Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜೂ.15ರಂದು ಉಡುಪಿ ಮಿಷನ್ ಆಸ್ಪತ್ರೆ...

ಜೂ.15ರಂದು ಉಡುಪಿ ಮಿಷನ್ ಆಸ್ಪತ್ರೆ ಶತಮಾನೋತ್ಸವ

ವರ್ಷಾಚರಣೆ ಸಮಾರೋಪ- ಸಿಟಿ ಸ್ಕ್ಯಾನ್ ಘಟಕ ಉದ್ಘಾಟನೆ

14 Jun 2023 6:12 PM IST
share
ಜೂ.15ರಂದು ಉಡುಪಿ ಮಿಷನ್ ಆಸ್ಪತ್ರೆ ಶತಮಾನೋತ್ಸವ
ವರ್ಷಾಚರಣೆ ಸಮಾರೋಪ- ಸಿಟಿ ಸ್ಕ್ಯಾನ್ ಘಟಕ ಉದ್ಘಾಟನೆ

ಉಡುಪಿ, ಜೂ.14: ಉಡುಪಿಯ ಸಿಎಸ್‌ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯ ಶತಮಾನೋತ್ಸವ ವರ್ಷಾಚರಣೆಯ ಸಂಭ್ರಮದ ಸಮಾರೋಪ ಸಮಾರಂಭ ಮತ್ತು ಸಿಟಿ ಸ್ಕ್ಯಾನ್ ಘಟಕದ ಉದ್ಘಾಟನೆಯು ಜೂ.15ರಂದು ನಡೆಯಲಿದೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಸ್ಪತ್ರೆಯ ನಿರ್ದೇಶಕ ಡಾ.ಸುಶೀಲ್ ಜತ್ತನ್ನ, 100 ವರ್ಷವನ್ನು ಪೂರ್ಣಗೊಳಿಸುವ ಸಂದರ್ಭದಲ್ಲಿ ಆಸ್ಪತ್ರೆಯು ತನ್ನ ಹೊಸ ಸಿಟಿ ಸ್ಕ್ಯಾನ್ ಘಟಕವನ್ನು ಸಮರ್ಪಿ ಸಲಿದೆ. 1.65 ಕೋಟಿ ವೆಚ್ಚದ ನೂತನ ಜಿಇ 32 ಸ್ಲೈಸ್ ಆಸ್ಪೈರ್ ಸಿಟಿ ಸ್ಕ್ಯಾನ್ ಯಂತ್ರವನ್ನು ಅಳವಡಿಸಲಾ ಗಿದ್ದು, ಈ ಹೈಟೆಕ್ ಡಯಾಗ್ನೋಸ್ಟಿಕ್ ಸೌಲಭ್ಯವನ್ನು ಆಸ್ಪತ್ರೆಯು ಉಡುಪಿಯ ಜನತೆಗೆ ಕೈಗೆಟಕುವ ದರದಲ್ಲಿ ಒದಗಿಸಲಿದೆ ಎಂದರು.

ಸಮಾರೋಪ ಕಾರ್ಯಕ್ರಮವು ಸಿಎಸ್‌ಐ ಕರ್ನಾಟಕ ದಕ್ಷಿಣ ಧರ್ಮ ಪ್ರಾಂತ್ಯದ ಉಪಾಧ್ಯಕ್ಷ ರೆ.ವಿಕ್ಟರ್ ನೇತೃತ್ವ ದಲ್ಲಿ ಮಧ್ಯಾಹ್ನ 2:30ಕ್ಕೆ ಮಿಷನ್ ಆಸ್ಪತ್ರೆ ಚಾಪೆಲ್‌ನಲ್ಲಿ ಕೃತಜ್ಞತಾ ಸೇವೆಯೊಂದಿಗೆ ಪ್ರಾರಂಭವಾಗಲಿದೆ. ಸಂಜೆ 4 ಗಂಟೆಗೆ ಕ್ರಿಶ್ಚಿಯನ್ ಹೈಸೂಲ್‌ನಿಂದ ಆಸ್ಪತ್ರೆಯವರೆಗೆ ಮೆರವಣಿಗೆ ನಡೆಯ ಲಿದ್ದು, ಬಳಿಕ ಸಂಜೆ 5ಗಂಟೆಗೆ ಲೊಂಬಾರ್ಡ್ ಸ್ಮಾರಕ ಆಸ್ಪತ್ರೆ ಆವರಣದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದೆ.

ಸಿಎಸ್‌ಐ ಕರ್ನಾಟಕ ದಕ್ಷಿಣ ಧರ್ಮಪ್ರಾಂತ್ಯದ ಬಿಷಪ್ ಅತಿ ವಂ. ಹೇಮ ಚಂದ್ರ ಕುಮಾರ್ ನೂತನ ಸಿಟಿ ಸ್ಕ್ಯಾನ್ ಘಟಕವನ್ನು ಉದ್ಘಾಟಿಸಲಿರುವರು. ಬೆಂಗಳೂರಿನ ಎನ್.ಎಚ್.ಷಾ ಮಜುಂದಾರ್ ವೈದ್ಯಕೀಯ ಕೇಂದ್ರದ ವೈದ್ಯಕೀಯ ನಿರ್ದೇಶಕ ಡಾ.ಪೌಲ್ ಸಿ.ಸಾಲಿನ್ಸ್ ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು. ಲೊಂಬಾರ್ಡ್ ಆಸ್ಪತ್ರೆಯ ನಿರ್ದೇಶಕ ಡಾ.ಸುಶಿಲ್ ಜತನ್ನಾ ಅಧ್ಯಕ್ಷತೆ ವಹಿಸಲಿರುವರು.

ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ, ಕರ್ನಾಟಕ ದಕ್ಷಿಣ ಧರ್ಮಪ್ರಾಂತ್ಯದ ಖಜಾಂಚಿ ವಿನ್ಸೆಂಟ್ ಪಾಲಣ್ಣ, ಯುಬಿಎಂಸಿ ಅಧ್ಯಕ್ಷ ವಿಶಾಲ ಶಿರಿ, ವೈಎಂಸಿಎ ರಾಷ್ಟ್ರೀಯ ಮಂಡಳಿ ಉಪಾಧ್ಯಕ್ಷ ನೋಯೆಲ್ ಅಮಣ್ಣ, ಕರ್ನಾಟಕ ದಕ್ಷಿಣ ಧರ್ಮಪ್ರಾಂತ್ಯದ ಕಾರ್ಯದರ್ಶಿ ವಿಲಿಯಂ ಕ್ಯಾರಿ ಮತ್ತು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಭಾಗವಹಿಸ ಲಿರುವರು ಎಂದು ಅವರು ಮಾಹಿತಿ ನೀಡಿದರು.

ಶತಮಾನೋತ್ಸವದ ಶುಭಸಂದರ್ಭದಲ್ಲಿ ಮಿಷನ್ ಆಸ್ಪತ್ರೆ ಈಗ ಮೂರು ಸ್ಪಷ್ಟ ಉದ್ದೇಶಗಳೊಂದಿಗೆ ವಿಸ್ತರಣೆಯ ಹೊಸ ಪಯಣವನ್ನು ಪ್ರಾರಂಭಿಸಲಿದೆ. ಮುಂದಿನ ದಿನಗಳಲ್ಲಿ ಬಂಜೆತನ ಕ್ಲಿನಿಕ್, ನವಜಾತ ಶಿಶುಗಳ ಘಟಕ, ಕಾರ್ಡಿ ಯಾಕ್ ಕ್ಯಾಥ್ ಲ್ಯಾಬ್ ಮತ್ತು ಕ್ಯಾನ್ಸರ್ ಸೇವೆಗಳನ್ನು ತೆರೆಯುವ ಯೋಜನೆ ಗಳೊಂದಿಗೆ ಮಿಷನ್ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಅಭಿವೃದ್ಧಿಪಡಿಸಲಾಗುವುದು. ಮುಂದಿನ ದಿನಗಳಲ್ಲಿ ಉಡುಪಿಯಲ್ಲಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸುವ ಉದ್ದೇಶದಿಂದ ನರ್ಸಿಂಗ್ ಮತ್ತು ಸಂಬಂಧಿತ ವೈದ್ಯಕೀಯ ಶಾಸ್ತ್ರಗಳಲ್ಲಿ ಹೆಚ್ಚಿನ ಕೋರ್ಸ್‌ಗಳೊಂದಿಗೆ ತನ್ನ ಶೈಕ್ಷಣಿಕ ನೆಲೆಯನ್ನು ವಿಸ್ತರಿಸಲಾಗುವುದು ಎಂದರು.

1923ರ ಜೂ.15ರಂದು ರಂದು ಸ್ಥಾಪಿತವಾದ ಲೊಂಬಾರ್ಡ್ ಸ್ಮಾರಕ ಆಸ್ಪತ್ರೆಯು ಕರಾವಳಿ ಕರ್ನಾಟಕದ ಅತ್ಯಂತ ಹಳೆಯ ಆಸ್ಪತ್ರೆಗಳಲ್ಲಿ ಒಂದಾಗಿದೆ ಮತ್ತು ಈ ಪ್ರದೇಶದಲ್ಲಿ ಮೊದಲ ತಾಯಿ-ಮಗು ಕೇಂದ್ರೀಕೃತ ಘಟಕವಾಗಿದೆ.

ಸುದ್ದಿಗೋಷ್ಠಿಯಲ್ಲಿ ಆಸ್ಪತ್ರೆಯ ಹಿರಿಯ ವೈದ್ಯ ಡಾ.ಗಣೇಶ್ ಕಾಮತ್, ಪಿಆರ್‌ಓ ರೋಹಿ ರತ್ನಾಕರ್, ಆಡಳಿತಾಧಿ ಕಾರಿ ಸಿಸ್ಟರ್ ದೀನಾ ಪ್ರಭಾವತಿ, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ.ಸುಜ ಕರ್ಕಡ ಉಪಸ್ಥಿತರಿದ್ದರು.

share
Next Story
X