯವನ್ನು ಪಡೆಯಬಹುದು. ಈ ವಿಚಾರವಾಗಿ ನಾನು ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.

'ಇಂದು ಪಾವಗಡದ ಸೋಲಾರ್ ಪಾರ್ಕ್ ನಲ್ಲಿ 2400 ಮೆ.ವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತಿದೆ. ಇದು ಏಷ್ಯಾದಲ್ಲಿ ಅತಿ ದೊಡ್ಡ ಸೋಲಾರ್ ಪಾರ್ಕ್ ಆಗಿದೆ. ನಿಮ್ಮ ದಾಖಲೆ, ಆಸ್ತಿಗಳು ನಿಮ್ಮ ಬಳಿ ಇದೆ. ಬಾಡಿಗೆ ಸಮಯಕ್ಕೆ ಸರಿಯಾಗಿ ನಿಮಗೆ ತಲುಪುತ್ತಿದೆ. ಈ ಭಾಗದಲ್ಲಿ ಒಣಭೂಮಿ ಜಾಗಗಳನ್ನು ಗುರುತಿಸಿ ನೀವು ನಮಗೆ ಮಾಹಿತಿ ನೀಡಿ. ನಾವು ಕೇಂದ್ರಕ್ಕೆ ಪ್ರಸ್ತಾವನೆ ನೀಡುತ್ತೇವೆ. ಅವರು ಭೂಮಿ ಪರಿಶೀಲಿಸಿ ಸಮ್ಮತಿ ನೀಡಿದರೆ ಪಾರ್ಕ್ ವಿಸ್ತರಣೆ ಕೆಲಸ ಮಾಡುತ್ತೇವೆ' ಎಂದರು.

'ಇಲ್ಲಿನ ಜನ ಮಾತನಾಡಿಕೊಂಡು 5-10 ಸಾವಿರ ಎಕರೆ ಭೂಪ್ರದೇಶ ನೀಡಿದರೆ, ಮತ್ತೆ ಸೋಲಾರ್ ಪಾರ್ಕ್ ಮಾಡೋಣ. ಕಲಬುರ್ಗಿ, ರಾಯಚೂರು ಹಾಗೂ ಬೇರೆ ಜಿಲ್ಲೆಗಳಿಂದಲೂ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಬೇಡಿಕೆ ಬರುತ್ತಿದೆ. ನಾನು ಕೂಡ ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ. ಈ ಭಾಗದಲ್ಲಿ ನಾವೇ ಮುಂದೆ ನಿಂತು ಪಾಣಿ, ಖಾತೆ ಎಲ್ಲಾ ಮಾಡಿಸಿಕೊಟ್ಟಿದ್ದು, ನೀವು ಯಾರಿಗೂ ಲಂಚ ನೀಡುವ ಅಗತ್ಯವಿಲ್ಲ' ಎಂದು ಹೇಳಿದರು. 

'ಈ ಸೋಲಾರ್ ಪಾರ್ಕ್ ನೋಡಲು ತೆರಳುತ್ತಿರುವುದಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ತಿಳಿಸಿದರು. ಆಗ ನಾನು ಕೂಡ ಬರುತ್ತೇನೆ ಎಂದು ಆಗಮಿಸಿದ್ದೇನೆ. ಇಲ್ಲಿ ಸೋಲಾರ್ ಪಾರ್ಕ್ ಉತ್ತಮವಾಗಿ ನಿರ್ವಹಣೆ ಮಾಡಲಾಗಿದೆ. ನೀವು ನಮ್ಮ ಶಾಸಕರನ್ನು ಗೆಲ್ಲಿಸಿ ಶಕ್ತಿ ತುಂಬಿದ್ದು, ನಾವೆಲ್ಲರೂ ಸೇರಿ ಈ ತಾಲೂಕು ಅಭಿವೃದ್ಧಿ ಮಾಡುತ್ತೇವೆ. ನಿಮಗೆ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಶೇ.90ರಷ್ಟು ಕೆಲಸ ಮುಗಿದಿದೆ' ಎಂದು ಅವರು ಆಶ್ವಾಸನೆ ನೀಡಿದರು. 

share
Next Story
X